ಸಂಯುಕ್ತ ಟೈಮ್ಸ್, ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯನವರಿಗೆ ಲೋಕಾಯುಕ್ತ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.

ನವೆಂಬರ್ 6 ಬುಧವಾರ 10:30ಕ್ಕೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಲಾಗಿದೆ. ಈಗಾಗಲೇ ಪತ್ನಿ ಪಾರ್ವತಿ ಅವರನ್ನು ಲೋಕಾಯುಕ್ತ ಪೊಲೀಸರು ವಿಚಾರಣೆ ನಡೆಸಿದ್ದರು.
ಸಿದ್ದರಾಮಯ್ಯನವರ 40 ವರ್ಷದ ಇತಿಹಾಸದಲ್ಲಿ ಇಲ್ಲಿಯವರೆಗೆ ತನ್ನ ವೈಯಕ್ತಿಕ ವಿಚಾರಕ್ಕೆ ಸಂಬಂಧಿಸಿದಂತೆ ಪೊಲೀಸ್ ಆಗಲಿ ಇತರ ವಿಚಾರಣಾ ಸಂಸ್ಥೆಯಿಂದ ನೋಟಿಸ್ ಸ್ವೀಕರಿಸಿರಲಿಲ್ಲ. ಆದರೆ ಈಗ ಮುಡಾ ಅಕ್ರಮಕ್ಕೆ ಸಂಬಂಧಿಸಿದಂತೆ ನೋಟಿಸ್ ಸ್ವೀಕರಿಸಿದ್ದಾರೆ.

