Spread the love

ಸಂಯುಕ್ತ ಟೈಮ್ಸ್, ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ. ಕೆಲವು ಇಲಾಖೆಗಳಲ್ಲಿ ಬಯೋಮೆಟ್ರಿಕ್ ಇಲ್ಲದಿರುವ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಜುಲೈ 6 ರೊಳಗೆ  ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆ ಅಳವಡಿಸಿರುವ ಬಗ್ಗೆ ವರದಿ ಪಡೆಯಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ವಿಮಲಾಕ್ಷಿ ಬಿ. ಅವರು ಸುತ್ತೋಲೆ ಹೊರಡಿಸಿದ್ದಾರೆ. ರಾಜ್ಯ ಸರ್ಕಾರವು ಹಲವು ಸುತ್ತೋಲೆಗಳ ಮೂಲಕ ರಾಜ್ಯ ಸರ್ಕಾರದ ಕಚೇರಿಗಳು ಸೇರಿ ಅಧೀನಕ್ಕೊಳಪಡುವ ಎಲ್ಲಾ ನಿಗಮ, ಮಂಡಳಿ, ಸ್ಥಳೀಯ ಸಂಸ್ಥೆಗಳಲ್ಲಿ ಅಧಿಕಾರಿ, ನೌಕರರ ದೈನಂದಿನ ಹಾಜರಾತಿಯನ್ನು ಬಯೋಮೆಟ್ರಿಕ್ ಯಂತ್ರದ ಮೂಲಕ ದಾಖಲಿಸಲು ಬಯೋಮೆಟ್ರಿಕ್ ಹಾಜರಾತಿಯನ್ನು ಕಡ್ಡಾಯವಾಗಿ ಜಾರಿಗೊಳಿಸಲು ನಿರ್ದೇಶನಗಳನ್ನು ನೀಡಿದೆ, ಆದರೂ ಹಲವೆಡೆ ಈವರೆಗೂ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆ ಅಳವಡಿಕೆಯಾಗಿಲ್ಲ.

ಈವರೆಗೂ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸದ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದಿವೆ. ಹೀಗಾಗಿ ಸರ್ಕಾರಿ ಕಚೇರಿಗಳಲ್ಲಿ ಜುಲೈ 6ರೊಳಗೆ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆ ಅವಡಿಸಿರುವ ವರದಿ ನೀಡಬೇಕು ಎಂದು ಸರ್ಕಾರದ ಎಲ್ಲಾ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ದರ್ಶಿಗಳಿಗೆ ಸೂಚನ ನೀಡಿದ್ದಾರೆ.

Leave a Reply

Your email address will not be published. Required fields are marked *

You missed

error: Content is protected !!