ಸಂಯುಕ್ತ ಟೈಮ್ಸ್, ಮಂಗಳೂರು: ಮಂಗಳೂರಿನಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಲಂಚ ಸ್ವೀಕರಿಸುತ್ತಿದ್ದ ಕೆಎಸ್ಆರ್ಪಿ ಇನ್ಸ್ಪೆಕ್ಟರ್ ಒಬ್ಬರನ್ನು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಇನ್ಸ್ಪೆಕ್ಟರ್ ಮೊಹಮ್ಮದ್ ಆರೀಸ್ ಎಂಬುವವರೇ ಲೋಕಾಯುಕ್ತ ಬಲೆಗೆ ಬಿದ್ದವರು. ಸಿಬ್ಬಂದಿಯೊಬ್ಬರಿಗೆ ಕರ್ತವ್ಯದ ಸ್ಥಳ ನಿಯೋಜಿಸಲು 18 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಮಂಗಳೂರು ಹೊರವಲಯದ ಅಸೈಗೋಳಿಯ ಕೆಎಸ್ಆರ್ಪಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿಗೆ ಕರ್ತವ್ಯ ಸ್ಥಳ ನಿಯೋಜಿಸಲು ಲಂಚಕ್ಕೆ ಡಿಮಾಂಡ್ ಮಾಡಿದ್ದಾರೆ. ಪ್ರತಿ ತಿಂಗಳು 6 ಸಾವಿರ ಲಂಚ ನೀಡಲು ಡಿಮ್ಯಾಂಡ್ ಮಾಡಲಾಗಿತ್ತು, ಈ ಕುರಿತು ಸಿಬ್ಬಂದಿ ಲೋಕಾಯುಕ್ತ ಅಧಿಕಾರಿಗೆ ದೂರು ನೀಡಿದ್ದರು. ನಂತರ ಲಂಚ ಸ್ವೀಕರಿಸುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಲೋಕಾಯುಕ್ತ ಎಸ್ ಪಿ ನಟರಾಜ್, ಡಿವೈಎಸ್ಪಿ ಚೆಲುವರಾಜ್ ನೇತೃತ್ವದಲ್ಲಿ ದಾಳಿ ನಡೆದಿದ್ದು, ಇನ್ಸ್ಪೆಕ್ಟರ್ರನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

