Spread the love

ಸಂಯುಕ್ತ ಟೈಮ್ಸ್, ಬೆಂಗಳೂರು: ಕಡೆಗೂ ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆಗೆ ರಾಜ್ಯ ಸರ್ಕಾರ ಒಪ್ಪಿಗೆ ನೀಡಿದ್ದು, ರಾಜ್ಯಭವನಕ್ಕೆ ಕಳುಹಿಸಿದೆ. `ಕರ್ನಾಟಕ ಮೈಕ್ರೋ ಫೈನಾನ್ಸ್ (ಬಲವಂತದ ಕ್ರಮಗಳ ತಡೆ) ಸುಗ್ರೀವಾಜ್ಞೆ-2025′ ಅನ್ನು ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಲಾಗಿದೆ. ಸುಗ್ರೀವಾಜ್ಞೆಯಲ್ಲಿ ಮೈಕ್ರೋ ಫೈನಾನ್ಸ್‌ಗಳ ಕಿರುಕುಳಕ್ಕೆ 10 ವರ್ಷ ಜೈಲು, 5 ಲಕ್ಷದ ತನಕ ದಂಡ ವಿಧಿಸಲು ಅವಕಾಶ ಕಲ್ಪಿಸಲಾಗಿದೆ.

ಇದೇ ವೇಳೆ ನೋಂದಣಿ ರಹಿತ ಮತ್ತು ಪರವಾನಗಿ ರಹಿತ ಮೈಕ್ರೋ ಫೈನಾನ್ಸ್ ಕಂಪನಿಗಳು, ಲೇವಾದೇವಿದಾರರು ನೀಡಿರುವ ಸಾಲ ಹಾಗೂ ಬಡ್ಡಿ ವಸೂಲಿಗೂ ಕೊಕ್ಕೆ ಹಾಕಿದ್ದು, ಸಾಲ, ಬಡ್ಡಿ ನೀಡುವಂತಿಲ್ಲ ಎಂಬ ಅಂಶ ಸೇರ್ಪಡೆ ಮಾಡಲಾಗಿದ್ದು, ಸಾಲಗಾರರ ಮೇಲೆ ಯಾವುದೇ ಸಿವಿಲ್ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಲು ಅವಕಾಶವಿರುವುದಿಲ್ಲ. ಸುಗ್ರೀವಾಜ್ಞೆ ಜಾರಿಯಾದ ಕ್ಷಣದಿಂದ ಸಾಲ, ಬಡ್ಡಿ ಮನ್ನಾ ವಿಷಯಕ್ಕೆ ಸಂಬಂಧಪಟ್ಟ ಅರ್ಜಿಗಳು ರದ್ದುಗೊಳ್ಳಲಿವೆ ಎಂಬುದನ್ನ ಸೇರಿಸಲಾಗಿದೆ.

Leave a Reply

Your email address will not be published. Required fields are marked *

You missed

error: Content is protected !!