Spread the love

ಸಂಯುಕ್ತ ಟೈಮ್ಸ್, ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ ಪ್ರಕರಣದಲ್ಲಿ ಮಾಜಿ ಸಚಿವ ನಾಗೇಂದ್ರ ಅವರನ್ನು ED ವಶಕ್ಕೆ ಪಡೆದಿದೆ.

ಪ್ರಕರಣ ಸಂಬಂಧ ವಿಚಾರಣೆಗೆ ನಾಗೇಂದ್ರ ಅವರ ಮನೆಗೆ ಜಾರಿ ನಿರ್ದೇಶನಾಲಯದ ನಾಲ್ವರು ಅಧಿಕಾರಿಗಳ ತಂಡ ಆಗಮಿಸಿತು. ಬಳಿಕ ಮಾಜಿ ಸಚಿವರನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. 

ಬಳಿಕ ಶಾಂತಿನಗರ ಇಡಿ ಕಚೇರಿಗೆ ಕರೆತಂದಿದ್ದಾರೆ. ಇತ್ತ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್‌ ಅವರ ED ತಂಡ ಹೋಗಿದೆ ಎನ್ನಲಾಗಿದೆ.

ಬುಧವಾರವಷ್ಟೇ ನಾಗೇಂದ್ರ, ದದ್ದಲ್‌ ಅವರ ಆಪ್ತರು ಹಾಗೂ ಇತರ ಅಧಿಕಾರಿಗಳ ಮನೆ ಮತ್ತು ಕಚೇರಿಗಳಿಗೆ ED ದಾಳಿ ನಡೆಸಿತ್ತು. ಈ ವೇಳೆ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದಿತ್ತು. 

Leave a Reply

Your email address will not be published. Required fields are marked *

You missed

error: Content is protected !!