Spread the love

ಸಂಯುಕ್ತ ಟೈಮ್ಸ್, ಬೆಂಗಳೂರು: ರಾಜ್ಯ ಸರ್ಕಾರವು ಅನರ್ಹ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಬಿಗ್ ಶಾಕ್ ನೀಡಲು ಮುಂದಾಗಿದ್ದು, ರಾಜ್ಯದಲ್ಲಿ 22 ಲಕ್ಷ ಅಂತ್ಯೋದಯ, ಬಿಪಿಎಲ್ ಕಾರ್ಡುಗಳು ಪತ್ತೆಯಾಗಿವೆ. ಅನರ್ಹ ಪಡಿತರ ಚೀಟಿಗಳನ್ನು ರದ್ದುಪಡಿಸುವ ಕಾರ್ಯಕ್ಕೆ ಆಹಾರ ಇಲಾಖೆ ವೇಗ ನೀಡಿದೆ.

ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ಹೊಂದಿರುವ ಅನರ್ಹ ಫಲಾನುಭವಿಗಳನ್ನು ಗುರುತಿಸುವ ಕೆಲಸಕ್ಕೆ ಆಹಾರ ಇಲಾಖೆ ಮುಂದಾಗಿದೆ. ಈ ಮೂಲಕ ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಪಡೆದವರಿಗೆ ಡವ ಡವ ಶುರುವಾಗಿದೆ. ಸುಳ್ಳು ದಾಖಲೆ ನೀಡಿ ಬಿಪಿಎಲ್ ಕಾರ್ಡ್ ಪಡೆದಿದ್ದರೆ ಇದುವರೆಗೂ ನ್ಯಾಯ ಬೆಲೆ ಅಂಗಡಿಗಳಲ್ಲಿ ಪಡೆದ ಅಕ್ಕಿ ಹಾಗೂ ಇತರೆ ಧಾನ್ಯಗಳ ಮೊತ್ತವನ್ನು ಮರಳಿಸಬೇಕು ಜೊತೆಗೆ ಕ್ರಿಮಿನಲ್ ಕೇಸ್ ಎದುರಸಬೇಕು

ರಾಜ್ಯದಲ್ಲಿ 22,62,413 ಅನರ್ಹ ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡುಗಳು ಇರುವುದನ್ನು ಈ ತಂತ್ರಾಂಶದ ಮೂಲಕ ಪತ್ತೆ ಮಾಡಲಾಗಿದೆ. ಸರ್ಕಾರ ನಿಗದಿಪಡಿಸಿದ ಮಾನದಂಡಗಳಿಗೆ ವಿರುದ್ಧವಾಗಿ ಪಡೆದ ಅನರ್ಹ ಪಡಿತರ ಚೀಟಿಗಳ ವಿವರ ನೀಡುವಂತೆ ಆಹಾರ ಇಲಾಖೆ ಇ- ಆಡಳಿತ ಕೇಂದ್ರಕ್ಕೆ ಮನವಿ ಮಾಡಿದ್ದು, ಈ ತಂತ್ರಾಂಶದಿಂದ ದೊರೆತ ಮಾಹಿತಿಯ ಅನ್ವಯ 10,97,621 ಬಿಪಿಎಲ್, ಅಂತ್ಯೋದಯ ಕಾರ್ಡ್ ಗಳು ಪತ್ತೆಯಾಗಿವೆ.

10,54,368 ಕಾರ್ಡುಗಳನ್ನು 1.20 ಲಕ್ಷ ರೂಪಾಯಿಗಿಂತ ಹೆಚ್ಚು ಆದಾಯ ಪಡೆಯುತ್ತಿರುವವರು ಹೊಂದಿದ್ದಾರೆ. 1,06,152 ಕಾರ್ಡ್ ಗಳನ್ನು ಆದಾಯ ತೆರಿಗೆ ಪಾವತಿದಾರರು ಪಡೆದುಕೊಂಡಿದ್ದಾರೆ. 4272 ಪಡಿತರ ಚೀಟಿಗಳು ಕೆಜಿಐಡಿ ಹೆಚ್.ಆರ್.ಎಂ.ಎಸ್.ನಲ್ಲಿ ಜೋಡಣೆ ಆಗಿರುವುದನ್ನು ಕುಟುಂಬ ತಂತ್ರಾಂಶದಲ್ಲಿ ಇ- ಆಡಳಿತ ಕೇಂದ್ರ ಪತ್ತೆ ಮಾಡಿದೆ. ತೆರಿಗೆ ಪಾವತಿಸುವವರು, ಸರ್ಕಾರಿ ಮತ್ತು ಅರೆ ಸರ್ಕಾರಿ ನೌಕರರು, ಮನೆಗಳನ್ನು ಬಾಡಿಗೆ ಕೊಟ್ಟಿರುವವರು, 7.5 ಎಕರೆಗಿಂತ ಹೆಚ್ಚು ಭೂಮಿ ಹೊಂದಿರುವವರು ಬಿಪಿಎಲ್ ಕಾರ್ಡ್ ಪಡೆಯುವಂತಿಲ್ಲ.

Leave a Reply

Your email address will not be published. Required fields are marked *

You missed

error: Content is protected !!