Spread the love

ಸಂಯುಕ್ತ ಟೈಮ್ಸ್, ಗೋಕಾಕ:  ರಾತ್ರಿ ವೇಳೆ ಭೀಕರ ಸಿಲಿಂಡರ್ ಸ್ಫೋಟ ಸಂಭವಿಸಿದ ಪರಿಣಾಮ 9 ತಿಂಗಳ ಮಗು ಸೇರಿದಂತೆ ಒಂದೇ ಕುಟುಂಬದ 7 ಜನರಿಗೆ ಗಂಭೀರ ಗಾಯಗಳಾಗಿರುವ ಘಟನೆ ಗೋಕಾಕ ತಾಲೂಕಿನ ಅಕ್ಕತಂಗೇರಹಾಳ ಗ್ರಾಮದಲ್ಲಿ ನಡೆದಿದೆ.

ರಾತ್ರಿ ಮನೆಮಂದಿಯೆಲ್ಲಾ ಮಲಗಿದ್ದ ವೇಳೆ ಮನೆಯಲ್ಲಿದ್ದ ಸಿಲಿಂಡರ್ ಗ್ಯಾಸ್ ಸೋರಿಕೆಯಾಗಿತ್ತು. ಈ ವೇಳೆ ಗ್ಯಾಸ್ ವಾಸನೆಗೆ ಮೊಬೈಲ್ ಟಾರ್ಚ್ ಆನ್ ಮಾಡಿ ನೋಡಲು ಹೋದಾಗ ಏಕಾಏಕಿ ಸಿಲಿಂಡರ್ ಸ್ಫೋಟಗೊಂಡಿದೆ. ಸ್ಫೋಟದ ರಭಸಕ್ಕೆ ಮನೆಯ ಹಂಚು ಹಾರಿ ಹೋಗಿದೆ. ಮನೆಯ ವಸ್ತುಗಳೆಲ್ಲಾ ಚೆಲ್ಲಾಪಿಲ್ಲಿಯಾಗಿ ಬಿದ್ದಿದೆ.

ಘಟನೆಯಲ್ಲಿ ರಾಜಶ್ರೀ ನಿರ್ವಾಣಿ (42), ಅಶೋಕ ನಿರ್ವಾಣಿ (45), ಸೋಮನಗೌಡ (44), ದೀಪಾ (42), ನವೀನ (14), ವಿದ್ಯಾ (13), ಬಸನಗೌಡ ನಿರ್ವಾಣಿ (9 ತಿಂಗಳು) ಗಾಯಗೊಂಡಿದ್ದಾರೆ. ಈ ಪೈಕಿ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನುಳಿದವರಿಗೆ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Leave a Reply

Your email address will not be published. Required fields are marked *

You missed

error: Content is protected !!