Month: April 2025

ಬೆಳಗಾವಿಯಲ್ಲಿ ಅತೀ ವಿಜೃಂಭಣೆಯಿಂದ ಭಗೀರಥ ಜಯಂತಿ ಆಚರಿಸಲು ಉಪ್ಪಾರ ಸಮಾಜದಿಂದ ತೀರ್ಮಾನ

ಸಂಯುಕ್ತ ಟೈಮ್ಸ್, ಬೆಳಗಾವಿ: ಬೆಳಗಾವಿ ಜಿಲ್ಲಾ ಉಪ್ಪಾರ ಸಂಘದ ಅಧ್ಯಕ್ಷ ಶ್ರೀ ಜಿ.ಎಸ್. ಉಪ್ಪಾರ ಅವರ ನೇತೃತ್ವದಲ್ಲಿ ಭಗೀರಥ ಜಯಂತಿ ಜಿಲ್ಲಾ ಮಟ್ಟದಲ್ಲಿ ಅತೀ ವಿಜೃಂಭಣೆಯಿಂದ ಆಚರಿಸಲು ಉಪ್ಪಾರ ಸಮಾಜದ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಸಭೆಯಲ್ಲಿ ಸಮುದಾಯದ ಎಲ್ಲ ಬಾಂಧವರಿಗೆ ಕಾರ್ಯಕ್ರಮದಲ್ಲಿ ಸಕ್ರಿಯ ಭಾಗವಹಿಸಿ, ಸಮಾಜದ…

ಗ್ರಾಮ ಆಡಳಿತಾಧಿಕಾರಿಗಳು ಪಂಚಾಯಿತಿಯ ಕೇಂದ್ರಸ್ಥಾನದಲ್ಲಿಯೇ ವಾಸ್ತವ್ಯವಿದ್ದು ರೈತರ ಕುಂದುಕೊರತೆ ಆಲಿಸಿ ಮತ್ತು ಭ್ರಷ್ಟಾಚಾರ ಮಾಡದಿರಿ: ಸಿಎಂ ಸಿದ್ದರಾಮಯ್ಯ

ಸಂಯುಕ್ತ ಟೈಮ್ಸ್, ಬೆಂಗಳೂರು: ಗ್ರಾಮ ಆಡಳಿತಾಧಿಕಾರಿಗಳು ತಮ್ಮ ವ್ಯಾಪ್ತಿಯ ಪಂಚಾಯಿತಿಯ ಕೇಂದ್ರಸ್ಥಾನದಲ್ಲಿಯೇ ವಾಸ್ತವ್ಯವಿದ್ದು, ರೈತರ ಕುಂದುಕೊರತೆಗಳನ್ನು ಆಲಿಸಿ ಮತ್ತು ಭ್ರಷ್ಟಾಚಾರ ಮಾಡದಿರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ. ನೂತನವಾಗಿ ಆಯ್ಕೆಯಾಗಿರುವ 1,000 ಗ್ರಾಮ ಆಡಳಿತ ಅಧಿಕಾರಿಗಳಿಗೆ ನೇಮಕಾತಿ ಆದೇಶ ನೀಡಿ ಮಾತನಾಡಿದ ಮುಖ್ಯಮಂತ್ರಿ, ಗ್ರಾಮ…

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಹೈವೋಲ್ಟೇಜ್ ಸರಣಿ ಸಭೆ:  ಪಾಕಿಸ್ತಾನವನ್ನು ಬಗ್ಗುಬಡಿಯಲು ಭಾರತ ತಯಾರಿ

ಸಂಯುಕ್ತ ಟೈಮ್ಸ್, ನವದೆಹಲಿ: ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯ ಹಿನ್ನೆಲೆ ಪಾಕಿಸ್ತಾನವನ್ನು ಬಗ್ಗುಬಡಿಯಲು ಭಾರತ ತಯಾರಿ ನಡೆಸುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಇಂದು ನಾಲ್ಕು ಹೈವೋಲ್ಟೇಜ್ ಸಭೆಗಳು ನಡೆಯಲಿವೆ. ಇಡೀ ದಿನ ಭದ್ರತಾ ಸಂಪುಟ ಸಮಿತಿ ಸಭೆ, ರಾಜಕೀಯ ವ್ಯವಹಾರಗಳ ಸಮಿತಿ…

ಮಾಡದೇ ಇರುವ ಕೊಲೆಯನ್ನು ಮಾಡಿದ್ದಾನೆ ಎಂದು ಸುಳ್ಳು ದೋಷಾರೋಪ ಪಟ್ಟಿ ಸಲ್ಲಿಸಿದ್ದ ಪೊಲೀಸರ ವಿರುದ್ಧ ಕೇಸ್ ದಾಖಲಿಸಲು ಆದೇಶ ನೀಡಿದ ನ್ಯಾಯಾಲಯ   

ಸಂಯುಕ್ತ ಟೈಮ್ಸ್, ಮಡಿಕೇರಿ: ಪತ್ನಿಯನ್ನು ಕೊಲೆ ಮಾಡಿದ್ದಾನೆ ಎಂದು ಶಿಕ್ಷೆ ವಿಧಿಸಿದ್ದ ನ್ಯಾಯಾಲಯವೇ, `ಪೊಲೀಸರು ಸುಳ್ಳು ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಆತ ತಪ್ಪು ಮಾಡಿಲ್ಲ’ ಎಂದು ಸ್ಪಷ್ಟಪಡಿಸಿ ನಿರಪರಾಧಿ ಎಂದು ಘೋಷಿಸಿದೆ. ತಪ್ಪು ಮಾಡದೇ 2 ವರ್ಷಗಳ ಕಾಲ ಜೈಲು ಶಿಕ್ಷೆ ಅನುಭವಿಸಿದ್ದ ವ್ಯಕ್ತಿ…

ಯಾವೊಬ್ಬ ಪಾಕಿಸ್ತಾನಿ ಪ್ರಜೆಯೂ ಸಹಿತ ಭಾರತದಲ್ಲಿ ಇರಕೂಡದೆಂದು ಎಲ್ಲ ರಾಜ್ಯಗಳಿಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ನಿರ್ದೇಶನ

ಸಂಯುಕ್ತ ಟೈಮ್ಸ್, ನವದೆಹಲಿ: ಪಹಲ್ಗಾಮ್‌ನಲ್ಲಿ ನಡೆದ ಹಿಂದೂಗಳ ನರಮೇಧ ಕೃತ್ಯಕ್ಕೆ ಭಾರತ ಪ್ರತೀಕಾರದ ಪಣ ತೊಟ್ಟಿದೆ. ಉಗ್ರರು ಊಹೆಯೂ ಮಾಡದಂತಹ ಶಿಕ್ಷೆ ಅನುಭವಿಸ್ತಾರೆ ಅಂತ ಪ್ರಧಾನಿ ಮೋದಿ ಕಟು ಎಚ್ಚರಿಕೆ ನೀಡಿದ್ದಾರೆ. ಈ ಬೆನ್ನಲ್ಲೇ ಯಾವೊಬ್ಬ ಪಾಕಿಸ್ತಾನಿ ಪ್ರಜೆಯೂ ಕೇಂದ್ರ ಸರ್ಕಾರ ನೀಡಿರುವ…

ಅನಧಿಕೃತ ಹಾಗೂ ಅಕ್ರಮ ಬಡಾವಣೆ ನಿರ್ಮಾಣ ಮಾಡಿದರೆ ಸರ್ಕಾರದಿಂದಲೇ ಮುಟ್ಟುಗೋಲು:  ಕಂದಾಯ ಸಚಿವ ಕೃಷ್ಣಬೈರೇಗೌಡ

ಸಂಯುಕ್ತ ಟೈಮ್ಸ್,  ಬೆಂಗಳೂರು: ಇನ್ನು ಮುಂದೆ ರಾಜ್ಯದಲ್ಲಿ ಎಲ್ಲೇ ಅಕ್ರಮ ಹಾಗೂ ಅನಧಿಕೃತ ಬಡಾವಣೆಗಳನ್ನು ನಿರ್ಮಾಣ ಮಾಡಿದರೆ ಅಂತಹ ಬಡಾವಣೆಗಳನ್ನು ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳುತ್ತದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ಎಚ್ಚರಿಕೆ ನೀಡಿದ್ದಾರೆ. ವಿಕಾಸಸೌಧದಲ್ಲಿ ಮಾತನಾಡಿದ ಅವರು, ನೋಂದಣಿಯಿಲ್ಲದೆ, ಅನುಮತಿ ಪಡೆಯದೆ ಅನಧಿಕೃತ,…

#ಅಪ್ರಾಪ್ತರ ಕೈಗೆ ವಾಹನ ನೀಡುವ ಮುನ್ನ ಎಚ್ಚರ# ಆಟೋ ಚಲಾಯಿಸಿ ಅಪಘಾತವೆಸಗಿದ್ದ 12 ವರ್ಷದ ಅಪ್ರಾಪ್ತ ಹುಡುಗ:  4 ವರ್ಷಗಳ ನಂತರ ಮಾಲೀಕನಿಗೆ 1.41 ಕೋಟಿ ದಂಡ ವಿಧಿಸಿದ ನ್ಯಾಯಾಲಯ

ಸಂಯುಕ್ತ ಟೈಮ್ಸ್, ಕೊಪ್ಪಳ: ಅಪ್ರಾಪ್ತನಿಗೆ ಆಟೋ ಚಲಾಯಿಸಲು ಕೊಟ್ಟ ಪರಿಣಾಮ ಅಪಘಾತ ಮಾಡಿ, ವ್ಯಕ್ತಿ ಸಾವನ್ನಪ್ಪಿದ್ದಾನೆ. ಹೀಗಾಗಿ ಆಟೋ ಮಾಲೀಕನಿಗೆ 1,41,61,580 ರೂ. ದಂಡ ವಿಧಿಸಿ ಗಂಗಾವತಿ ಹಿರಿಯ ಸಿವಿಲ್ ನ್ಯಾಯಾಲಯ ಆದೇಶಿಸಿದೆ. 2021ರ ಮಾ.10ರಂದು ಯಲಬುರ್ಗಾ ಪಟ್ಟಣದಲ್ಲಿ ಆಟೋ ಮಾಲೀಕನೊಬ್ಬ 12 ವರ್ಷದ…

ಪಹಲ್ಗಾಮ್ ಭಯೋತ್ಪಾದಕ ದಾಳಿ:  ಇಬ್ಬರು ಉಗ್ರರನ್ನು  ಹತ್ಯೆಗೈದ ಭಾರತೀಯ ಸೇನೆ 

ಸಂಯುಕ್ತ ಟೈಮ್ಸ್, ಶ್ರೀನಗರ: ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯಲ್ಲಿ ಕನಿಷ್ಠ 28 ಜನರು ಮೃತಪಟ್ಟಿದ್ದು, ಅವರಲ್ಲಿ ಹೆಚ್ಚಾಗಿ ಪ್ರವಾಸಿಗರಾಗಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ನಿಯಂತ್ರಣ ರೇಖೆಯ ಉದ್ದಕ್ಕೂ ಒಳನುಸುಳುವಿಕೆ ಪ್ರಯತ್ನವನ್ನು ವಿಫಲಗೊಳಿಸಲಾಗಿದೆ ಎಂದು ಭಾರತೀಯ…

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಮಾಡಿದ್ದ ಅಪರಾಧಿಗೆ ಗಲ್ಲು ಶಿಕ್ಷೆ ವಿಧಿಸಿದ ನ್ಯಾಯಾಲಯ

ಸಂಯುಕ್ತ ಟೈಮ್ಸ್, ಕಲಬುರಗಿ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಮಾಡಿ ಶವವನ್ನು ಬಾವಿಗೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಸೋಮವಾರ ಗಲ್ಲು ಶಿಕ್ಷೆ ಹಾಗೂ 1 ಲಕ್ಷ ರೂ. ದಂಡ ವಿಧಿಸಿದೆ. ಕಲಬುರಗಿಯ ಆಳಂದ…

ಪತ್ರದಲ್ಲಿ ತಪ್ಪಾಗಿ ಅಕ್ಷರ ಬರೆದಿದ್ದಕ್ಕೆ ತಹಶೀಲ್ದಾರಗೆ ನೋಟಿಸ್ ನೀಡಿದ DC 

ಸಂಯುಕ್ತ ಟೈಮ್ಸ್,  ಚಿಕ್ಕಬಳ್ಳಾಪುರ: ಪತ್ರವೊಂದರಲ್ಲಿ ಅಕ್ಷರ ತಪ್ಪಾಗಿ ಬರೆದಿದ್ದಕ್ಕೆ ತಹಶೀಲ್ದಾರಗೆ DC ನೋಟಿಸ್‌ ನೀಡಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಪತ್ರದಲ್ಲಿ ಕನ್ನಡ ಪದಗಳು ತಪ್ಪಾಗಿದ್ದರೂ ಸಹಿ ಮಾಡಿರುವ ಚಿಂತಾಮಣಿ ತಹಶೀಲ್ದಾರ ಸುದರ್ಶನ್‌ ಅವರಿಗೆ ಚಿಕ್ಕಬಳ್ಳಾಪುರ DC ಪಿ.ಎನ್‌ ರವೀಂದ್ರ ಅವರು ನೋಟಿಸ್‌…

You missed

error: Content is protected !!