Spread the love

ಸಂಯುಕ್ತ ಟೈಮ್ಸ್, ಹುಕ್ಕೇರಿ: ಚಿಕ್ಕೋಡಿ ಉಪವಿಭಾಗ ವ್ಯಾಪ್ತಿಯ ವಿವಿಧೆಡೆ ಮಳೆ ಆರ್ಭಟ ಮುಂದುವರೆದಿದ್ದು ಬಿರುಗಾಳಿ ಸಹಿತ ಭಾರೀ ಮಳೆಗೆ ಶಾಲೆಯ ಮೇಲ್ಛಾವಣಿ ಹಾರಿ ಹೋಗಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹಂಚಿನಾಳ ಗ್ರಾಮದಲ್ಲಿ ನಡೆದಿದೆ.

ಸೋಮವಾರ ಸಂಜೆ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಗೆ ಹಂಚಿನಾಳ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೇಲ್ಛಾವಣಿ ಹಾರಿ ಹೋಗಿವೆ. ವಿದ್ಯಾರ್ಥಿಗಳು ಶಾಲೆ ಮುಗಿಸಿ ಮನೆಗೆ ಹೋದ ಮೇಲೆ ಈ ಘಟನೆ ಸಂಭವಿಸಿದೆ. 

ನಿನ್ನೆಯಷ್ಟೇ (ಸೋಮವಾರ) ದಸರಾ ಬಳಿಕ ಶಾಲೆ ಆರಂಭವಾಗಿತ್ತು. ಸಾಯಂಕಾಲ ಶಾಲೆಗೆ ಬಿಡುವಾದ ಕಾರಣ ಭಾರೀ ಅನಾಹುತ ತಪ್ಪಿದೆ. ಬಿರುಗಾಳಿಗೆ ಶಾಲೆಯ ಮೇಲಿದ್ದ ಮೇಲ್ಛಾವಣಿ ಸಂಪೂರ್ಣ ಹಾರಿ ಹೋಗಿ ಶಾಲಾ ಮುಂಭಾಗದಲ್ಲಿ ಬಿದ್ದಿದೆ. ಕಳಪೆ ಕಾಮಗಾರಿಯಿಂದ ಶಾಲೆಯ ಮೇಲ್ಛಾವಣಿ ಹಾರಿ ಹೋಗಿರುವ ಶಂಕೆ ವ್ಯಕ್ತವಾಗಿದೆ. 

ಯಮಕನಮರಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Leave a Reply

Your email address will not be published. Required fields are marked *

You missed

error: Content is protected !!