Author: ಬಿ.ಎಲ್.ತಿಗಡಿ, ಸಂಪಾದಕರು ಸಂಯುಕ್ತ ಟೈಮ್ಸ್

ತಾಯ್ನಾಡಿಗೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾಗೆ ಅದ್ದೂರಿ ಸ್ವಾಗತ…!

ಸಂಯುಕ್ತ ಟೈಮ್ಸ್, ನವದೆಹಲಿ:  ಗಗನಯಾತ್ರಿ ಶುಭಾಂಶು ಶುಕ್ಲಾ ಭಾರತಕ್ಕೆ ಮರಳಿದ್ದಾರೆ. ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಭೇಟಿ ನೀಡಿದ ನಂತರ ಮೊದಲ ಬಾರಿಗೆ ಗಗನಯಾತ್ರಿ ಶುಭಾಂಶು ಶುಕ್ಲಾ ತಾಯ್ನಾಡಿಗೆ ಮರಳಿದ್ದಾರೆ. ಅಮೆರಿಕದಿಂದ ಮಧ್ಯರಾತ್ರಿ 1:30ರ ವೇಳೆಗೆ ದೆಹಲಿಗೆ ಆಗಮಿಸಿದ ಶುಭಾಂಶು ಶುಕ್ಲಾಗೆ ಇಂದಿರಾ ಗಾಂಧಿ…

ಅಕ್ರಮ ಸಂಬಂಧ ನಿರಾಕರಿಸಿದ ತನ್ನ ಬಾಲ್ಯದ ಗೆಳತಿಯನ್ನು ಚಾಕುವಿನಿಂದ ಇರಿದು ಕೊಂದು, ನಂತರ ತಾನು ಚಾಕುವಿನಿಂದ ಇರಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಪ್ರಿಯಕರ!

ಸಂಯುಕ್ತ ಟೈಮ್ಸ್, ಬೆಳಗಾವಿ: ಅಕ್ರಮ ಸಂಬಂಧಕ್ಕೆ ಒಪ್ಪದ ಬಾಲ್ಯದ ಗೆಳತಿಯನ್ನು ಮನಸೋಚ್ಛೆ ಚೂರಿಯಿಂದ ಇರಿದು ಕೊಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಬೀಡಿ ಗ್ರಾಮದಲ್ಲಿ ನಡೆದಿದೆ. ಎರಡು ಮಕ್ಕಳ ತಾಯಿ 30 ವರ್ಷದ ರೇಷ್ಮಾ ಎಂಬಾಕೆಯನ್ನು ತನ್ನೊಂದಿಗೆ ಅಕ್ರಮ ಸಂಬಂಧ…

ಸುಪ್ರೀಂ ಕೋರ್ಟ್‌ನಿಂದ ಜಾಮೀನು ರದ್ದು:  ನಟ ದರ್ಶನ್‌ ಅರೆಸ್ಟ್‌

ಸಂಯುಕ್ತ ಟೈಮ್ಸ್, ಬೆಂಗಳೂರು: ಸುಪ್ರೀಂ ಕೋರ್ಟ್‌ನಿಂದ ಜಾಮೀನು ರದ್ದಾದ ಬೆನ್ನಲ್ಲೇ ನಟ ದರ್ಶನ್‌ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಹೊಸಕೆರೆಹಳ್ಳಿಯ ವಿಜಯಲಕ್ಷ್ಮಿ ನೆಲೆಸಿದ್ದ ಅಪಾರ್ಟ್‌ಮೆಂಟ್‌ನಲ್ಲಿ ಇದ್ದ ದರ್ಶನ್‌ ಅವರನ್ನು ಅನ್ನಪೂರ್ಣೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ. ಈ ಮೊದಲು ದರ್ಶನ್‌ ಅವರು ನ್ಯಾಯಾಲಯಕ್ಕೆ ಶರಣಾಗುತ್ತಾರೆ ಎಂಬ…

ಅಪ್ರಾಪ್ತ ಬಾಲಕನಿಗೆ ಬೈಕ್ ನೀಡಿದ ಮಾಲೀಕನಿಗೆ 25 ಸಾವಿರ ದಂಡ ವಿಧಿಸಿದ ಕೋರ್ಟ್

ಸಂಯುಕ್ತ ಟೈಮ್ಸ್, ದಾವಣಗೆರೆ: ಅಪ್ರಾಪ್ತ ಬಾಲಕನಿಗೆ ಬೈಕ್ ನೀಡಿದ ಮಾಲೀಕನಿಗೆ ದಾವಣಗೆರೆ ಸಂಚಾರಿ ಠಾಣೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ಬೈಕ್ ಮಾಲೀಕನಿಗೆ ಸುಮಾರು 25 ಸಾವಿರ ರೂ. ದಂಡ ವಿಧಿಸಿದ್ದಾರೆ. ನಗರದ ಎಂಇ ರಸ್ತೆಯಲ್ಲಿ ಉತ್ತರ ಸಂಚಾರಿ ಠಾಣೆ ಪೊಲೀಸರು ವಾಹನ ತಪಾಸಣೆ ಮಾಡುತ್ತಿದ್ದರು.…

ರಾಜ್ಯ ಸರ್ಕಾರದ 20 ಇಲಾಖೆಗಳಲ್ಲಿ 2.8 ಲಕ್ಷ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವಂತೆ ಸರ್ಕಾರಕ್ಕೆ ವಿದ್ಯಾರ್ಥಿಗಳ ಆಗ್ರಹ…!

ಸಂಯುಕ್ತ ಟೈಮ್ಸ್, ಬೆಂಗಳೂರು: ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿ, 70,727 ಶಿಕ್ಷಕರ ಹುದ್ದೆಗಳು ಸೇರಿದಂತೆ 20 ಇಲಾಖೆಗಳಲ್ಲಿ ಖಾಲಿ ಇರುವ 2,76,386 ಹುದ್ದೆಗಳನ್ನು ತಕ್ಷಣ ಭರ್ತಿ ಮಾಡುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದೆ. ನೇಮಕಾತಿ ವಿಳಂಬವು ಆಡಳಿತಾತ್ಮಕ ದಕ್ಷತೆಯನ್ನು…

ರಾಜ್ಯದ 2,878 ಸರ್ಕಾರಿ ಆಸ್ಪತ್ರೆಗಳ ಪೈಕಿ 14 ಮಾತ್ರವೇ ಅಗ್ನಿ ಸುರಕ್ಷತೆ ಕ್ರಮ ಅನುಸರಿಸುತ್ತಿವೆ, ಉಳಿದ ಆಸ್ಪತ್ರೆಗಳು ನಿಯಮವನ್ನು ಗಾಳಿಗೆ ತೂರಿವೆ:  ಆರೋಗ್ಯ ಸಚಿವ ದಿನೇಶ್ ಗುಂಡೂರಾವ 

ಸಂಯುಕ್ತ ಟೈಮ್ಸ್, ಬೆಂಗಳೂರು: ರಾಜ್ಯದ ನೋಂದಾಯಿತ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳ ಪೈಕಿ ಕೇವಲ 329 ಆಸ್ಪತ್ರೆಗಳು ಮಾತ್ರ ಅಗ್ನಿ ಸುರಕ್ಷತೆ ಮಾನದಂಡಗಳನ್ನು ಪಾಲಿಸುತ್ತಿವೆ. ಉಳಿದ ಆಸ್ಪತ್ರೆಗಳಲ್ಲಿ ಈ ವ್ಯವಸ್ಥೆ ನಿಯಮಬದ್ಧವಾಗಿಲ್ಲ ಎಂಬ ಅಘಾತಕಾರಿ ಅಂಶ ಇದೀಗ ಬೆಳಕಿಗೆ ಬಂದಿದೆ. ರಾಜ್ಯದಲ್ಲಿರುವ 2,878…

ರಾಜಕೀಯದಲ್ಲಿ ಒಬ್ಬರ ಮೇಲೆ ಮತ್ತೊಬ್ಬರು ಹಗೆ ಸಾಧಿಸುತ್ತಾರೆ,  ಎಚ್ಚರಿಕೆಯಿಂದ ಇರಬೇಕು:  ಸಚಿವ ಸತೀಶ್ ಜಾರಕಿಹೊಳಿ

ಸಂಯುಕ್ತ ಟೈಮ್ಸ್, ಬೆಂಗಳೂರು: ರಾಜಕೀಯದಲ್ಲಿ ಒಬ್ಬರ ಮೇಲೆ ಮತ್ತೊಬ್ಬರು ಹಗೆ ಸಾಧಿಸುತ್ತಾರೆ, ನಾವು ಎಚ್ಚರಿಕೆಯಿಂದ ಇರಬೇಕು ಎಂದು ಸಚಿವ ಸತೀಶ್ ಜಾರಕಿಹೊಳಿ ರಾಜಕೀಯದ ಪಾಠ ಹೇಳಿದ್ದಾರೆ. ರಾಜಣ್ಣರನ್ನು ಸಂಪುಟದಿಂದ ವಜಾ ಮಾಡಿದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ರಾಜಣ್ಣರನ್ನು ವಜಾ ಮಾಡಿರುವುದು ಹೈಕಮಾಂಡ್‌ನ ನಿರ್ಧಾರ.…

ಕುಡಿತದ ಚಟ ಬಿಡಿಸುವ ನಾಟಿ ಔಷಧಿ ಸೇವಿಸಿ ನಾಲ್ವರು ಸಾವು:  ನಕಲಿ ವೈದ್ಯ ಅರೆಸ್ಟ್

ಸಂಯುಕ್ತ ಟೈಮ್ಸ್, ಕಲಬುರಗಿ:  ಕುಡಿತದ ಚಟ ಬಿಡಿಸಲು ನಕಲಿ ವೈದ್ಯನಿಂದ ಚಿಕಿತ್ಸೆ ಪಡೆದು ನಾಲ್ವರು ಮೃತಪಟ್ಟಿರುವ ಘಟನೆ ಕಲಬುರಗಿ ಜಿಲ್ಲೆ ಸೇಡಂ ಪಟ್ಟಣದಲ್ಲಿ ನಡೆದಿದೆ. ಲಕ್ಷ್ಮಿ, ಗಣೇಶ್ ರಾಠೋಡ್, ನಾಗೇಶ್ ಹಾಗೂ ಮನೋಹರ್ ಮೃತ ದುರ್ದೈವಿಗಳು. ನಕಲಿ ವೈದ್ಯ ಸಾಯಪ್ಪ ಮುತ್ಯಾ ಅಲಿಯಾಸ್…

ಧರ್ಮಸ್ಥಳದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು: ಸಿಎಂ ಸಿದ್ದರಾಮಯ್ಯ

ಸಂಯುಕ್ತ ಟೈಮ್ಸ್, ಬೆಂಗಳೂರು: ಧರ್ಮಸ್ಥಳದ ಯೂಟ್ಯೂಬರ್‌ಗಳ ಮೇಲೆ ಹಲ್ಲೆ ನಡೆದ ನಂತರ ಎರಡು ಗುಂಪುಗಳ ನಡುವಿನ ಘರ್ಷಣೆಗೆ ಕಾರಣರಾದವರ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಯಾರೇ ತಪ್ಪು ಮಾಡಿದ್ದರೂ ಕಾನೂನು ಪ್ರಕಾರ…

ಕರ್ನಾಟಕದಲ್ಲಿ 125 PKPSಗಳು ದಿವಾಳಿ ಅಂಚಿನಲ್ಲಿವೆ:  ಕೇಂದ್ರ ಸಹಕಾರ ಸಚಿವ ಅಮಿತ್ ಶಾ

ಸಂಯುಕ್ತ ಟೈಮ್ಸ್, ನವದೆಹಲಿ: ಕರ್ನಾಟಕದಲ್ಲಿರುವ ಒಟ್ಟು 6,291 ಪ್ರಾಥಮಿಕ ಕೃಷಿ ಸಾಲ ಸಂಘಗಳಲ್ಲಿ 125 ಸಂಘಗಳು ದಿವಾಳಿ ಅಂಚಿನಲ್ಲಿವೆ ಎಂದು ಸಹಕಾರ ಸಚಿವ ಅಮಿತ್ ಶಾ ಮಂಗಳವಾರ ಲೋಕಸಭೆಗೆ ತಿಳಿಸಿದರು. ರಾಯಚೂರು ಸಂಸದ ಜಿ.ಕುಮಾರ ನಾಯಕ ಪ್ರಶ್ನೆಗೆ ಉತ್ತರಿಸಿದ ಅವರು, ಇದರಲ್ಲಿ ಚಿಕ್ಕಬಳ್ಳಾಪುರದ…

You missed

error: Content is protected !!