Spread the love

ಸಂಯುಕ್ತ ಟೈಮ್ಸ್, ಬೆಂಗಳೂರು: ಖಾಸಗಿ ಶಾಲೆಗಳಲ್ಲಿ ಇನ್ನು ಮುಂದೆ ನಾಡಗೀತೆ ಹಾಡುವುದು ಕಡ್ಡಾಯವಲ್ಲ ಎಂದು ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ಖಾಸಗಿ ಶಾಲೆಗಳಿಗೆ ನಾಡಗೀತೆ ಹಾಡುವುದಕ್ಕೆ ವಿನಾಯಿತಿ ನೀಡಿದ ಸರ್ಕಾರ ಸರ್ಕಾರಿ ಶಾಲೆಗಳು ಮತ್ತು ಅನುದಾನಿತ ಶಾಲೆಗಳಲ್ಲಿ ಮಾತ್ರ ನಾಡಗೀತೆ ಹಾಡಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವಿವಾದಿತ ಆದೇಶವನ್ನು ಹೊರಡಿಸಿದೆ.

ಈ ಹಿಂದೆ ಎಲ್ಲಾ ಶಾಲೆಗಳಲ್ಲಿ ದೈನಂದಿನ ಚಟುವಟಿಕೆಗಳು ಆರಂಭವಾಗುವ ಮುನ್ನ ನಾಡಗೀತೆಯನ್ನು ಹಾಡಬೇಕಿತ್ತು. ಇದಲ್ಲದೆ ಸರ್ಕಾರಿ ಇಲಾಖೆ, ಕಚೇರಿ, ಪ್ರಾಧಿಕಾರಗಳು, ಸರ್ಕಾರದ ಸಂಸ್ಥೆಗಳ ಅಧಿಕೃತ ಕಾರ್ಯಕ್ರಮಗಳನ್ನು ಏರ್ಪಡಿಸುವ ಮುನ್ನ ನಾಡಗೀತೆ ಹಾಡಬೇಕು ಎಂದು ಆದೇಶಿಸಲಾಗಿತ್ತು.

ಹಿಂದಿನ ಆದೇಶವನ್ನು ಬದಲಾವಣೆ ಮಾಡಿದ ರಾಜ್ಯ ಸರ್ಕಾರ ಈಗ ಎಲ್ಲಾ ಶಾಲೆಗಳು ಎಂಬುದರ ಬದಲಾಗಿ ಸರ್ಕಾರಿ ಶಾಲೆಗಳು ಎಂದು ಬದಲಾವಣೆ ಮಾಡಿ ಆದೇಶ ಹೊರಡಿಸಿದೆ.

Leave a Reply

Your email address will not be published. Required fields are marked *

You missed

error: Content is protected !!