Spread the love

ಸಂಯುಕ್ತ ಟೈಮ್ಸ್,  ಬೆಳಗಾವಿ: ಬೆಳಗಾವಿಯ ನಾನಾವಾಡಿಯಲ್ಲಿ 14 ವರ್ಷದ ಬಾಲಕಿಯ ಮೇಲೆ ಮೂವರು ಅಪ್ರಾಪ್ತ ಬಾಲಕರು ಸಾಮೂಹಿಕ ಅತ್ಯಾಚಾರ ಎಸಗಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ.

ಬಾಲಕಿಯನ್ನು ಪುಸಲಾಯಿಸಿ, ನಗರದ ಹೊರವಲಯದ ಪ್ರದೇಶಕ್ಕೆ ಕರೆದೊಯ್ದಿರುವ ಬಾಲಕರು, ಪಾರ್ಟಿ ಬಳಿಕ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಘಟನೆ ಮೇ 6ರಂದು ನಡೆದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಘಟನೆ ಸಂಬಂಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾದ ಬಳಿಕ ಘಟನೆ ಬೆಳಕಿಗೆ ಬಂದಿದೆ.

ಇದರ ಬೆನ್ನಲ್ಲೇ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು, ಇದೀಗ ಇಬ್ಬರು ಅಪ್ರಾಪ್ತ ಬಾಲಕರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಮತ್ತೋರ್ವನಿಗಾಗಿ ಹುಡುಕಾಟ ಆರಂಭಿಸಿದ್ದಾರೆ.

ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆ (ಐಪಿಸಿ) ಯ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬೆಳಗಾವಿ ಪೊಲೀಸ್ ಆಯುಕ್ತ ಇಡಾ ಮಾರ್ಟಿನ್ ಮಾರ್ಬ್ನ್ಯಾಂಗ್ ಅವರು ಮಾತನಾಡಿ, ಪ್ರಮುಖ ಆರೋಪಿ ಅಪ್ರಾಪ್ತ ವಯಸ್ಕನನ್ನು ವಶಕ್ಕೆ ಪಡೆಯಲಾಗಿದೆ. ಉಳಿದ ಆರೋಪಿಗಳಿಗಾಗಿ ಹುಡುಕಾಟ ಮುಂದುವರೆದಿದೆ. ಬಾಲಕಿಗೆ ನ್ಯಾಯ ಒದಗಿಸಲು ಸಮಗ್ರ ತನಿಖೆ ನಡೆಸಲಾಗುವುದು ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

You missed

error: Content is protected !!