Spread the love

ಸಂಯುಕ್ತ ಟೈಮ್ಸ್, ಬೆಳಗಾವಿ: ಆದಾಯಕ್ಕಿಂದ ಹೆಚ್ಚಿನ ಆಸ್ತಿಗಳಿಗೆ ಮಾಡಿರುವ ಆರೋಪದ ಮೇರೆಗೆ ಬೆಳಗಾವಿ ಜಿಲ್ಲಾ ಪಂಚಾಯತ AEE ಮಹಾದೇವ ಬನ್ನೂರ ಮನೆಯ ಮೇಲೆ ಗುರುವಾರ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಮಹತ್ವದ ದಾಖಲೆ ಪರಿಶೀಲನೆ ನಡೆಸಿದ್ದಾರೆ.

ಬೆಳಗಾವಿ ತಾಲೂಕಿನ ಯಳ್ಳೂರ ಹೊರವಲಯದಲ್ಲಿರುವ ಬನ್ನೂರ ಮನೆಯ ಮೇಲೆ ದಾಳಿ ಮಾಡಿರುವ ಲೋಕಾಯುಕ್ತ ಅಧಿಕಾರಿಗಳು ಮನೆಯ ಕೋಣೆ ಕೋಣೆಯಲ್ಲಿ ತಪಾಸಣೆ ನಡೆಸಿದ್ದಾರೆ.

ಈ ಹಿಂದೆಯೂ ಮಹಾದೇವ ಬನ್ನೂರ ಮೇಲೆ ದಾಳಿ ಮಾಡಿದ್ದ ಲೋಕಾಯುಕ್ತ ಅಧಿಕಾರಿಗಳು ಆಗ ದಾಳಿಯಲ್ಲಿ ಮಹತ್ವದ ದಾಖಲೆ ಸಂಗ್ರಹ ಮಾಡಿಕೊಂಡು ತೆರಳಿದ್ದರು. ಅದರ ಮುಂದುವರೆದ ಭಾಗವಾಗಿ ಮತ್ತೊಮ್ಮೆ ದಾಳಿ ಮಾಡಿದ್ದಾರೆ‌.

ಲೋಕಾಯುಕ್ತ ಡಿವೈಎಸ್ಪಿ ಭರತ್ ರೆಡ್ಡಿ ನೇತೃತ್ವದ ತಂಡದಿಂದ ದಾಳಿ ನಡೆಸಿ ತೀವ್ರ ತಪಾಸಣೆ ನಡೆಸಿದ್ದಾರೆ‌.

Leave a Reply

Your email address will not be published. Required fields are marked *

You missed

error: Content is protected !!