ಸಂಯುಕ್ತ ಟೈಮ್ಸ್, ಬೀದರ್: ಜಮೀನಿಗೆ ಹೋಗುವ ದಾರಿಗೆ ಕಲ್ಲು ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಮಾಜಿ ಗ್ರಾ.ಪಂ. ಅಧ್ಯಕ್ಷನನ್ನು ಮಚ್ಚಿನಲ್ಲಿ ಹೊಡೆದು ಹತ್ಯೆಗೈದ ಘಟನೆ ಚಿಟ್ಟಗುಪ್ಪದ ನಿರ್ಣಾ ಗ್ರಾಮದಲ್ಲಿ ನಡೆದಿದೆ.

ಮಲ್ಲಿಕಾರ್ಜುನ್ (46) ಕೊಲೆಯಾದ ದುರ್ದೈವಿ ಎಂದು ತಿಳಿದು ಬಂದಿದೆ. ಈ ವೇಳೆ ಅವರ ಮಗನ ಮೇಲೂ ಹಲ್ಲೆ ನಡೆಸಲಾಗಿದ್ದು, ಆತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಗ್ರಾಮದ ಲಿಂಗರಾಜು, ಕಾಶಿನಾಥ್, ಜಗನಾಥ್ ಸೇರಿದಂತೆ ಒಟ್ಟು 8 ರಿಂದ 9 ಜನ ಸೇರಿ ಮಾರಕಾಸ್ತ್ರಗಳಿಂದ ಮಲ್ಲಿಕಾರ್ಜುನ್ ಹಾಗೂ ಮಗನ ಮೇಲೆ ಹಲ್ಲೆ ನಡೆಸಿದ್ದಾರೆ. ಪರಿಣಾಮ ಗಂಭೀರವಾಗಿ ಗಾಯಗೊಂಡ ಮಲ್ಲಿಕಾರ್ಜುನ್ ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು, ಆದರೆ ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟಿದ್ದಾರೆ.
ಈ ಸಂಬಂಧ ಮನ್ನಾಏಖೇಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರು ಜನ ಆರೋಪಿಗಳನ್ನು ಬಂಧಿಸಿದ್ದಾರೆ. ಇನ್ನೂ ತಲೆಮರೆಸಿಕೊಂಡಿರುವ ಕೆಲವು ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

