Spread the love

ಸಂಯುಕ್ತ ಟೈಮ್ಸ್, ಮೂಡಲಗಿ: ಕಟ್ಟಡ ಕಾರ್ಮಿಕರಿಗಾಗಿ ಸರ್ಕಾರವು ಹಲವಾರು ಯೋಜನೆಗಳನ್ನು ರೂಪಿಸಿದ್ದು, ಅಂತಹ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಲು ಅರಭಾವಿ ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಸಲಹೆ ನೀಡಿದರು.

ಶುಕ್ರವಾರ ಪಟ್ಟಣದ ತಹಶೀಲ್ದಾರರ ಕಚೇರಿ ಬಳಿ ಕಾರ್ಮಿಕ ಇಲಾಖೆಯಿಂದ ಕಿಟ್ ಗಳನ್ನು ವಿತರಿಸಿ ಮಾತನಾಡಿದ ಅವರು, ಕಾರ್ಮಿಕರ ಏಳಿಗೆಗಾಗಿ ಇರುವ ಸೌಲಭ್ಯಗಳನ್ನು ಕಟ್ಟಡ ಕಾರ್ಮಿಕರು ಪಡೆದುಕೊಳ್ಳುವಂತೆ ಅವರು ತಿಳಿಸಿದರು.

ಕಟ್ಟಡಗಳ ನಿರ್ಮಾಣದಲ್ಲಿ ಕಾರ್ಮಿಕರ ಪಾತ್ರ ಮಹತ್ವದ್ದಾಗಿದೆ. ಕಟ್ಟಡಗಳಿಗೆ ಅಗತ್ಯವಿರುವ ವಿವಿಧ ವಿಭಾಗಗಳಿಗೆ ಸೇರಿರುವ ಕಾರ್ಮಿಕರು ಈ ಸೌಲಭ್ಯಗಳಿಗೆ ಅರ್ಹರಾಗಿದ್ದಾರೆ. 60 ವರ್ಷ ಮೇಲ್ಪಟ್ಟ ನೋಂದಾಯಿತ ಕಾರ್ಮಿಕರಿಗೆ ಸರ್ಕಾರ ಪ್ರತಿ ತಿಂಗಳು 3 ಸಾವಿರ ರೂಪಾಯಿ ವೇತನ ನೀಡುತ್ತಿದೆ. ಕಟ್ಟಡ ಕಾಮಗಾರಿ ನಡೆಯುವ ವೇಳೆ ಕಾರ್ಮಿಕರು ಮೃತಪಟ್ಟರೆ ಅಂತಹವರಿಗೆ ರೂಪಾಯಿ 5 ಲಕ್ಷ ವರೆಗೆ ವಿಮಾ ಸೌಲಭ್ಯವಿದೆ. ಸುಮಾರು 2 ಲಕ್ಷ ರೂಪಾಯಿವರೆಗಿನ ಆರೋಗ್ಯದ ವೆಚ್ಚವನ್ನು ಇಲಾಖೆಯೇ ಭರಿಸಲಿದೆ. ಕಟ್ಟಡ ನಿರ್ಮಾಣ ಮಾಡುವ ಕಾರ್ಮಿಕರು ಕಾರ್ಮಿಕ ಇಲಾಖೆಯಲ್ಲಿ ತಮ್ಮ ಹೆಸರುಗಳನ್ನು ನೋಂದಾಯಿಸಿ ಗುರುತಿನ ಚೀಟಿಗಳನ್ನು ಪಡೆದರೆ ಮಾತ್ರ ಸರ್ಕಾರಿ ಸೌಲಭ್ಯಗಳನ್ನು ಪಡೆಯಲು ಸಾಧ್ಯವಾಗುತ್ತದೆ ಎಂದು ಅವರು ಹೇಳಿದರು.

ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು 2023-2024ನೇ ಸಾಲಿನ ಕಾರ್ಮಿಕರಿಗೆ 1200 ಕಿಟ್ ಗಳನ್ನು
ವಿತರಿಸಿದರು.

ಈ ಸಂದರ್ಭದಲ್ಲಿ ಗೋಕಾಕ ಕಾರ್ಮಿಕ ನಿರೀಕ್ಷಕರಾದ ಅಶೋಕ ವಡ್ಡರ, ಹಣಮಂತ ಗುಡ್ಡಮನಿ, ಸುಭಾಸ ಗೋಡ್ಯಾಗೋಳ, ಪುರಸಭೆ ಸದಸ್ಯರು, ಅಧಿಕಾರಿಗಳು ಸೇರಿದಂತೆ ಕಾರ್ಮಿಕರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You missed

error: Content is protected !!