Spread the love

ಸಂಯುಕ್ತ ಟೈಮ್ಸ್, ಬೆಂಗಳೂರು:  ಕರ್ನಾಟಕದ ಸಾಂಸ್ಕೃತಿಕ ನಾಯಕನನ್ನಾಗಿ ಬಸವಣ್ಣ ಅವರ ಹೆಸರನ್ನು ಸರ್ಕಾರ ಘೋಷಿಸಿದೆ. ಗುರುವಾರ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ಬಸವಣ್ಣ ಅವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಸರ್ಕಾರದ ಪರವಾಗಿ ಘೋಷಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವೀರಶೈವ ಲಿಂಗಾಯತ ಸ್ವಾಮೀಜಿಗಳ ನಿಯೋಗ ಮನವಿ ಮಾಡಿತ್ತು. ಇದರ ಬೆನ್ನಲ್ಲೇ ಸಚಿವ ಪ್ರಿಯಾಂಕ್ ಖರ್ಗೆ ಸಿಎಂಗೆ ಪತ್ರವನ್ನು ಬರೆದು, ಅನುಭವ ಮಂಟಪದ ಮೂಲಕ ಪ್ರಜಾಪ್ರಭುತ್ವದ ಪರಿಕಲ್ಪನೆಯನ್ನು ಭಾರತ ದೇಶದಲ್ಲಿ ಮೊದಲ ಬಾರಿಗೆ ಪರಿಚಯಿಸಿದ ಗುರು ಬಸವಣ್ಣ ನವರು ಅಸ್ಪೃಶ್ಯತೆ ವಿರುದ್ಧ ಚಳುವಳಿ ರೂಪಿಸಿ ದೀನ, ದಲಿತ, ಶೋಷಿತ ಸಮಾಜದ ಸಮಾನತೆಗೆ ಧ್ವನಿ ಎತ್ತಿದ ಇತಿಹಾಸದ ಮೊದಲ ನಾಯಕ. ಅವರನ್ನು ಕರ್ನಾಟಕದ ಸಾಂಸ್ಕೃತಿಕ ರಾಯಭಾರಿಯಾಗಿ ಘೋಷಣೆ ಮಾಡಬೇಕು ಎಂದು ಮನವಿ ಮಾಡಿದ್ದರು.

ವಿಧಾನಸೌಧದ ಸಮ್ಮೇಳನ ಸಭಾಂಗಣಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಚಿವ ಈಶ್ವರ ಖಂಡ್ರೆ, ಜಾತಿ ರಹಿತ ಸಮಾಜದ ಕನಸು ಕಂಡವರು ಬಸವಣ್ಣ. ಸಮಾಜದಲ್ಲಿ ಸಾಮರಸ್ಯ ತರುವ ನಿಟ್ಟಿನಲ್ಲಿ ಅವರ ತತ್ವಗಳು ಹೆಚ್ಚು ಪ್ರಸಾರ ಆಗಬೇಕು. ಅವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡಬೇಕು ಎಂಬ ಬೇಡಿಕೆ ಇತ್ತು. ಈ ನಿಟ್ಟಿನಲ್ಲಿ ಸಂಪುಟದಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದಿದ್ದಾರೆ.

ಇಂದು ಬಸವಣ್ಣನವರ ತತ್ವ ಆದರ್ಶ ಎಲ್ಲಡೆ ಪಸರಿಸಬೇಕಾದ ಅಗತ್ಯ ಇದೆ. ಇದಕ್ಕೆ ಸರ್ಕಾರ ಎಲ್ಲಾ ರೀತಿಯ ಬೆಂಬಲ ನೀಡುತ್ತದೆ. 2025 ರಲ್ಲಿ ಅನುಭವ ಮಂಟಪ ಪೂರ್ಣಗೊಳ್ಳಬೇಕು. ಮುಂದಿನ ವರ್ಷ ಅನುಭವ ಮಂಟಪದ ಲೋಕಾರ್ಪಣೆ ಆಗಲಿದೆ ಎಂದಿದ್ದಾರೆ.

Leave a Reply

Your email address will not be published. Required fields are marked *

You missed

error: Content is protected !!