Month: February 2024

ಕಂದಾಯ ನಿರೀಕ್ಷಕ ಶಿವಾನಂದ ಹಿರೇಮಠ ವಿರುದ್ಧ ಶಿಸ್ತು ಕ್ರಮಕ್ಕಾಗಿ ಆಗ್ರಹಿಸಿ “ಕರ್ನಾಟಕ ಪತ್ರಕರ್ತರ ಸಂಘ”ದಿಂದ ಗೋಕಾಕ ತಹಶೀಲ್ದಾರ ಅವರಿಗೆ ಮನವಿ!

ಸಂಯುಕ್ತ ಟೈಮ್ಸ್, ಗೋಕಾಕ: ಪತ್ರಕರ್ತ ಬಸವಣ್ಣಿ ತಿಗಡಿ ಅವರ ಜೊತೆಗೆ ಅನುಚಿತವಾಗಿ ವರ್ತಿಸಿದ ಗೋಕಾಕ ಕಂದಾಯ ನಿರೀಕ್ಷಕ ಶಿವಾನಂದ ಹಿರೇಮಠ ಅವರ ಮೇಲೆ ಶಿಸ್ತು ಕ್ರಮ ಜರುಗಿಸಲು ಕರ್ನಾಟಕ ಪತ್ರಕರ್ತರ ಸಂಘದ ಗೋಕಾಕ ತಾಲೂಕು ಘಟಕ ತಹಶೀಲ್ದಾರ ಡಾ: ಮೋಹನ ಭಸ್ಮೆ ಅವರನ್ನು…

ಮಗು ಅಳುತ್ತೆ ಎಂಬ ಕಾರಣಕ್ಕೆ ಮಗುವನ್ನ ನೆಲಕ್ಕೆ ಎತ್ತಿ ಬಡಿದಿದ್ದ ತಂದೆ:  ಚಿಕಿತ್ಸೆ ಫಲಿಸದೇ ಕಂದಮ್ಮ ಸಾವು!

ಸಂಯುಕ್ತ ಟೈಮ್ಸ್, ಧಾರವಾಡ: ತಂದೆಯಿಂದಲೇ ನೆಲಕ್ಕೆ ಎಸೆಯಲ್ಪಟ್ಟಿದ್ದ ಹೆಣ್ಣು ಮಗು ಇದೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದೆ. ಶ್ರೇಯಾ (1 ವರ್ಷ) ಮೃತ ದುರ್ದೈವಿ ಕಂದಮ್ಮ. ಈಕೆಯನ್ನು ತಂದೆ ಶಂಭುಲಿಂಗಯ್ಯ ಕೊಲೆ ಮಾಡಿದ್ದಾನೆ. ಈತ ಧಾರವಾಡ (Dharwad) ತಾಲೂಕಿನ ಯಾದವಾಡ ಗ್ರಾಮದ ನಿವಾಸಿ.…

ರವೀಂದ್ರ ಕಲಾಕ್ಷೇತ್ರದಲ್ಲಿ ನಾಳೆ ಕೆ.ಶಿವರಾಮ್ ಅಂತಿಮ ದರ್ಶನ!

ಸಂಯುಕ್ತ ಟೈಮ್ಸ್: ನಟ ಕಮ್ ಐಎಎಸ್ ಅಧಿಕಾರಿ ಕೆ.ಶಿವರಾಜ್ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ಅವರಿಗೆ ನಿನ್ನೆಯಷ್ಟೇ (ಫೆ.28) ಹೃದಯಾಘಾತವಾಗಿತ್ತು. ಜೊತೆಗೆ ಮೆದುಳು ನಿಷ್ಕ್ರೀಯಗೊಂಡಿತ್ತು ಎಂದು ಹೇಳಲಾಗಿತ್ತು. ಇದೀಗ ಮಾರ್ಚ್ 1ರಂದು ರವೀಂದ್ರ ಕಲಾಕ್ಷೇತ್ರದಲ್ಲಿ ಕೆ.ಶಿವರಾಮ್ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಗುರುವಾರ…

ಬೆಳಗಾವಿಯಲ್ಲಿ ಮತ್ತೊಂದು ಅಮಾನವೀಯ  ಘಟನೆ: ಮಹಿಳೆಯನ್ನು ವಿವಸ್ತ್ರಗೊಳಿಸಿ ಮಾರಣಾಂತಿಕ ಹಲ್ಲೆ ಆರೋಪ!

ಸಂಯುಕ್ತ ಟೈಮ್ಸ್, ಬೆಳಗಾವಿ: ಜಿಲ್ಲೆಯಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿರುವ ಬಗ್ಗೆ ಬೆಳಕಿಗೆ ಬಂದಿದೆ. ಮಹಿಳೆಯನ್ನು ವಿವಸ್ತ್ರಗೊಳಿಸುವ ಜೊತೆಗೆ ಆಕೆಯ ಪುತ್ರನ ಮೇಲೂ ಮಾರಣಾಂತಿಕ ಹಲ್ಲೆ ಮಾಡಿರುವ ಆರೋಪವೊಂದು ಕೇಳಿಬಂದಿದೆ. ಬೆಳಗಾವಿ ಜಿಲ್ಲೆಯ ಕಾಗವಾಡದ ಐನಾಪುರ ಗ್ರಾಮದಲ್ಲಿ ಒತ್ತುವರಿ ಪ್ರಶ್ನಿಸಿದ ಬಡ ಕುಟುಂಬದ…

ರಾಡ್, ತಲ್ವಾರ್‌ನಿಂದ ಮಾರಣಾಂತಿಕ ಹಲ್ಲೆ: ಚಿಕಿತ್ಸೆ ಫಲಕಾರಿಯಾಗದೆ ಬಿಜೆಪಿ ಮುಖಂಡ ಸಾವು

ಸಂಯುಕ್ತ ಟೈಮ್ಸ್, ಕಲಬುರಗಿ: ಹಿರಿಯ ಬಿಜೆಪಿ ಮುಖಂಡ ಮಹಾಂತಪ್ಪಾ ಆಲೂರೆ ಅವರನ್ನು ಜಿಲ್ಲೆಯ ಆಳಂದ ತಾಲೂಕಿನ ಸರಸಂಬಾ ಗ್ರಾಮದ ಹೊರವಲಯದ ಬಳಿ ಮೂವರು ಅಪರಿಚಿತರು ರಾಡ್, ತಲ್ವಾರ್‌ನಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಪರಾರಿಯಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಗುರುವಾರ ಸೊಲ್ಲಾಪುರ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.…

ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಬಿಜೆಪಿ ಶಾಸಕ ಸೋಮಶೇಖರ್ ವಿರುದ್ಧ ಅಶೋಕ್ ಕಿಡಿ!

ಸಂಯುಕ್ತ ಟೈಮ್ಸ್, ಬೆಂಗಳೂರು: ಜಗದೀಶ್ ಶೆಟ್ಟರ್ ರಾಜೀನಾಮೆ ಕೊಟ್ಟು ಬಿಜೆಪಿಗೆ ವಾಪಸ್ಸಾದ್ರು. ಇವರು ಪಕ್ಷಕ್ಕೆ ರಾಜೀನಾಮೆ ಕೊಟ್ಟು, ಮತ ಹಾಕಬಹುದಿತ್ತು ಎಂದು ವಿಪಕ್ಷ ನಾಯಕ ಆರ್.ಅಶೋಕ್ ಅಸಮಾಧಾನ ಹೊರಹಾಕಿದರು. ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಬಿಜೆಪಿ ಶಾಸಕರ ವಿರುದ್ಧ ಕಿಡಿಕಾರಿದ ಆರ್.ಅಶೋಕ್,…

ಟಾಟಾ ಸಂಸ್ಥೆಯಿಂದ ಮಾತ್ರೆ ಅಭಿವೃದ್ಧಿ: ಕೇವಲ 100 ರೂ. ಕ್ಯಾನ್ಸರ್‌ಗೆ ಚಿಕಿತ್ಸೆ! 

ಸಂಯುಕ್ತ ಟೈಮ್ಸ್, ಮುಂಬೈ: ಎರಡನೇ ಬಾರಿಗೆ ಕ್ಯಾನ್ಸರ್ ಬರುವುದನ್ನು ತಡೆಯುವ ಮಾತ್ರೆಯನ್ನು ನಾವು ಅಭಿವೃದ್ಧಿ ಪಡಿಸಿರುವುದಾಗಿ ಭಾರತದ ಪ್ರಸಿದ್ಧ ಕ್ಯಾನ್ಸರ್‌ ಸಂಶೋಧನಾ ಸಂಸ್ಥೆ ಟಾಟಾ ಸ್ಮಾರಕ ಕೇಂದ್ರ ಹೇಳಿಕೊಂಡಿದೆ. ಸಂಶೋಧಕರು 10 ವರ್ಷಗಳ ಕಾಲ ಸಂಶೋಧನೆ ನಡೆಸಿದ ಬಳಿಕ ಮಾತ್ರೆ ಅಭಿವೃದ್ಧಿ ಪಡಿಸಿದ್ದು…

ಶಾಲೆಯಲ್ಲಿ ಕೊಟ್ಟ ಪ್ರೊಟೀನ್ ಮಾತ್ರೆಯಿಂದಲೇ  ಬಾಲಕಿ ಸಾವು:  ಪೋಷಕರ ಆರೋಪ!

ಸಂಯುಕ್ತ ಟೈಮ್ಸ್, ಬೆಂಗಳೂರು: ಶಾಲೆಯಲ್ಲಿ ಕೊಟ್ಟ ಪ್ರೊಟೀನ್ ಮಾತ್ರೆಯಿಂದಲೇ ಬಾಲಕಿ ಸಾವನ್ನಪ್ಪಿರುವುದಾಗಿ ಪೋಷಕರು ಆರೋಪ ಮಾಡಿದ್ದಾರೆ. ಈ ಘಟನೆ ಬನಶಂಕರಿಯ ಕಾವೇರಿ ನಗರದಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಜೋಯಾ (9) ಎಂದು ಗುರುತಿಸಲಾಗಿದೆ. ಈಕೆ ಕರಿಸಂದ್ರದ ನಮ್ಮೂರ ಸರ್ಕಾರಿ ಉರ್ದು ಕಿರಿಯ ಪ್ರಾಥಮಿಕ…

ಇಂದು ಗೋಕಾಕ ಸಾಹುಕಾರ್ ರಮೇಶ ಜಾರಕಿಹೊಳಿ ಅವರ ದ್ವೀತಿಯ ಸುಪುತ್ರ ಅಮರನಾಥ ಜಾರಕಿಹೊಳಿ ಅವರ ಅದ್ದೂರಿ ವಿವಾಹ!

ಸಂಯುಕ್ತ ಟೈಮ್ಸ್, ಗೋಕಾಕ:  ರಾಜ್ಯ ರಾಜಕೀಯ ವಲಯದಲ್ಲಿ ಸಂಚಲನ ಮೂಢಿಸಿ, ತಮ್ಮದೆ ಆದ ಪ್ರತಿಷ್ಠೆ ಹೊಂದಿದ ಕುಂದಾನಗರಿ ಬೆಳಗಾವಿ ಜಿಲ್ಲೆಯ ಕರದಂಟೂರು ಗೋಕಾಕ ‘ಸಾಹುಕಾರ್’ ಎಂದೇ ಚಿರಪರಿಚಿತರಾದ ಇಲ್ಲಿಯ ಪ್ರತಿಷ್ಠಿತ ದೊಡ್ಮನೆ  ಜಾರಕಿಹೊಳಿ ಕುಟುಂಬದಲ್ಲಿ ಈಗ ಮದುವೆಯ ಸಂಭ್ರಮ ಮನೆಮಾಡಿದೆ. ಇಲ್ಲಿಯ ಜಾರಕಿಹೊಳಿ…

ಮಹಾದಾಯಿ ಯೋಜನೆ ಹಿನ್ನಡೆಗೆ ಕಾಂಗ್ರೆಸ್ ನೇರ ಕಾರಣ: ಬಸವರಾಜ ಬೊಮ್ಮಾಯಿ

ಸಂಯುಕ್ತ ಟೈಮ್ಸ್, ಹುಬ್ಬಳ್ಳಿ: ಮಹಾದಾಯಿ ಯೋಜನೆಗೆ ಹಿನ್ನಡೆಯಾಗಲು ಕಾಂಗ್ರೆಸ್ ಪಕ್ಷವೇ ನೇರ ಕಾರಣವಾಗಿದ್ದು, ಅವರು ಟ್ರಿಬ್ಯುನಲ್ ಗೆ ಹೋಗಿದ್ದರಿಂದ 8-10 ವರ್ಷ ವಿಳಂಬವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹದಾಯಿ ಯೋಜನೆಗೆ ಹಿನ್ನಡೆಯಾಗಿದ್ದರೇ ಅದಕ್ಕೆ…

You missed

error: Content is protected !!