Spread the love

ಸಂಯುಕ್ತ ಟೈಮ್ಸ್, ಬೀದರ್: ಅನ್ಯ ರಾಜ್ಯದ ಕಾಳಸಂತೆಯಲ್ಲಿ ಮಾರಾಟ ಮಾಡಲು ಅಕ್ರಮವಾಗಿ ಸಂಗ್ರಹಿಸಿದ್ದ ಲಕ್ಷಾಂತರ ಮೌಲ್ಯದ ಪಡಿತರ ಅಕ್ಕಿಯನ್ನು ಬೀದರ್ ಪೊಲೀಸರು ಭರ್ಜರಿ‌ ಕಾರ್ಯಾಚರಣೆ ನಡೆಸಿ ಜಪ್ತಿ ಮಾಡಿಕೊಂಡಿದ್ದಾರೆ.

ಬೀದರ್ ನಗರದ ಗೋಲೆಖಾನ್ ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ ಒಟ್ಟು 4 ಲಕ್ಷ ರೂ. ಅಧಿಕ ಮೌಲ್ಯದ ಪಡಿತರ ಅಕ್ಕಿಯನ್ನು ವಶಪಡಿಸಿಕೊಂಡಿದ್ದಾರೆ. ಇಷ್ಟೇ ಅಲ್ಲದೇ ಹುಮ್ನಾಬಾದ್ ತಾಲೂಕಿನ ಚಿದ್ರಿಯಲ್ಲೂ ಅಕ್ರಮವಾಗಿ ಸಾಗಿಸುತ್ತಿದ್ದ 34 ಸಾವಿರ‌ ರೂ. ಮೌಲ್ಯದ 10 ಕ್ವಿಂಟಲ್ ಅಕ್ಕಿಯನ್ನು ಜಪ್ತಿ‌ ಮಾಡಲಾಗಿದೆ.

ಅಕ್ರಮಕ್ಕೆ ಬಳಸಿದ ಗೂಡ್ಸ್ ಗಾಡಿಯನ್ನು ಕೂಡಾ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಕ್ರಮವಾಗಿ ಪಡಿತರ ಅಕ್ಕಿಯನ್ನು ಸಂಗ್ರಹಿಸಿದ ಆರೋಪದ ಅಡಿ ಇಬ್ಬರನ್ನು ಬಂಧಿಸಲಾಗಿದೆ. ಈ ಸಂಬಂಧ ಬೀದರ್ ನಗರ ಹಾಗೂ ಹುಮ್ನಾಬಾದ್ ಠಾಣೆಯಲ್ಲಿ ಪ್ರಕರಣಗಳು ದಾಖಲಾಗಿವೆ. 

Leave a Reply

Your email address will not be published. Required fields are marked *

You missed

error: Content is protected !!