Month: December 2023

ಮತ್ತೆ ಮುನ್ನಲೆಗೆ ಬಂದ ಕಾಂಗ್ರೆಸ್‌ನಲ್ಲಿ ಮೂವರು ಉಪಮುಖ್ಯಮಂತ್ರಿಗಳನ್ನು ಮಾಡುವ ವಿಚಾರ:  ಸಚಿವ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ದಲಿತ ಮುಖಂಡರುಗಳು ದೆಹಲಿಗೆ  ಪ್ರಯಾಣ!

ಸಂಯುಕ್ತ ಟೈಮ್ಸ್, ಬೆಂಗಳೂರು: ಕಾಂಗ್ರೆಸ್‌ನಲ್ಲಿ ಮೂವರು ಉಪಮುಖ್ಯಮಂತ್ರಿಗಳನ್ನು ಮಾಡುವ ವಿಚಾರ ಮತ್ತೆ ಮುನ್ನಲೆಗೆ ಬಂದಿದೆ. ಲೋಕಸಭಾ ಚುನಾವಣೆಗೂ ಮುನ್ನ ಮೂವರು ಉಪಮುಖ್ಯಮಂತ್ರಿಗಳನ್ನು ನೇಮಕ ಮಾಡುವಂತೆ ಹೈಕಮಾಂಡ್ ಮೇಲೆ ಒತ್ತಡ ಹೇರಲು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ದಲಿತ ಮುಖಂಡರುಗಳು ದೆಹಲಿಗೆ ತೆರಳಿದ್ದಾರೆ…

ದೇವಸ್ಥಾನದ  ಪ್ರಸಾದ ಸೇವಿಸಿ ನೂರಾರು ಜನ ಅಸ್ವಸ್ಥ:  ಓರ್ವ ಮಹಿಳೆ ಸಾವು

ಸಂಯುಕ್ತ ಟೈಮ್ಸ್, ಬೆಂಗಳೂರು: ಹನುಮ ಜಯಂತಿ ಹಿನ್ನೆಲೆ ದೇವಾಲಯಗಳಲ್ಲಿ ಪ್ರಸಾದ ಸೇವಿಸಿ ನೂರಾರು ಜನ ಅಸ್ವಸ್ಥಗೊಂಡಿದ್ದು, ಓರ್ವ ಮಹಿಳೆ ಸಾವನ್ನಪ್ಪಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ನಗರದಲ್ಲಿ ನಡೆದಿದೆ. ಸಿದ್ದಗಂಗಮ್ಮ (65) ಸಾವನ್ನಪ್ಪಿದ ಮಹಿಳೆ. ಹನುಮ ಜಯಂತಿ ಅಂಗವಾಗಿ ಭಾನುವಾರ ಭಕ್ತರು…

ಬ್ರಿಟಿಷ್ ಯುಗದ ಕ್ರಿಮಿನಲ್ ಕಾನೂನುಗಳನ್ನು ಬದಲಿಸುವ 3 ಮಸೂದೆಗಳಿಗೆ ರಾಷ್ಟ್ರಪತಿ ಅಂಕಿತ!

ಸಂಯುಕ್ತ ಟೈಮ್ಸ್, ನವದೆಹಲಿ: ಕಳೆದ ವಾರ ಸಂಸತ್ತು ಅಂಗೀಕರಿಸಿದ ಮೂರು ಹೊಸ ಕ್ರಿಮಿನಲ್ ನ್ಯಾಯ ಮಸೂದೆಗಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಸೋಮವಾರ ಅಂಕಿತ ಹಾಕಿದ್ದಾರೆ. ವಸಾಹತುಶಾಹಿ ಯುಗದ ಭಾರತೀಯ ದಂಡ ಸಂಹಿತೆ, ಕ್ರಿಮಿನಲ್ ಪ್ರಕ್ರಿಯಾ ಸಂಹಿತೆ ಮತ್ತು 1872 ರ ಭಾರತೀಯ ಸಾಕ್ಷಿ…

ಬಿಜೆಪಿಗೆ ಲಿಂಗಾಯತರ ಅಗತ್ಯವಿಲ್ಲದಿದ್ದರೆ, ನಮಗೂ ಬಿಜೆಪಿ ಅಗತ್ಯವಿಲ್ಲ: ಕಾಂಗ್ರೆಸ್’ಗೆ ಬೆಂಬಲ ಘೋಷಿಸಿದ ವೀರಶೈವ-ಲಿಂಗಾಯತ ವೇದಿಕೆ!

ಸಂಯುಕ್ತ ಟೈಮ್ಸ್, ಬೆಂಗಳೂರು: ಬಿಜೆಪಿ ಪಕ್ಷಕ್ಕೆ ಲಿಂಗಾಯತರ ಅಗತ್ಯವಿಲ್ಲದಿದ್ದರೆ, ಲಿಂಗಾಯತರಿಗೂ ಬಿಜೆಪಿ ಬೇಕಿಲ್ಲ ಎಂದು ಹೇಳಿರುವ ವೀರಶೈವ-ಲಿಂಗಾಯತ ವೇದಿಕೆ, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡುವುದಾಗಿ ಘೋಷಣೆ ಮಾಡಿದೆ. ಈ ಸಂಬಂಧ ಪ್ರತಿಕಾ ಪ್ರಕಟಣೆ ಹೊರಡಿಸಿರುವ ವೇದಿಕೆ, ಬಿಜೆಪಿ…

ಘಟಪ್ರಭಾದ ಚರಂಡಿಯಲ್ಲಿ ಪ್ಲಾಸ್ಟಿಕ್ ಬ್ಯಾಗಿನಲ್ಲಿ ನವಜಾತ ಶಿಶುವಿನ ಶವ ಪತ್ತೆ:  ಘಟಪ್ರಭಾದಲ್ಲೂ ನಡೆಯುತ್ತಿದೆಯಾ ಗರ್ಭಪಾತದ ಕರಾಳ ದಂಧೆ? 

ಸಂಯುಕ್ತ ಟೈಮ್ಸ್,  ಘಟಪ್ರಭಾ: ಇತ್ತೀಚಿಗೆ ರಾಜ್ಯದಲ್ಲಿ ಭ್ರೂಣ ಹತ್ಯೆಯ ವಿಷಯ ಭಾರಿ ಸುದ್ದು ಮಾಡಿತ್ತು. ಈ ಘಟನೆಗೆ ಸಂಬಂಧಿಸಿದಂತೆ ಅನೇಕರು ಅಂದರ್ ಆದರೆ ಕೆಲ ಆಸ್ಪತ್ರೆಗಳಿಗೆ ಬೀಗ ಜಡೆಯಲಾಗಿದೆ. ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಘಟಪ್ರಭಾ ಪಟ್ಟಣದಲ್ಲಿ ಭ್ರೂಣ ಹತ್ಯೆಯಾಗಿರುವ ವಿಷಯ ಭಾನುವಾರ (ದಿ.24)…

RTI ಅರ್ಜಿ ಮೂಲಕ ಬಹಿರಂಗ:  ಶಾಸಕ ಸೇರಿ 50 ಮಂದಿಯಿಂದ 11ಸಾವಿರ ಕೋಟಿ ರೂ ಮೌಲ್ಯದ ಮೀಸಲು ಅರಣ್ಯ ಭೂಮಿ ಕಬಳಿಕೆ!

ಸಂಯುಕ್ತ ಟೈಮ್ಸ್, ಬೆಂಗಳೂರು: ಹಿರಿಯ ಶಾಸಕರೊಬ್ಬರು ಸೇರಿದಂತೆ ಒಟ್ಟು 50 ಮಂದಿ ಬೆಂಗಳೂರು ಉತ್ತರ ತಾಲೂಕಿನಲ್ಲಿ 11,000 ಕೋಟಿ ಮೌಲ್ಯದ ಮೀಸಲು ಅರಣ್ಯ ಭೂಮಿ ಒತ್ತುವರಿ ಮಾಡಿರುವ ವಿಷಯ RTI ಮೂಲಕ ಬೆಳಕಿಗೆ ಬಂದಿದೆ. ಶಾಸಕರೊಬ್ಬರೇ 324 ಕೋಟಿ ರೂ.  ಮೌಲ್ಯದ…

ಕಳ್ಳನಿಗೆ ಮಹಿಳಾ ಪೇದೆಯ CDR ಪೊಲೀಸರಿಂದಲೇ ಮಾರಾಟ!

ಸಂಯುಕ್ತ ಟೈಮ್ಸ್, ಕಲಬುರಗಿ: ನಗರದಲ್ಲಿ ಮತ್ತೆ ಪೊಲೀಸರ ಕಳ್ಳಾಟ ಬಯಲಾಗಿದ್ದು, ಈ ಬಾರಿ ಮಹಿಳಾ ಪೇದೆಯ ಮೊಬೈಲ್ ನಂಬರ್‌ನ CDR (ಕರೆ ವಿವರದ ದಾಖಲೆಗಳು) ಅನ್ನು ಕಳ್ಳನಿಗೆ ಪೊಲೀಸರು ಮಾರಾಟ ಮಾಡಿದ್ದಾರೆ. ಕಲಬುರಗಿ ನಗರ ಪೊಲೀಸ್ ಆಯುಕ್ತಾಲಯ ವ್ಯಾಪ್ತಿಯ ಮಹಿಳಾ ಪೇದೆಗೆ…

ರಾಜ್ಯದ ಜನರಿಗೆ ನೀರಿನ ತೆರಿಗೆ ಶಾಕ್:  ಕುಡಿಯುವ ನೀರಿನ ತೆರಿಗೆ ಹೆಚ್ಚಳ

ಸಂಯುಕ್ತ ಟೈಮ್ಸ್, ಬೆಂಗಳೂರು:  ಬರಗಾಲದಲ್ಲೂ ರಾಜ್ಯದ ಜನರಿಗೆ ಸರ್ಕಾರ ಕುಡಿಯುವ ನೀರಿನ ತೆರಿಗೆ ಹೆಚ್ಚಿಸುವ ಮೂಲಕ ಶಾಕ್ ನೀಡಿದೆ. ಗೃಹ ಉಪಯೋಗ ಬಳಕೆ ನೀರಿನ ಮೇಲಿನ ತೆರಿಗೆ ಹೆಚ್ಚಳಕ್ಕೆ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದ್ದು, ಜನರಿಗೆ ಕುಡಿಯುವ ನೀರು…

ನಕಲಿ ಜಾತಿ ಪ್ರಮಾಣಪತ್ರ ಸಲ್ಲಿಸಿದ್ದ ಪೊಲೀಸ್ ಪೇದೆಗೆ 7 ವರ್ಷ ಜೈಲು ಶಿಕ್ಷೆ, 30 ಸಾವಿರ ರೂ. ದಂಡ ವಿಧಿಸಿದ ನ್ಯಾಯಾಲಯ!

ಸಂಯುಕ್ತ ಟೈಮ್ಸ್, ಹಾವೇರಿ: ನಕಲಿ ಜಾತಿ ಪ್ರಮಾಣ ಪತ್ರ ಸಲ್ಲಿಸಿದ್ದಕ್ಕಾಗಿ ಹಾವೇರಿ ಜಿಲ್ಲೆಯ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಪೊಲೀಸ್ ಪೇದೆ ಸೋಮಶೇಖರ ಭೀಮಪ್ಪ ಕುಂಕುಮಗಾರ ಅವರಿಗೆ ಏಳು ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ನಗರ ಸಶಸ್ತ್ರ…

ಪೊಲೀಸರ ವೇಷದಲ್ಲಿ ಉದ್ಯಮಿಯೊಬ್ಬರ ಮನೆಯಿಂದ 1 ಕೋಟಿ ರೂ. ದರೋಡೆ ಮಾಡಿದ್ದ ಎಂಟು ಮಂದಿ ಖದೀಮರ ಬಂಧನ!

ಸಂಯುಕ್ತ ಟೈಮ್ಸ್, ಬೆಂಗಳೂರು: ಎಚ್‌ಎಂಟಿ ಲೇಔಟ್‌ನಲ್ಲಿರುವ ಉದ್ಯಮಿಯೊಬ್ಬರ ನಿವಾಸವನ್ನು ಲೂಟಿ ಮಾಡಿದ್ದ ಎಂಟು ನಕಲಿ ಪೊಲೀಸರ ತಂಡವನ್ನು ಪೀಣ್ಯ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಡಿಸೆಂಬರ್ 4 ರಂದು ರಾತ್ರಿ 7.30ರ ಸುಮಾರಿಗೆ ಮನೋಹರ್ ಮನೆಗೆ ನುಗ್ಗಿದ್ದರು. ಪಾಲಿ ಫಿಲ್ಮ್ ಸಂಸ್ಥೆಯ ಮಾಲೀಕ ಮನೋಹರ್…

You missed

error: Content is protected !!