Spread the love

ಸಂಯುಕ್ತ ಟೈಮ್ಸ್, ದಾವಣಗೆರೆ: ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಸಂತೇಬೆನ್ನೂರಿನ ಗುತ್ತಿಗೆದಾರ ಪಿ.ಎಸ್. ಗೌಡರ್ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದ್ದು, ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮದಿಂದ ಬಿಲ್ ಬಾಕಿ ಉಳಿಸಿಕೊಂಡಿದ್ದು, ಹಣ ನೀಡಲು ಅಧಿಕಾರಿಗಳು ಸತಾಯಿಸಿದ್ದರಿಂದ ಮನನೊಂದು ಗುತ್ತಿಗೆದಾರ ನೇಣಿಗೆ ಕೊರಳೊಡ್ಡಿದ್ದಾರೆ. ಈ ಪ್ರಕರಣವು ಪ್ರತಿಪಕ್ಷಗಳ ಕೈಗೆ ಮತ್ತೊಂದು ಅಸ್ತ್ರ ನೀಡಿದಂತಾಗಿದೆ.

ಪಿ.ಎಸ್. ಗೌಡರ್ (50) ಮೇ 26 ರಂದು ಮನೆಯಲ್ಲಿನ ಫ್ಯಾನ್‌ಗೆ ನೇಣು ಹಾಕಿಕೊಂಡು ಮೃತಪಟ್ಟಿದ್ದು, ಡೆತ್‌ನೋಟ್ ಬರೆದಿಟ್ಟಿದ್ದಾರೆ.

ಡೆತ್‌ನೋಟ್’ನಲ್ಲಿ KRIDAL ಕಾಮಗಾರಿ ನಡೆಸಿದ ಹಣ ಬಂದಿಲ್ಲ ಎಂಬುದು ಸೇರಿ ಇನ್ನಿತರ ಕಾರಣಗಳನ್ನೂ ಪ್ರಸ್ತಾಪಿಸಿದ್ದಾರೆ. ಇದನ್ನು ಆಧರಿಸಿ ಗೌಡರ್ ಪತ್ನಿ ವಸಂತಕುಮಾರಿ ಸಂತೇಬೆನ್ನೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರು ಬೆನ್ನಲ್ಲೇ KRIDAL (ಲ್ಯಾಂಡ್ ಆರ್ಮಿ) ಸಂಸ್ಥೆ ಸೇರಿ 5 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

You missed

error: Content is protected !!