Spread the love

ಸಂಯುಕ್ತ ಟೈಮ್ಸ್, ಬೆಂಗಳೂರು: ತಾನು ಕೆಲಸ ಕಳೆದುಕೊಳ್ಳಲು ಕಾರಣನಾದ ಎಂದು ಕೋಪಗೊಂಡ ವ್ಯಕ್ತಿಯೊಬ್ಬ ತನ್ನ ಸಹೋದ್ಯೋಗಿಗೆ ಮದ್ಯಪಾನ ಮಾಡಿಸಿ, ಬಳಿಕ ತಲೆ ಮೇಲೆ ಸಿಮೆಂಟ್ ಇಟ್ಟಿಗೆ ಎತ್ತಿಹಾಕಿ ಹತ್ಯೆ ಮಾಡಿರುವ ಘಟನೆ ಯಲಹಂಕ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಚಿಕ್ಕಬೊಮ್ಮಸಂದ್ರದ ನಿವಾಸಿ ಗಜೇಂದ್ರ ಸೌದ್ (32) ಹತ್ಯೆಯಾದ ದುರ್ದೈವಿ. ಈ ಕೃತ್ಯ ಸಂಬಂಧ ಮೈಸೂರಿನ ಸಂತೋಷ್ ನನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಡೈರಿ ಸರ್ಕಲ್ ಸಮೀಪದ ಬಾರ್ ನಲ್ಲಿ ಇಬ್ಬರೂ ಶುಕ್ರವಾರ ರಾತ್ರಿ ಮದ್ಯ ಸೇವನೆ ಮಾಡಿಸಿದ್ದಾರೆ. ನಂತರ ಅರೆಪ್ರಜ್ಞೆಯಲ್ಲಿದ್ದ ಗಜೇಂದ್ರ ತಲೆ ಮೇಲೆ ಸಿಮೆಂಟ್ ಇಟ್ಟಿಗೆ ಎತ್ತಿಹಾಕಿ ಸಂತೋಷ್ ಪರಾರಿಯಾಗಿದ್ದಾನೆ. ತೀವ್ರವಾಗಿ ಗಾಯಗೊಂಡಿದ್ದ ಗಜೇಂದ್ರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಮೃತ ವ್ಯಕ್ತಿ ಮೂಲತಃ ನೇಪಾಳ ದೇಶದವನಾಗಿದ್ದು, 3 ವರ್ಷಗಳ ಹಿಂದೆ ಬೆಂಗಳೂರಿಗೆ ತನ್ನ ಪರಿವಾರ ಸಮೇತ ಬಂದಿದ್ದ. ಯಲಹಂಕ ಉಪನಗರದ ಬಳಿ ಹೋಟೆಲ್ ನಲ್ಲಿ ಕೆಲಸಕ್ಕೆ ಸೇರಿದ್ದ ಗಜೇಂದ್ರ, ತನ್ನ ಕುಟುಂಂಬದ ಜೊತೆ ಚಿಕ್ಕಬೊಮ್ಮಸಂದ್ರದಲ್ಲಿ ವಾಸವಾಗಿದ್ದ.

ಆ ಹೋಟೆಲ್ ನಲ್ಲಿ ಸಂತೋಷ್ ಕೂಡ ಕೆಲಸ ಮಾಡುತ್ತಿದ್ದ. ಆಗ ಕೆಲಸದ ವಿಚಾರವಾಗಿ ಇಬ್ಬರ ಮಧ್ಯೆ ಮನಸ್ತಾಪವಾಗಿತ್ತು. ಇದೇ ವಿಷಯವಾಗಿ ಪರಸ್ಪರ ಜಗಳ ಕೂಡ ಆಗಿದೆ.

ಕೊನೆಗೆ ಅಶಿಸ್ತು ಹಿನ್ನೆಲೆಯಲ್ಲಿ ಹೋಟೆಲ್ ಮಾಲೀಕ ಸಂತೋಷ್ ನನ್ನು ಕೆಲಸದಿಂದ ತೆಗೆದುಹಾಕಿದ್ದ. ಇದೇ ಜಿದ್ದಿನಲ್ಲಿ ಕೊಲೆಗೆ ಸಂಚು ರೂಪಿಸಿದ್ದ ಆರೋಪಿ, ಶುಕ್ರವಾರ ರಾತ್ರಿ ಮದ್ಯ ಸೇವಿಸುವ ನೆಪದಲ್ಲಿ ಕರೆಸಿಕೊಂಡು ಹತ್ಯೆ ಮಾಡಿದ್ದಾನೆಂದು ತಿಳಿದುಬಂದಿದೆ.

ಗಜೇಂದ್ರನ ಪತ್ನಿ ರೂಪ ನೀಡಿದ ದೂರಿನ ಮೇರೆಗೆ ಯಲಹಂಕ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತಲೆಮರೆಸಿಕೊಂಡಿರುವ ಆರೋಪಿಗಾಗಿ ಶೋಧ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

You missed

error: Content is protected !!