ಸಂಯುಕ್ತ ಟೈಮ್ಸ್, ಬೆಂಗಳೂರು: ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಕರ್ನಾಟಕದ 17 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಈ ಮೂಲಕ ಒಟ್ಟು 24 ಕ್ಷೇತ್ರಗಳಿಗೆ ಅಭ್ಯರ್ಥಿ ನಿಗದಿಯಾದಂತಾಗಿದೆ.

ಇದೇ ತಿಂಗಳ 8ರಂದು (ಮಾ. 8) ಕರ್ನಾಟಕದ ಏಳು ಲೋಕಸಭಾ ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳ ಹೆಸರುಗಳನ್ನು ಪ್ರಕಟಿಸಿದ್ದ ಕಾಂಗ್ರೆಸ್, ಈಗ ತನ್ನ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಮಾ. 8ರಂದು ಏಳು ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನು ಕಾಂಗ್ರೆಸ್ ಘೋಷಿಸಿತ್ತು. ಈಗ 17 ಕ್ಷೇತ್ರಗಳಲ್ಲಿ ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ. ಉಳಿದಂತೆ 4 ಕ್ಷೇತ್ರಗಳಿಗೆ ಅಭ್ಯರ್ಥಿ ಬಾಕಿ ಇದೆ.
17 ಕ್ಷೇತ್ರಗಳ ಅಭ್ಯರ್ಥಿಗಳು
- ಚಿಕ್ಕೋಡಿ – ಪ್ರಿಯಾಂಕಾ ಜಾರಕಿಹೊಳಿ
- ಬೆಳಗಾವಿ – ಮೃಣಾಲ್ ಹೆಬ್ಬಾಳಕರ್
- ಚಿತ್ರದುರ್ಗ -ಬಿ.ಎನ್.ಚಂದ್ರಪ್ಪ
- ಬಾಗಲಕೋಟೆ – ಸಂಯುಕ್ತಾ ಪಾಟೀಲ್
- ಧಾರವಾಡ – ವಿನೋದ್ ಅಸುಟಿ
- ದಾವಣಗೆರೆ – ಪ್ರಭಾ ಮಲ್ಲಿಕಾರ್ಜುನ
- ಕೊಪ್ಪಳ – ರಾಜಶೇಖರ ಹಿಟ್ನಾಳ್
- ಕಲಬುರಗಿ – ರಾಧಾಕೃಷ್ಣ ದೊಡ್ಡಮನಿ
- ಬೀದರ್ – ಸಾಗರ್ ಖಂಡ್ರೆ
- ದಕ್ಷಿಣ ಕನ್ನಡ – ಪದ್ಮರಾಜ್
- ಉಡುಪಿ -ಚಿಕ್ಕಮಗಳೂರು -ಜಯಪ್ರಕಾಶ್ ಹೆಗ್ಡೆ
- ಬೆಂಗಳೂರು ದಕ್ಷಿಣ – ಸೌಮ್ಯ ರೆಡ್ಡಿ
- ಬೆಂಗಳೂರು ಸೆಂಟ್ರಲ್ -ಮನ್ಸೂರ್ ಅಲಿಖಾನ್
- ಬೆಂಗಳೂರು ಉತ್ತರ -ಪ್ರೊ.ರಾಜೀವ್ ಗೌಡ
- ಮೈಸೂರು -ಎಂ.ಲಕ್ಷ್ಮಣ್
- ರಾಯಚೂರು -ಜಿ.ಕುಮಾರ ನಾಯಕ್
- ಉತ್ತರ ಕನ್ನಡ -ಡಾ.ಅಂಜಲಿ ನಿಂಬಾಳ್ಕರ್

