Spread the love

ಸಂಯುಕ್ತ ಟೈಮ್ಸ್, ಹಾಸನ:  ಅಸಹಜ ಲೈಂಗಿಕ ದೌರ್ಜನ್ಯದ ಪ್ರಕರಣಕ್ಕೆ ಸಂಬಂಧಿಸಿದಂತೆ JDS MLC ಸೂರಜ್ ರೇವಣ್ಣ ಅವರನ್ನು ಹಾಸನ ಪೊಲೀಸರು ಬಂಧಿಸಿದ್ದಾರೆ.

ಲೈಂಗಿಕ ದೌರ್ಜನ್ಯ ಹಗರಣದಲ್ಲಿ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಬಂಧನವಾಗಿ ವಿಚಾರಣೆ ನಡೆಯುತ್ತಿರುವ ನಡುವೆಯೇ ಎಚ್‌.ಡಿ.ರೇವಣ್ಣ ಕುಟುಂಬದ ಮತ್ತೊಬ್ಬರ ಬಂಧನವಾಗಿದೆ.

ಸಲಿಂಗ ಕಾಮ, ಅಸಹಜ ಲೈಂಗಿಕ ದೌರ್ಜನ್ಯದ ಆರೋಪದ ಮೇಲೆ ಪ್ರಜ್ವಲ್‌ ಸಹೋದರ, ವಿಧಾನ ಪರಿಷತ್ ಸದಸ್ಯ ಸೂರಜ್‌ ರೇವಣ್ಣ ಅವರನ್ನು CEN ಪೊಲೀಸ್ ಠಾಣೆಯಲ್ಲಿ ಬಂಧಿಸಲಾಗಿದೆ.

ನಿನ್ನೆ ರಾತ್ರಿ ತಮ್ಮ ವಿರುದ್ಧ ದಾಖಲಾಗಿದ್ದ ಪ್ರಕರಣದ ವಿಚಾರವಾಗಿ ಹೊಳೆ ನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದರು. ಪ್ರಕರಣದ ಸಂಬಂಧ ಸೂರಜ್‌ ರೇವಣ್ಣ ಅವರನ್ನು ಪೊಲೀಸರು ತೀವ್ರ ವಿಚಾರಣೆಗೆ ಒಳ ಪಡಿಸಿದರು.

ಶನಿವಾರ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾದ ಹಿನ್ನೆಲೆಯಲ್ಲಿ ತಡರಾತ್ರಿವರೆಗೂ ವಿಚಾರಣೆ ನಡೆಯಿತು. ಭಾನುವಾರ ಮುಂಜಾನೆ 4 ಗಂಟೆವರೆಗೂ ಸೂರಜ್‌ನನ್ನು ತನಿಖಾಧಿಕಾರಿಗಳು ವಿಚಾರಣೆಗೆ ಒಳಪಡಿಸಿದರು.

Leave a Reply

Your email address will not be published. Required fields are marked *

You missed

error: Content is protected !!