Spread the love

ಸಂಯುಕ್ತ ಟೈಮ್ಸ್, ಬೆಳಗಾವಿ: ಜೂನ್‌ ಅಂತ್ಯದೊಳಗೆ ಮಹಾನಗರ ಪಾಲಿಕೆ, ಕೆಡಿಪಿ ಸೇರಿದಂತೆ ಪ್ರತಿ ಇಲಾಖೆಗಳ ಸಭೆಗಳನ್ನು ನಡೆಸಿ ಆಡಳಿತಕ್ಕೆ ಚುರುಕು ಮುಟ್ಟಿಸಲಾಗುವುದು ಎಂದು ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಹೇಳಿದರು.

ನಗರದ ಬೂಡಾ ಕಚೇರಿ ಸಭಾಂಗಣದಲ್ಲಿ‌ ನಡೆದ ಸಾಮಾನ್ಯ ಸಭೆಯಲ್ಲಿ ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ, ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಳೆದ ಮೂರು ತಿಂಗಳಿಂದ ಆಡಳಿತ ನಿಧಾನವಾಗಿತ್ತು. ಹೊಸ ಕಾಮಗಾರಿಗಳ ಆರಂಭಕ್ಕಾಗಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು, ಶೀಘ್ರವೇ ಹೊಸ ಕಾಮಗಾರಿಗಳನ್ನು ಪ್ರಾರಂಭಿಸಲಾಗುವುದು ಎಂದು ತಿಳಿಸಿದರು.

ಕಣಬರ್ಗಿ ಲೇಔಟ್‌ ಕಾಮಗಾರಿ ಪೂರ್ಣಗೊಳ್ಳಲು ಬಂದಿದೆ. ಹೊಸ ಲೇಔಟ್‌ ಗಳ ವಿನ್ಯಾಸಕ್ಕಾಗಿ ಈಗಾಗಲೇ ನೀಲ ನಕ್ಷೆ ತಯಾರಿಸಿದ್ದಾರೆ. ಮುಂದಿನ ದಿನಗಳಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಹೊಸ ಲೇಔಟ್‌ ಗಳನ್ನು ಮಾಡಬೇಕೋ ಅಥವಾ ಬೇಡವೋ ಎಂಬ ಕುರಿತು ನಿರ್ಧರಿಸುತ್ತೇನೆ. ಹೊಸ ಲೇಔಟ್‌ಗಳ ನಿರ್ಮಿಸಬೇಕಾದರೆ ಕೆಲವು ತಿದ್ದುಪಡಿಗಳಾಗಿದ್ದು, ಹೊಸ ಕಾನೂನುಗಳಿಂದ ರೈತರಿಗೆ ಅನೂಕುಲ ಇದೆ. ರೈತರಿಗೆ ನಾವು ಮನವರಿಕೆ ಮಾಡಿದರೆ ಮಾತ್ರ ಹೊಸ ಲೇಔಟ್‌ ಗಳನ್ನು ಮಾಡಲು ಸಾಧ್ಯವಿದೆ ಎಂದು ಹೇಳಿದರು.

ಬೂಡಾದಲ್ಲಿ ನಡೆದಿರುವ ಅಕ್ರಮ ಬಗ್ಗೆ ಬೆಂಗಳೂರಿನ ಐಎಎಸ್‌ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ತನಿಖೆ ಪೂರ್ಣಗೊಂಡ ಬಳಿಕ ವರದಿ ಆಧರಿಸಿ ಕ್ರಮವಾಗುತ್ತದೆ. ಇನ್ನು ತನಿಖೆ ವಿಳಂಬವಾಗಿಲ್ಲ. ಸುದೀರ್ಘ ತನಿಖೆಯಾಗಬೇಕಾದರೆ ಸಮಯ ಬೇಕಾಗುತ್ತದೆ ಎಂದು ಸಮರ್ಥಿಸಿಕೊಂಡರು.

ಅಕ್ರಮ ಬಡಾವಣೆಗಳಿಗೆ ಕುಡಿಯುವ ನೀರು, ವಿದ್ಯುತ್ ಸಂಪರ್ಕ ನೀಡುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ಅಕ್ರಮ ಇರಲಿ, ಅಧಿಕೃತ ಇರಲಿ, ಬಡಾವಣೆಗಳಿದ್ದರೆ ಕುಡಿಯುವ ನೀರು, ವಿದ್ಯುತ್ ಸಂಪರ್ಕ ನೀಡಬೇಕೆಂಬ ನಿರ್ದೇಶನವಿದೆ. ಹೀಗಾಗಿ ಅಕ್ರಮ ಬಡಾವಣೆಗಳಿದ್ದರೂ ಸೌಲಭ್ಯಗಳನ್ನು ನೀಡುತ್ತಾರೆಂದರು.

ಖಾನಾಪುರ ತಾಲೂಕಿನಲ್ಲಿ ಅರಣ್ಯ ಪ್ರದೇಶದಲ್ಲಿ ಲೇಔಟ್‌ ಮಾಡುತ್ತಿದ್ದಾರೆಂಬ ಪ್ರಶ್ನೆಗೆ ಉತ್ತರಿಸಿ, ಅರಣ್ಯ ಪ್ರದೇಶದಲ್ಲಿ ಲೇಔಟ್‌ ಮಾಡಲು ಸಾಧ್ಯವಿಲ್ಲ. ಅರಣ್ಯ ಇಲಾಖೆ ಅಧಿಕಾಗಳು ಅರಣ್ಯ ಪ್ರದೇಶದಲ್ಲಿ ನೀಗಾ ಇಟ್ಟಿರುತ್ತಾರೆ. ಅರಣ್ಯ ಪ್ರದೇಶದ ಸುತ್ತಮುತ್ತ ಖಾಸಗಿ ಜಮೀನು ಇದ್ದರೆ ಅಂತಲ್ಲಿ ಲೇಔಟ್‌ಗಳನ್ನು ಹಾಕಿರಬಹುದು ಎಂದರು.

ಭೂ ಸ್ವಾಧೀನಕ್ಕೂ ಮುನ್ನ ಟೆಂಡರ್‌ ಕರೆಯುವುದು ತಪ್ಪು. ಇಂತಹ ತಪ್ಪುಗಳು ಸಾಕಷ್ಟು ನಡೆದಿವೆ. ಬೆಳಗಾವಿ ರಿಂಗ್‌ ರೋಡ್‌ ಕಾಮಗಾರಿಯಲ್ಲಿಯೂ ಇದೇ ರೀತಿಯ ತಪ್ಪು ಆಗಿತ್ತು. ಆದರೆ ಈಗ ಸಮಸ್ಯೆ ಸರಿಪಡಿಸಿದ್ದು, ಬೆಳಗಾವಿ ರಿಂಗ್‌ ರೋಡ್‌ ಕಾಮಗಾರಿ ಆರಂಭವಾಗಿದೆ ಎಂದು ತಿಳಿಸಿದರು.

Leave a Reply

Your email address will not be published. Required fields are marked *

You missed

error: Content is protected !!