Spread the love

ಸಂಯುಕ್ತ ಟೈಮ್ಸ್, ಬೆಂಗಳೂರು: ಬೇಲೆಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಕಾರವಾರ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್‌ ದೋಷಿ ಎಂದು ಕೋರ್ಟ್‌ ತೀರ್ಪು ನೀಡಿದೆ

ನ್ಯಾ.ಸಂತೋಷ್‌ ಗಜಾನನ ಭಟ್‌ ಅವರು ಪ್ರಕರಣದ ವಿಚಾರಣೆ ನಡೆಸಿದರು. ಮೊದಲ ಪ್ರಕರಣದಲ್ಲಿ ಸತೀಶ್‌ ಸೈಲ್‌ ದೋಷಿ ಎಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ. ನಾಳೆ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಲಿದೆ.

ಆರೋಪಿಗಳನ್ನು ಪೊಲೀಸ್ ಕಷ್ಟಡಿಗೆ ಪಡೆಯದಂತೆ ಅವರ ಪರ ವಕೀಲರ ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಾಧೀಶರು, ಒಮ್ಮೆ ತೀರ್ಪು ನೀಡಿದ ಮೇಲೆ ಅವಕಾಶ ಇಲ್ಲ ಎಂದು ಸ್ಪಷ್ಟಪಡಿಸಿದರು.

2010ರಲ್ಲಿ ಅದಿರು ನಾಪತ್ತೆ ಪ್ರಕರಣ ದಾಖಲಾಗಿತ್ತು. ಪ್ರಕರಣ ಸಂಬಂಧ ತನಿಖೆ ನಡೆಸಿದ್ದ ಸಿಬಿಐ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಿತ್ತು. 6 ಪ್ರಕರಣಗಳಲ್ಲೂ ಸತೀಶ್‌ ಸೈಲ್‌ ದೋಷಿ ಎಂದು ಈಗ ಕೋರ್ಟ್‌ ತೀರ್ಪಿತ್ತಿದೆ.

ತೀರ್ಪು ಹೊರಬೀಳುತ್ತಿದ್ದಂತೆ ಸಿಬಿಐ ಅಧಿಕಾರಿಗಳು ಕೋರ್ಟ್‌ ಬಳಿ ಹಾಜರಾದರು. ಯಾವುದೇ ಕ್ಷಣದಲ್ಲಿ ಸತೀಶ್‌ ಸೈಲ್‌ ಬಂಧಿಸಿ ಪರಪ್ಪನ ಅಗ್ರಹಾರಕ್ಕೆ ಶಿಫ್ಟ್‌ ಮಾಡುವ ಸಾಧ್ಯತೆ ಇದೆ.

Leave a Reply

Your email address will not be published. Required fields are marked *

You missed

error: Content is protected !!