Spread the love

ಸಂಯುಕ್ತ ಟೈಮ್ಸ್, ಬೆಳಗಾವಿ: ಟ್ರ್ಯಾಕ್ಟರ್‌ಗಳಲ್ಲಿ ಅತಿಯಾದ ಸೌಂಡ್ ಬಳಸಿ ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡುತ್ತಿದ್ದ ಚಾಲಕರಿಗೆ ಬೆಳಗಾವಿ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ.

ಬೆಳಗಾವಿ ಜಿಲ್ಲೆಯಾದ್ಯಂತ ಎಲ್ಲ ಸಕ್ಕರೆ ಕಾರ್ಖಾನೆಗಳಲ್ಲಿ ಕಬ್ಬು ನುರಿಸುವ ಪ್ರಕ್ರಿಯೆ ಆರಂಭವಾಗಿದೆ. ಜಮೀನಿನಿಂದ ಕಾರ್ಖಾನೆಗೆ ಕಬ್ಬು ಒಯ್ಯುವ ಟ್ರ್ಯಾಕ್ಟರ್‌ಗಳಲ್ಲಿ ಚಾಲಕರು ವಿಪರೀತ ಸೌಂಡ್ ಬಳಸ್ತಿದ್ದಾರೆ. ಜಾನಪದ ಹಾಡುಗಳನ್ನು ಹಚ್ಚಿ ಅಧಿಕ ಸೌಂಡ್‌ನೊಂದಿಗೆ ಚಾಲಕರು ಕಬ್ಬು ಒಯ್ಯುತ್ತಿದ್ದಾರೆ.

ಮುನವಳ್ಳಿ ಪಟ್ಟಣದಲ್ಲಿ ಟ್ರ್ಯಾಕ್ಟರ್‌ಗಳ ಮೇಲೆ ಸವದತ್ತಿ ಪೊಲೀಸರು ದಾಳಿ ನಡೆಸಿದ್ದಾರೆ. ಟೇಪ್‌ಗಳನ್ನು ಟ್ರ್ಯಾಕ್ಟರ್ ಚಕ್ರಕ್ಕೆ ಇಟ್ಟು ಹಾನಿಗೊಳಿಸಿದ್ದಾರೆ‌. ಸಾರ್ವಜನಿಕರಿಗೆ ತೊಂದರೆ ಮಾಡಿದ್ರೆ ಕಠಿಣ ಕ್ರಮದ ಎಚ್ಚರಿಕೆಯನ್ನು ಪೊಲೀಸರು ನೀಡಿದ್ದಾರೆ.

Leave a Reply

Your email address will not be published. Required fields are marked *

You missed

error: Content is protected !!