Spread the love

ಸಂಯುಕ್ತ ಟೈಮ್ಸ್, ಗೋಕಾಕ/ಮೂಡಲಗಿ: ನಗರದ ಹೊರವಲಯದ ಘಟಪ್ರಭಾ ರಸ್ತೆಯಲ್ಲಿರುವ ಬಸವೇಶ್ವರ ಸಭಾ ಭವನದಲ್ಲಿ ದಿನಾಂಕ 05-07-2024 (ಶುಕ್ರವಾರ) ಬೆಳಿಗ್ಗೆ 10 ಘಂಟೆಗೆ ಗೋಕಾಕ ಹಾಗೂ ಮೂಡಲಗಿ ತಾಲ್ಲೂಕುಗಳ ಜನಸ್ಪಂದನಾ ಕಾರ್ಯಕ್ರಮವನ್ನು ಜಿಲ್ಲಾಡಳಿತ ಮತ್ತು ಗೋಕಾಕ ಹಾಗೂ ಮೂಡಲಗಿ ತಾಲ್ಲೂಕು ಆಡಳಿತಗಳು ಜಂಟಿಯಾಗಿ ಹಮ್ಮಿಕೊಂಡಿವೆ.

ಬೆಳಗಾವಿ ಜಿಲ್ಲಾಧಿಕಾರಿ ನಿತೇಶ ಪಾಟೀಲ, ಜಿಲ್ಲಾ ಪೊಲಿಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ, ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ, ಗೋಕಾಕ ಹಾಗೂ ಮೂಡಲಗಿ ತಾಲ್ಲೂಕುಗಳ ತಹಶೀಲ್ದಾರಗಳು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು ಈ ಜನಸ್ಪಂದನಾ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಆಡಳಿತವೇ ಜನರ ಮನೆ ಬಾಗಿಲಿಗೆ ತೆರಳಿ ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಜನಸ್ಪಂದನಾ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ. ಸಾರ್ವಜನಿಕರಿಂದ ಸ್ವೀಕೃತವಾದಂತಹ ಅಹವಾಲುಗಳಿಗೆ ತ್ವರಿತವಾಗಿ ಪರಿಹಾರ ಕಲ್ಪಿಸುವುದು ಹಾಗೂ ಸಾರ್ವಜನಿಕರು ಸರಕಾರಿ ಕಚೇರಿಗೆ ಅಲೆದಾಡುವದನ್ನು ತಪ್ಪಿಸುವದು ಈ ಕಾರ್ಯಕ್ರಮದ ಉದ್ದೇಶವಾಗಿದೆ.

ಜನಸ್ಪಂದನಾ ಕಾರ್ಯಕ್ರಮದಲ್ಲಿ ಸ್ವೀಕೃತವಾಗುವ ಸಾರ್ವಜನಿಕರ ಅಹವಾಲುಗಳಿಗೆ ಸಂಬಂಧಿಸಿದ ಇಲಾಖಾ ಅಧಿಕಾರಿಗಳು ತ್ವರಿತವಾಗಿ ಸ್ಪಂಧಿಸುವದರ ಮೂಲಕ ಸಮಸ್ಯಗಳಿಗೆ ಪರಿಹಾರ ಒದಗಿಸುವ ವೇದಿಕೆಯಾಗಿದೆ.

ಈ ನಿಟ್ಟಿನಲ್ಲಿ ಸಾರ್ವಜನಿಕರು ತಮ್ಮ ಸಮಸ್ಯೆಗಳಿಗೆ ಸಂಬಂಧಪಟ್ಟ ಅಧಿಕಾರಿಗಳಿಂದ ಸ್ಥಳದಲ್ಲಿಯೇ ಪರಿಹಾರ ಕಂಡುಕೊಳ್ಳಬಹುದು ಹಾಗೂ ಸರಕಾರಿ ಕಚೇರಿಗಳಿಗೆ ಪದೇ ಪದೇ ಅಲೆದಾಡುವದನ್ನು ತಪ್ಪಿಸಬಹುದು. ಗೋಕಾಕ ಹಾಗೂ ಮೂಡಲಗಿ ತಾಲ್ಲೂಕುಗಳ ಸಾರ್ವಜನಿಕರು ಈ ಜನಸ್ಪಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಸದುಪಯೋಗ ಪಡೆದುಕೊಳ್ಳಿ.

Leave a Reply

Your email address will not be published. Required fields are marked *

You missed

error: Content is protected !!