Spread the love

ಸಂಯುಕ್ತ ಟೈಮ್ಸ್, ಬೆಂಗಳೂರು: ಮದುವೆಯಾಗುವುದಾಗಿ ಭರವಸೆ ನೀಡಿ ಮಹಿಳೆಯೊಬ್ಬರ ಮೇಲೆ ಅತ್ಯಾಚಾರವೆಸಗಿದ್ದ ಮಹದೇವಪುರ ಪೊಲೀಸ್ ಠಾಣೆಯ ಪೊಲೀಸ್ ಪೇದೆ ಫಕೀರಪ್ಪ ಹಟ್ಟಿಗೆ ಕರ್ನಾಟಕ ಹೈಕೋರ್ಟ್ 1 ಲಕ್ಷ ರೂ. ದಂಡ ವಿಧಿಸಿದೆ.

Close up of wooden judge gavel

ಸತ್ಯಾಂಶಗಳನ್ನು ಮುಚ್ಚಿಟ್ಟಿದ್ದಕ್ಕಾಗಿ ವಿಶೇಷ ನ್ಯಾಯಾಲಯ ಅವರಿಗೆ ನೀಡಿದ್ದ ಜಾಮೀನನ್ನು ಹೈಕೋರ್ಟ್ ರದ್ದುಗೊಳಿಸಿದೆ. ನ್ಯಾಯಾಲಯದಲ್ಲಿ ವಂಚನೆ ಮಾಡಿದ್ದಕ್ಕಾಗಿ ಅವರ ವಿರುದ್ಧ ನ್ಯಾಯವ್ಯಾಪ್ತಿಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸುವಂತೆ ರಿಜಿಸ್ಟ್ರಿಗೆ ನಿರ್ದೇಶನ ನೀಡಿದೆ.

ಫಕೀರಪ್ಪ ಅವರಿಗೆ ನೀಡಿರುವ ಜಾಮೀನನ್ನು ರದ್ದುಗೊಳಿಸುವಂತೆ ಕೋರಿ 27 ವರ್ಷದ ಸಂತ್ರಸ್ತೆ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಚ್‌ಪಿ ಸಂದೇಶ್ ಅವರು ಅಂಗೀಕರಿಸಿದ್ದಾರೆ.

ಆರೋಪಿಯ ಜಾಮೀನು ರದ್ದತಿಯನ್ನು ಪರಿಗಣಿಸಿ ಕಸ್ಟಡಿಗೆ ತೆಗೆದುಕೊಳ್ಳುವಂತೆ ನ್ಯಾಯಾಲಯವು ಪೊಲೀಸರಿಗೆ ಸೂಚಿಸಿದೆ.

Leave a Reply

Your email address will not be published. Required fields are marked *

You missed

error: Content is protected !!