Spread the love

ಸಂಯುಕ್ತ ಟೈಮ್ಸ್, ಬೆಳಗಾವಿ:  ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು ಸೂಕ್ತ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 2.73 ಕೋಟಿ ರೂ. ಹಣ ಜಪ್ತಿ ಮಾಡಲಾಗಿದೆ.

ಮಹಾರಾಷ್ಟ್ರದ ಸಾಂಗಲಿ‌ಯಿಂದ ಹುಬ್ಬಳ್ಳಿಯತ್ತ ತೆರಳುತ್ತಿದ್ದ ಗೂಡ್ಸ್ ವಾಹನದಲ್ಲಿ ಕೋಟಿ ಕೋಟಿ ಹಣ ಪತ್ತೆಯಾಗಿದೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ವಾಹನ ಚಾಲಕನನ್ನು ವಶಕ್ಕೆ ಪಡೆದು ಹಣ ಜಪ್ತಿ ಮಾಡಿದ್ದಾರೆ. 

ಮಹಾರಾಷ್ಟ್ರದ ಸಾಂಗಲಿ ಪಟ್ಟಣದ ಸಚೀನ ಮೇನಕುದುಳೆ, ಮಾರುತಿ ಮಾರಗುಡೆ ಎಂಬ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ.

ಹಣ ಸಾಗಾಟ ಮಾಡಲು ಗೂಡ್ಸ್ ವಾಹನದ ಕ್ಯಾಬಿನನ್ನೇ ಮಾಡಿಫೈ ಮಾಡಿದ್ದಾರೆ. ಜಪ್ತಿಯಾದ ಹಣದ ಮೂಲ ಯಾವುದು ಎಂದು ತನಿಖೆ ನಡೆಸುತ್ತಿರುವುದಾಗಿ ಡಿಸಿಪಿ ರೋಹನ್ ಜಗದೀಶ್ ಮಾಹಿತಿ ನೀಡಿದ್ದಾರೆ. ಬೆಳಗಾವಿ ಮಾಳಮಾರುತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಈ ಕುರಿತು ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದೆ.

Leave a Reply

Your email address will not be published. Required fields are marked *

You missed

error: Content is protected !!