ಸಂಯುಕ್ತ ಟೈಮ್ಸ್, ಗೋಕಾಕ: ಭಾರೀ ಮಳೆಗೆ ಮನೆಯ ಗೋಡೆ ಕುಸಿದು 3 ವರ್ಷದ ಮಗು ಮೃತಪಟ್ಟ ಘಟನೆ ಗೋಕಾಕ ನಗರದ ಮಹಲಿಂಗೇಶ್ವರ ಕಾಲೋನಿಯಲ್ಲಿ ಸೋಮವಾರ ಮುಂಜಾನೆ ನಡೆದಿದೆ.

ಮೃತ ಮಗುವನ್ನು ಕೀರ್ತಿ ನಾಗೇಶ ಪೂಜೇರಿ (3) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ 4 ವರ್ಷದ ಬಾಲಕಿ ಗಾಯಗೊಂಡಿದ್ದಾಳೆ. ಅಕ್ಕ ಮತ್ತು ತಂಗಿ ರೂಮ್ನಲ್ಲಿ ಮಲಗಿದ್ದ ವೇಳೆ ಗೋಡೆ ಕುಸಿದಿದೆ, ಪರಿಣಾಮ ಒಂದು ಮಗು ಸ್ಥಳದಲ್ಲೇ ಸಾವಿಗೀಡಾಗಿದೆ. ಘಟನೆಯ ವೇಳೆ ಮನೆಯ ಮತ್ತೊಂದು ರೂಮ್ನಲ್ಲಿ ಮಗುವಿನ ತಂದೆ ತಾಯಿ ಮಲಗಿದ್ದರು ಎಂದು ತಿಳಿದು ಬಂದಿದೆ.
ಗಾಯಗೊಂಡ ಬಾಲಕಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಮೃತ ಬಾಲಕಿಯ ಶವವನ್ನು ಗೋಕಾಕ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ಶಿಪ್ಟ್ ಮಾಡಲಾಗಿದೆ. ಸ್ಥಳಕ್ಕೆ ಗೋಕಾಕ ಶಹರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

