Spread the love

ಸಂಯುಕ್ತ ಟೈಮ್ಸ್ ಗದಗ: ತಹಶೀಲ್ದಾರ ಕಚೇರಿಯಲ್ಲಿ ನ್ಯಾಯ ಕೇಳಲು ಹೋದ ಯುವಕನ ಮೇಲೆ ಹಲ್ಲೆ ಮಾಡಿದ ಉಪ-ತಹಶೀಲ್ದಾರರನ್ನು ಅಮಾನತ್ತು ಮಾಡಲಾಗಿದೆ.

ಮೇ 17ರಂದು ರಾತ್ರಿ ಉಪ-ತಹಶೀಲ್ದಾರ ಡಿ.ಟಿ ವಾಲ್ಮೀಕಿ, ಕಾಂಗ್ರೆಸ್ ಮುಖಂಡ ವಿದ್ಯಾಧರ್ ದೊಡ್ಡಮನಿ ಹಾಗೂ ಸಹಚರರು ಒಟ್ಟಾಗಿ ಅಕ್ಷಯ್ ಎಂಬ ಯುವಕನ ಮೇಲೆ ಹಲ್ಲೆ ಮಾಡಿದ್ದರು. ಅಕ್ಷಯ್ ಎಂಬ ಯುವಕ ಬೈಕ್‌ನಲ್ಲಿ ತೆರಳುತ್ತಿದ್ದಾಗ ಎದುರಿನಿಂದ ಕಾರಿನಲ್ಲಿ ಬಂದ ಉಪ-ತಹಶೀಲ್ದಾರ ಹಾಗೂ ಅವರ ಸಹಚರರು ಬೈಕ್‌ಗೆ ಡಿಕ್ಕಿ ಹೊಡೆದಿದ್ದರು. ಈ ಬಗ್ಗೆ ಪ್ರಶ್ನೆ ಮಾಡಿ ನ್ಯಾಯ ಕೇಳಲು ಹೋದ ಯುವಕನನ್ನು ಕೊಠಡಿಯಲ್ಲಿ ಕೂಡಿ ಹಾಕಿ ಹಲ್ಲೆ ಮಾಡಿದ್ದರು ಎನ್ನಲಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಗದಗದ ಬೆಟಗೇರಿ ನಾಡಕಚೇರಿಯ ಉಪ-ತಹಶೀಲ್ದಾರ ಡಿ.ಟಿ ವಾಲ್ಮೀಕಿ ಅವರನ್ನು ಅಮಾನತ್ತುಗೊಳಿಸಿ ಜಿಲ್ಲಾಧಿಕಾರಿ ಸಿ.ಎನ್ ಶ್ರೀಧರ್ ಆದೇಶಿಸಿದ್ದಾರೆ. 

ಕರ್ನಾಟಕ ನಾಗರಿಕ ಸೇವಾ 1957ರ ನಿಯಮದಡಿ ಕಲ್ಪಿಸಿರುವ ಅವಕಾಶಗಳ ಮೇರೆಗೆ ಅಧಿಕಾರಿ ಮೇಲೆ ಶಿಸ್ತು ಕ್ರಮ ಜರುಗಿಸಿದ್ದು, ಸರ್ಕಾರಿ ಸೇವೆಯಿಂದ ಅಮಾನತ್ತುಗೊಳಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

Leave a Reply

Your email address will not be published. Required fields are marked *

You missed

error: Content is protected !!