Spread the love

ಸಂಯುಕ್ತ ಟೈಮ್ಸ್, ಬೆಳಗಾವಿ: ವ್ಯಾಪಕ ಮಳೆಯ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಇನ್ನೂ ಕೆಲವು ತಾಲೂಕುಗಳ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಉಪ ನಿರ್ದೇಶಕರು, ಶಾಲಾ ಶಿಕ್ಷಣ ಇಲಾಖೆ, ಬೆಳಗಾವಿ ಇವರು ಪತ್ರ ಸಲ್ಲಿಸಿ, ಧಾರಕಾರವಾಗಿ ಮಳೆಯು ಸುರಿಯುತ್ತಿರುವುರಿಂದ ಶಾಲೆಗಳಲ್ಲಿ ಮಳೆ ನೀರು ಹರಿದು ಮತ್ತು ಹಲವಾರು ಶಾಲಾ ಕಟ್ಟಡಗಳು ಸೋರುತ್ತಿರುವುದರಿಂದ ವಿದ್ಯಾರ್ಥಿಗಳು ಶಾಲೆಗೆ ಹೋಗಲು ಸಾಧ್ಯವಾಗದೇ ಇರುವುದರಿಂದ ದಿನಾಂಕ: 26.07.2024 ರಂದು ಗೋಕಾಕ, ಮೂಡಲಗಿ, ರಾಯಬಾಗ ಹಾಗೂ ಹುಕ್ಕೇರಿ ತಾಲೂಕುಗಳಲ್ಲಿಯ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆಯನ್ನು ನೀಡುವಂತೆ ವಿನಂತಿಸಿರುತ್ತಾರೆ

ಜಿಲ್ಲೆಯ ಗೋಕಾಕ, ಮೂಡಲಗಿ, ರಾಯಬಾಗ ಹಾಗೂ ಹುಕ್ಕೇರಿ ತಾಲೂಕುಗಳಲ್ಲಿ ಹೆಚ್ಚಿನ ಮಳೆಯಾಗುತ್ತಿರುವುದರಿಂದ ಘಟಪ್ರಭಾ, ಹಿರಣ್ಯಕೇಶಿ ನದಿಗಳು, ವಿವಿಧ ಹಳ್ಳಗಳು ತುಂಬಿ ಹರಿಯುತ್ತಿರುವುದರಿಂದ ಶಾಲಾ ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ ವಿಪತ್ತು ನಿರ್ವಹಣಾ ಕಾಯ್ದೆ 2005 ರ ಕಲಂ 34(ಎಮ್) ರಡಿ ಜಿಲ್ಲಾಧಿಕಾರಿ ಹಾಗೂ ಅಧ್ಯಕ್ಷರು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ರವರಿಗೆ ಪ್ರದತ್ತವಾದ ಅಧಿಕಾರದ ಮೇರೆಗೆ ಬೆಳಗಾವಿ ಜಿಲ್ಲೆಯ ಗೋಕಾಕ, ಮೂಡಲಗಿ, ರಾಯಬಾಗ ಹಾಗೂ ಹುಕ್ಕೇರಿ ತಾಲೂಕುಗಳಾದ್ಯಂತ ಅಂಗನವಾಡಿ, ಎಲ್ಲಾ ಸರ್ಕಾರಿ, ಸರ್ಕಾರಿ ಅನುದಾನಿತ, ಅನುದಾನರಹಿತ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ದಿನಾಂಕ: 26.07.2024 ರಂದು ರಜೆ ಘೋಷಿಸುವ ಕುರಿತು ಈ ಕೆಳಗಿನಂತೆ ಆದೇಶ ಮಾಡಿದೆ.

Leave a Reply

Your email address will not be published. Required fields are marked *

You missed

error: Content is protected !!