ಸಂಯುಕ್ತ ಟೈಮ್ಸ್, ಮೂಡಲಗಿ: ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಮನೆಯಲ್ಲಿದ್ದ 2 ಲಕ್ಷ ರೂ. ನಗದು ಹಾಗೂ ಚಿನ್ನದ ಆಭರಣಗಳು ಅಗ್ನಿಗೆ ಆಹುತಿಯಾದ ಘಟನೆ ಮೂಡಲಗಿಯ ಹುಣಶ್ಯಾಳ ಪಿವೈ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಗಂಗಪ್ಪ ಹಣಮಂತ ಕುರುಬರ ಎಂಬವರ ಮನೆಯಲ್ಲಿ ಈ ಘಟನೆ ನಡೆದಿದೆ. ಕುಟುಂಬದ ಸದಸ್ಯರು ಹೊಲಕ್ಕೆ ತೆರಳಿದ್ದ ವೇಳೆ ಸಿಲಿಂಡರ್ ಆಕಸ್ಮಿಕವಾಗಿ ಸ್ಫೋಟಗೊಂಡಿದೆ. ಸ್ಫೋಟದಿಂದಾಗಿ ಮನೆ ಹೊತ್ತಿ ಉರಿದಿದ್ದು, ಮನೆಯಲ್ಲಿದ್ದ ವಸ್ತುಗಳು ಸೇರಿದಂತೆ 2 ಲಕ್ಷ ರೂ. ಹಣ ಸೇರಿದಂತೆ ಚಿನ್ನದ ಆಭರಣಗಳು ಸುಟ್ಟು ಕರಕಲಾಗಿದೆ.
ಸಿಲಿಂಡರ್ ಸ್ಫೋಟಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಘಟನೆ ವೇಳೆ ಮನೆಯಲ್ಲಿ ಯಾರೂ ಇಲ್ಲದಿದ್ದರಿಂದ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ಕುಲಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

