ಸಂಯುಕ್ತ ಟೈಮ್ಸ್, ಬೆಳಗಾವಿ: ನಾಡದ್ರೋಹಿ MESಗೆ ಬೆಳಗಾವಿ ಪಾಲಿಕೆ ಆಯುಕ್ತರು ಶಾಕ್ ಕೊಟ್ಟಿದ್ದಾರೆ. ನಾಮಫಲಕಗಳಲ್ಲಿ ಕನ್ನಡ ಕಡ್ಡಾಯಗೊಳಿಸಲಾಗಿದೆ. ಅಲ್ಲದೇ ‘ಬೆಳಗಾವಿ’ ಎಂಬ ಪದವನ್ನೇ ಬಳಸಬೇಕು ಎಂದು ಸೂಚನೆ ನೀಡಿದೆ.

ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ ಅವರು ಈ ಆದೇಶ ಹೊರಡಿಸಿದ್ದಾರೆ. ಬೆಳಗಾಂವ, ಬೆಳಗಾಮ್ ಅಂತಾ ಬರೆದಿರೋ ಅಂಗಡಿ ಮಾಲೀಕರಿಗೆ ಎಚ್ಚರಿಕೆ ನೀಡಿದ್ದಾರೆ.
‘ಬೆಳಗಾವಿ’ ಅಂತಾ ಬಳಸಲು ಹಿಂದೇಟು ಹಾಕುತ್ತಾ ಬಂದಿದ್ದ ನಾಡದ್ರೋಹಿಗಳಿಗೆ ಇದರಿಂದ ಶಾಕ್ ಆಗಿದೆ. ಸರ್ಕಾರದ ಆದೇಶವನ್ನ ಕಟ್ಟುನಿಟ್ಟಾಗಿ ಪಾಲಿಸಲು 2 ಸಾವಿರ ಅಂಗಡಿಗಳಿಗೆ ನೋಟಿಸ್ ನೀಡಲಾಗಿದೆ.
ಆದೇಶ ಪಾಲಿಸದವರ ಅಂಗಡಿ ಲೈಸನ್ಸ್ ರದ್ದು ಮಾಡುವ ಎಚ್ಚರಿಕೆ ನೀಡಲಾಗಿದೆ. ಬೆಳಗಾವಿ ಮಹಾನಗರದಲ್ಲಿ ಅನೇಕ ವರ್ಷಗಳಿಂದ ಕನ್ನಡ ಹೋರಾಟಗಾರ ಒತ್ತಾಯವಿತ್ತು. ಸರ್ಕಾರದ ಆದೇಶದಂತೆ ಶೇ.60 ರಷ್ಟು ನಾಮಫಲಕದಲ್ಲಿ ಕನ್ನಡ ಬರೆಸಬೇಕು ಎಂದಿದೆ.
ಬೆಳಗಾಂವ, ಬೆಳಗಾಮ್ ಬದಲಾಗಿ ಬೆಳಗಾವಿ ಬಳಸುವಂತೆ ಕನ್ನಡಪರ ಹೋರಾಟಗಾರರು ಪ್ರತಿಭಟನೆ ನಡೆಸಿದ್ದರು. ಈಗ ಸರ್ಕಾರದ ಆದೇಶ ಹಾಗೂ ಕನ್ನಡಿಗರ ಬೇಡಿಕೆ ಅನುಷ್ಠಾನಕ್ಕೆ ಪಾಲಿಕೆ ಆಯಕ್ತರೇ ಫೀಲ್ಡಿಗಿಳಿದು ಕ್ರಮಕೈಗೊಂಡಿದ್ದಾರೆ.

