Category: ಬೆಳಗಾವಿ

ಅರಭಾವಿ ಪಟ್ಟಣ ಪಂಚಾಯತಿಗೆ ನೂತನ ಅಧ್ಯಕ್ಷೆಯಾಗಿ ರೇಣುಕಾ ಮಾದರ, ಉಪಾಧ್ಯಕ್ಷೆಯಾಗಿ ರಾಜಶ್ರೀ ಗಂಗನ್ನವರ ಅವಿರೋಧವಾಗಿ ಅಯ್ಕೆ

ಸಂಯುಕ್ತ ಟೈಮ್ಸ್, ಮೂಡಲಗಿ: ತಾಲ್ಲೂಕಿನ ಅರಭಾವಿ ಪಟ್ಟಣ ಪಂಚಾಯತಿಯ ನೂತನ ಅಧ್ಯಕ್ಷರಾಗಿ ಬಿಜೆಪಿಯ ರೇಣುಕಾ ಸಂಜು ಮಾದರ ಹಾಗೂ ಉಪಾಧ್ಯಕ್ಷರಾಗಿ ಬಿಜೆಪಿಯ ರಾಜಶ್ರೀ ಅಪ್ಪಯ್ಯ ಗಂಗನ್ನವರ ಅವರು ಅವಿರೋಧವಾಗಿ ಅಯ್ಕೆಯಾಗಿದ್ದಾರೆ. ತಾಲ್ಲೂಕಿನ ಅರಭಾವಿ ಪಟ್ಟಣ ಪಂಚಾಯತಿಯ ಸಭಾ ಭವನದಲ್ಲಿ ಜರುಗಿದ ನೂತನ…

ಉಪ್ಪಾರ ಸಮಾಜದ ಹಿರಿಯ ಮುಖಂಡ ದಿವಂಗತ ದುಂಡಪ್ಪ ಚೌಕಾಶಿಯವರ 8ನೇ ಪುಣ್ಯ ಸ್ಮರಣೆ:  ಒಂದೇ ಕುಟುಂಬದ 23 ಜನರು ರಕ್ತದಾನ ಮಾಡಿ ಸಮಾಜಕ್ಕೆ ಮಾದರಿಯಾದ ಚೌಕಾಶಿ ಕುಟುಂಬ

ಸಂಯುಕ್ತ ಟೈಮ್ಸ್, ಗೋಕಾಕ: ಗೋಕಾವಿ ನಾಡಿನ ಧೀಮಂತ ನಾಯಕ, ರಾಜಕೀಯ, ಸಹಕಾರಿ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿಲ್ಲಿ ತಮ್ಮದೆ ಆದ ಚಾಪು ಮೂಡಿಸಿದ್ದ ಉಪ್ಪಾರ ಸಮಾಜದ ಹಿರಿಯ ಮುಖಂಡ, ಜಿಲ್ಲಾ ಪರಿಷತ್ ಮಾಜಿ ಸದಸ್ಯರು ಹಾಗೂ ಪ್ರಭಾಶುಗರ ನಿರ್ದೇಶಕರಾಗಿದ್ದ ಗೋಕಾಕ ತಾಲ್ಲೂಕಿನ ಬಡಿಗವಾಡ…

ಅಕ್ರಮವಾಗಿ ಗೋವು ಸಾಗಿಸುತ್ತಿದ್ದ ಕಂಟೇನರ್ ಪಲ್ಟಿ : ಮೂರು ಕರುಗಳು ಸ್ಥಳದಲ್ಲೇ ಸಾವು

ಸಂಯುಕ್ತ ಟೈಮ್ಸ್, ಬೈಲಹೊಂಗಲ: ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದ ಕಂಟೇನರ್ ಪಲ್ಟಿಯಾದ ಪರಿಣಾಮ 3 ಕರುಗಳು ದಾರುಣವಾಗಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಚಿಕ್ಕಬಾಗೇವಾಡಿ ಗ್ರಾಮದ ಹೆದ್ದಾರಿಯಲ್ಲಿ ಗುರುವಾರ ನಡೆದಿದೆ. ಮಹಾರಾಷ್ಟ್ರ ನೋಂದಣಿ ಹೊಂದಿದ ಕ್ಯಾಂಟರ್ ನಲ್ಲಿ ಸುಮಾರು 12 ಗೋವುಗಳನ್ನು ತುಂಬಿಕೊಂಡು…

ಸವದತ್ತಿ- ಕಲುಷಿತ ನೀರು ಸೇವಿಸಿ  41 ಜನ ಅಸ್ವಸ್ಥ: ಆಸ್ಪತ್ರೆಗೆ ದಾಖಲು 

ಸಂಯುಕ್ತ ಟೈಮ್ಸ್, ಸವದತ್ತಿ: ತಾಲ್ಲೂಕಿನ ಚಚಡಿ ಗ್ರಾಮದಲ್ಲಿ ಕಳೆದ ಒಂದು ವಾರದಿಂದ ಆರಂಭವಾದ ವಾಂತಿ–ಭೇದಿ ಉಲ್ಬಣಗೊಂಡಿದೆ. ಒಂದೇ ದಿನ 41 ಮಂದಿಗೆ ವಾಂತಿ-ಭೇದಿ ಕಾಣಿಸಿಕೊಂಡಿದೆ. ತೀವ್ರ ಅಸ್ವಸ್ಥರಾದ ಮೂವರನ್ನ ಬೆಳಗಾವಿ ಜಿಲ್ಲಾಸ್ಪತ್ರೆಗೆ, ಮೂವರನ್ನು ಬೈಲಹೊಂಗಲ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ನಿತ್ರಾಣಗೊಂಡಿರುವ ಈರವ್ವ ಗಾಳಿಮಠ…

ಘಟಪ್ರಭಾ ನದಿ ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದ ಮೃತನ  ಕುಟುಂಬದ ವಾರಸುದಾರರಿಗೆ ಸರ್ಕಾರದಿಂದ 5 ಲಕ್ಷ ರೂ. ಪರಿಹಾರದ ಚೆಕ್ ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಸಂಯುಕ್ತ ಟೈಮ್ಸ್, ಗೋಕಾಕ: ಪ್ರವಾಹದ ಸಂದರ್ಭದಲ್ಲಿ ಘಟಪ್ರಭಾ ನದಿಯ ನೀರಿನ ಸೆಳೆತಕ್ಕೆ ಸಿಕ್ಕು ಮೃತಪಟ್ಟ ತಾಲ್ಲೂಕಿನ ಹಡಗಿನಾಳ ಗ್ರಾಮದ ಮುತ್ತೆಪ್ಪ ಶಿವನಾಯಿಕ ನಾಯಿಕ(48)‌ ಅವರ ಕುಟುಂಬ ವರ್ಗಕ್ಕೆ ಅರಭಾವಿ ಶಾಸಕ ಹಾಗೂ ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಸರ್ಕಾರದಿಂದ 5 ಲಕ್ಷ…

ಗೋಕಾಕನ ಪ್ರವಾಹ ಪೀಡಿತ ಪ್ರದೇಶಗಳಿಗೆ ಸಿಎಂ ಸಿದ್ದರಾಮಯ್ಯ ಭೇಟಿ:  ಸಂತ್ರಸ್ತರಿಗೆ ಮನೆ, ಪರಿಹಾರ ಘೋಷಣೆ

ಸಂಯುಕ್ತ ಟೈಮ್ಸ್,ಬೆಳಗಾವಿ: ಅತಿವೃಷ್ಟಿ ಹಾಗೂ ಪ್ರವಾಹದಿಂದ ಬಾಧಿತಗೊಂಡಿರುವ ಗೋಕಾಕಗೆ ಸೋಮವಾರ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಳೆಯಿಂದಾದ ಹಾನಿಯನ್ನು ಪರಿಶೀಲಿಸಿದರು. ಅತಿವೃಷ್ಟಿಯಿಂದಾಗಿ ಘಟಪ್ರಭಾ ನದಿಯಿಂದ ಮುಳುಗಡೆಯಾಗಿದ್ದ ಲೋಳಸೂರ ಸೇತುವೆಯನ್ನು ವೀಕ್ಷಿಸಿದ ಮುಖ್ಯಮಂತ್ರಿ, ಹಿನ್ನೀರಿನಿಂದ ಒಂದು ವಾರದಿಂದ ಮುಳುಗಡೆಯಾಗಿದ್ದ ಗೋಕಾಕ‌ನಗರದ ಹಳೆ ದನಗಳ ಪೇಟೆ,…

ವಡೇರಹಟ್ಟಿ ಮರ್ಡರ್ ಕೇಸ್: ಗಂಡನನ್ನು ಕೊಂದಿದ್ದ ಪತ್ನಿ ಹಾಗೂ ಪ್ರಿಯಕರನಿಗೆ ಕಠಿಣ ಜೀವಾವಧಿ ಶಿಕ್ಷೆ ಮತ್ತು ರೂ. 3 ಲಕ್ಷ ದಂಡ ವಿಧಿಸಿದ ನ್ಯಾಯಾಲಯ

ಸಂಯುಕ್ತ ಟೈಮ್ಸ್, ಮೂಡಲಗಿ: ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲ್ಲೂಕಿನ ವಡೇರಹಟ್ಟಿ ಗ್ರಾಮದಲ್ಲಿ ಭೀಮನ ಅಮವಾಸ್ಯೆ ಹಿನ್ನಲೆಯಲ್ಲಿ ಹೆಂಡತಿ ಮನೆಯಲ್ಲಿ ಗಂಡನ ಪಾದ ಪೂಜೆ ಮಾಡಿ, ದೇವಸ್ಥಾನಕ್ಕೆ ಕರೆತಂದು ಕೊಲೆ ಮಾಡಿಸಿದ ಘಟನೆಗೆ ಸಂಬಂಧಿಸಿದಂತೆ ಆರೋಪಿಗಳಿಗೆ ಜೀವಾವಧಿ ಶಿಕ್ಷೆಯಾಗಿದೆ. 12ನೇ ಅಪರ ಜಿಲ್ಲಾ…

ಸಂತ್ರಸ್ತರ ಸಮಸ್ಯೆಗಳನ್ನು ಆಲಿಸಿದ ಯುವ ಮುಖಂಡ ಸರ್ವೋತ್ತಮ ಜಾರಕಿಹೊಳಿ

ಸಂಯುಕ್ತ ಟೈಮ್ಸ್,ಗೋಕಾಕ: ಪ್ರವಾಹ ಪೀಡಿತ ಪ್ರದೇಶಗಳಿಗೆ ಯುವ ಮುಖಂಡ ಸರ್ವೋತ್ತಮ ಜಾರಕಿಹೊಳಿ ಅವರು ಮಂಗಳವಾರದಂದು ಭೇಟಿ ನೀಡಿ ಸಂತ್ರಸ್ತರ ಸಮಸ್ಯೆಗಳನ್ನು ಆಲಿಸಿದರು. ಅರಭಾವಿ ಕ್ಷೇತ್ರದ ಲೋಳಸೂರ, ಬಸಳಿಗುಂದಿ, ನಲ್ಲಾನಟ್ಟಿ, ಬಳೋಬಾಳ, ಹುಣಶ್ಯಾಳ ಪಿಜಿ, ವಡೇರಹಟ್ಟಿ ಮತ್ತು ಮುಸಗುಪ್ಪಿ ಗ್ರಾಮಗಳಿಗೆ ಭೇಟಿ ನೀಡಿದರು.…

ಪ್ರವಾಹವನ್ನು ಸಮರ್ಪಕವಾಗಿ‌ ನಿಭಾಯಿಸಲು ಎಲ್ಲ ಇಲಾಖೆಗಳ ಅಧಿಕಾರಿಗಳು ಜಂಟಿಯಾಗಿ ಕಾರ್ಯನಿರ್ವಹಿಸಿ: ಸಚಿವ ಸತೀಶ ಜಾರಕಿಹೊಳಿ

ಸಂಯುಕ್ತ ಟೈಮ್ಸ್, ಬೆಳಗಾವಿ: ನಿರಂತರ ಮಳೆಯಿಂದಾಗಿ ಜಿಲ್ಲೆಯಲ್ಲಿ ಉದ್ಭವಿಸಬಹುದಾದ ಪ್ರವಾಹ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿಭಾಯಿಸಲು ಎಲ್ಲ‌ ಇಲಾಖಾ ಅಧಿಕಾರಿಗಳು ಸಮನ್ವಯದೊಂದಿಗೆ ಕಾರ್ಯನಿರ್ವಹಿಸುವಂತೆ ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾ‌ಪಂಚಾಯತ ಸಭಾಂಗಣದಲ್ಲಿ ಶುಕ್ರವಾರ…

ನಾಳೆ ಗೋಕಾಕ, ಮೂಡಲಗಿ, ರಾಯಬಾಗ ಹಾಗೂ ಹುಕ್ಕೇರಿ ತಾಲೂಕುಗಳ ಎಲ್ಲ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಿದ ಜಿಲ್ಲಾಧಿಕಾರಿ ಮೊಹಮದ್ ರೋಷನ್

ಸಂಯುಕ್ತ ಟೈಮ್ಸ್, ಬೆಳಗಾವಿ: ವ್ಯಾಪಕ ಮಳೆಯ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಇನ್ನೂ ಕೆಲವು ತಾಲೂಕುಗಳ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಉಪ ನಿರ್ದೇಶಕರು, ಶಾಲಾ ಶಿಕ್ಷಣ ಇಲಾಖೆ, ಬೆಳಗಾವಿ ಇವರು ಪತ್ರ ಸಲ್ಲಿಸಿ, ಧಾರಕಾರವಾಗಿ ಮಳೆಯು ಸುರಿಯುತ್ತಿರುವುರಿಂದ ಶಾಲೆಗಳಲ್ಲಿ…

You missed

error: Content is protected !!