Spread the love

ಸಂಯುಕ್ತ ಟೈಮ್ಸ್,  ಬೆಂಗಳೂರು: ಬೆಳ್ಳಂಬೆಳಗ್ಗೆ ಏಳು ಭ್ರಷ್ಟ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬೆಂಗಳೂರು, ಕಲಬುರಗಿ, ತುಮಕೂರು ಸೇರಿದಂತೆ ರಾಜ್ಯದ ಹಲವೆಡೆ ಗುರುವಾರ ದಾಳಿ ನಡೆಸಿದೆ.

ಆದಾಯಕ್ಕೂ ಹೆಚ್ಚು ಆಸ್ತಿ ಗಳಿಕೆ ಮಾಡಿರುವ ಆರೋಪದ ಹಿನ್ನೆಲೆ ಭ್ರಷ್ಟ ಏಳು ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳನ್ನು ದಾಳಿ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಅಧಿಕಾರಿಗಳಾದ ಟಿ.ವಿ.ಮುರಳಿ, ಹೆಚ್‌.ಆರ್‌.ನಟರಾಜ್‌ ಮತ್ತು ಗ್ರಾಮಾಂತರದಲ್ಲಿ ಅನಂತ್‌ಕುಮಾರ್‌ಗೆ ಸೇರಿದ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ ಮಾಡಿದೆ. ದಾಖಲೆಗಳನ್ನು ಪರಿಶೀಲನೆ ನಡೆಸಿದೆ.

ತುಮಕೂರಿನ  ನಿರ್ಮಿತಿ ಕೇಂದ್ರ ಎಂಡಿ ರಾಜಶೇಖರ ಮನೆ ಮೇಲೆ ರೇಡ್‌ ಆಗಿದೆ. ತುಮಕೂರಿನ ಸಪ್ತಗಿರಿ ಬಡಾವಣೆ, ಎಸ್‌ಎಸ್ ಪುರಂನಲ್ಲಿ ಇರುವ ರಾಜಶೇಖರ ಸಹೋದರನ ಮನೆ ಮೇಲೂ ದಾಳಿ ಆಗಿದೆ. ಅಕ್ರಮ ಆಸ್ತಿ ಸಂಪಾದನೆ ಆರೋಪ ಕಾರಣಕ್ಕೆ 10 ಮಂದಿ ಅಧಿಕಾರಿಗಳು ಏಕಕಾಲಕ್ಕೆ ದಾಳಿ ಮಾಡಿದ್ದಾರೆ.

ಕಲಬುರಗಿ ಶಹಾಪೂರ ತಹಶೀಲ್ದಾರ ಉಮಾಕಾಂತ ಹಳ್ಳೆ ಅವರ ಮನೆ ಮೇಲೂ ದಾಳಿ ಆಗಿದೆ. ಕಲಬುರಗಿಯ ಅಕ್ಕಮಹಾದೇವಿ ಬಡಾವಣೆಯಲ್ಲಿ ತಹಶೀಲ್ದಾರ ಅವರ ಮನೆ ಮತ್ತು ಕಚೇರಿ ಇದೆ. ಮನೆ ಹಾಗೂ ಕಚೇರಿಯಲ್ಲಿ ಲೋಕಾ ಅಧಿಕಾರಿಗಳು ದಾಖಲೆ ಪರಿಶೀಲನೆ ಮಾಡುತ್ತಿದ್ದಾರೆ.

Leave a Reply

Your email address will not be published. Required fields are marked *

You missed

error: Content is protected !!