Category: ಬೆಳಗಾವಿ

ಬೆಳಗಾವಿ ಜಿಲ್ಲೆಯಲ್ಲಿ 762 ಎಕರೆ 20 ಗುಂಟೆ ಸರ್ಕಾರಿ ಭೂಮಿ ಕಬಳಿಕೆ: ಭೀಮಪ್ಪ ಗಡಾದ ಆರೋಪ

ಸಂಯುಕ್ತ ಟೈಮ್ಸ್, ಬೆಳಗಾವಿ:  ಪ್ರಭಾವಿ ರಾಜಕಾರಣಿಗಳ ಬೆಂಬಲದಿಂದ ಜಿಲ್ಲೆಯಲ್ಲಿ 762 ಎಕರೆ 20 ಗುಂಟೆ ಸರ್ಕಾರಿ ಭೂಮಿಯನ್ನು ಕಬಳಿಕೆ ಮಾಡಲಾಗಿದೆ ಎಂದು ಮಾಹಿತಿ ಹಕ್ಕು ಕಾರ್ಯಕರ್ತ, ಉತ್ತರ ಕರ್ನಾಟಕ ಹೋರಾಟ ಸಮಿತಿ ಅಧ್ಯಕ್ಷ ಭೀಮಪ್ಪ ಗಡಾದ ಆರೋಪಿಸಿದರು. ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ…

ಟ್ರ್ಯಾಕ್ಟರ್‌ಗಳಲ್ಲಿ ಅತಿಯಾದ ಸೌಂಡ್ ಬಳಸಿ ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡುತ್ತಿದ್ದ ಚಾಲಕರಿಗೆ ಬಿಸಿ ಮುಟ್ಟಿಸಿದ ಪೊಲೀಸರು

ಸಂಯುಕ್ತ ಟೈಮ್ಸ್, ಬೆಳಗಾವಿ: ಟ್ರ್ಯಾಕ್ಟರ್‌ಗಳಲ್ಲಿ ಅತಿಯಾದ ಸೌಂಡ್ ಬಳಸಿ ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡುತ್ತಿದ್ದ ಚಾಲಕರಿಗೆ ಬೆಳಗಾವಿ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ಬೆಳಗಾವಿ ಜಿಲ್ಲೆಯಾದ್ಯಂತ ಎಲ್ಲ ಸಕ್ಕರೆ ಕಾರ್ಖಾನೆಗಳಲ್ಲಿ ಕಬ್ಬು ನುರಿಸುವ ಪ್ರಕ್ರಿಯೆ ಆರಂಭವಾಗಿದೆ. ಜಮೀನಿನಿಂದ ಕಾರ್ಖಾನೆಗೆ ಕಬ್ಬು ಒಯ್ಯುವ ಟ್ರ್ಯಾಕ್ಟರ್‌ಗಳಲ್ಲಿ ಚಾಲಕರು…

EVMನಲ್ಲಿ ಅಡ್ಜಸ್ಟ್‌ಮೆಂಟ್‌, ಒಂದು ಕಡೆ ಕೊಡ್ತಾರೆ, ಇನ್ನೊಂದು ಕಡೆ ಕಸಿದುಕೊಳ್ತಾರೆ: ಸಚಿವ ಸತೀಶ್‌ ಜಾರಕಿಹೊಳಿ

ಸಂಯುಕ್ತ ಟೈಮ್ಸ್, ಬೆಳಗಾವಿ: ಸಚಿವ ಸತೀಶ್ ಜಾರಕಿಹೊಳಿಯವರು ಮಹಾರಾಷ್ಟ್ರದಲ್ಲಿ ಮಹಾ ವಿಕಾಸ್ ಅಘಾಡಿ ಒಕ್ಕೂಟಕ್ಕೆ ಸೋಲಾದ ಬೆನ್ನಲ್ಲೇ EVM ಮೇಲೆ ಸಂಶಯ ವ್ಯಕ್ತಪಡಿಸಿದ್ದಾರೆ. ಬೆಳಗಾವಿಯ ಕಾಂಗ್ರೆಸ್ ಭವನದಲ್ಲಿ ಅವರು ಸುದ್ದಿಗೋಷ್ಠಿ ನಡೆಸಿದರು. ಈ ವೇಳೆ, ಮಹಾ ವಿಕಾಸ್ ಅಘಾಡಿಗೆ ಸೋಲಾಗಿದೆ. ಇವಿಎಂ ಮಷೀನ್…

ಕನ್ನಡ ಭಾಷೆಯ ಉಳಿವಿಗಾಗಿ ನಾವೆಲ್ಲರೂ ಒಗ್ಗಟ್ಟಿನ ಹೋರಾಟ ಮಾಡಬೇಕು: ಶಾಸಕ ಬಾಲಚಂದ್ರ ಜಾರಕಿಹೊಳಿ

ಸಂಯುಕ್ತ ಟೈಮ್ಸ್, ಮೂಡಲಗಿ: ಕನ್ನಡ ಭಾಷೆಯು ನಮ್ಮ ಮಾತೃಭಾಷೆಯಾಗಿದ್ದು, ಕನ್ನಡ ಭಾಷೆಯ ಉಳಿವಿಗಾಗಿ ನಾವೆಲ್ಲರೂ ಒಗ್ಗಟ್ಟಿನ ಹೋರಾಟ ಮಾಡಬೇಕಿದೆ. ಕನ್ನಡ ನಾಡು, ನುಡಿ, ನೆಲ, ಜಲ, ಭಾಷಾ ವಿಷಯಗಳು ಬಂದರೆ ಯಾವ ಹಿಂಜರಿಕೆ ನೋಡದೇ ಒಗ್ಗಟ್ಟಿನ ಮಂತ್ರ ಜಪಿಸಬೇಕು. ಯಾರ ಮುಲಾಜು…

ಡಿಸೆಂಬರ್ 9 ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಪ್ರಾರಂಭ

ಸಂಯುಕ್ತ ಟೈಮ್ಸ್, ಬೆಂಗಳೂರು: ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನಕ್ಕೆ ದಿನಾಂಕ ನಿಗದಿಯಾಗಿದೆ. ಡಿಸೆಂಬರ್ 9 ರಿಂದ ಆರಂಭವಾಗಲಿರುವ ವಿಧಾನಮಂಡಲದ ಅಧಿವೇಶನ ಡಿ.20ವರೆಗೆ ನಡೆಯಲಿದೆ. ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಇಲಾಖೆಯು ಅಧಿವೇಶನ ಕರೆಯುವ ಸಂಬಂಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‍ ಅವರಿಗೆ…

SDA ರುದ್ರಣ್ಣ ಯಡವಣ್ಣನವರ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್‌: ಇದು ಕೊಲೆ ಎಂದ ಅನಾಮಧೇಯ ಪತ್ರ ವೈರಲ್

ಸಂಯುಕ್ತ ಟೈಮ್ಸ್, ಬೆಳಗಾವಿ: ಬೆಳಗಾವಿ ತಹಶೀಲ್ದಾರ ಕಚೇರಿಯಲ್ಲಿ SDA ರುದ್ರಣ್ಣ ಯಡವಣ್ಣನವರ ಆತ್ಮಹತ್ಯೆ ಪ್ರಕರಣ ದೊಡ್ಡ ತಿರುವು ಪಡೆದುಕೊಂಡಿದೆ. ರುದ್ರೇಶ್ ಆತ್ಮಹತ್ಯೆ ಮಾಡಿಕೊಂಡಿಲ್ಲ, ಇದೊಂದು ಕೊಲೆ ಎಂದು ಅನಾಮಧೇಯ ಪತ್ರವೊಂದು ಬಂದಿದ್ದು, ಇದು ತೀವ್ರ ಗೊಂದಲವನ್ನು ಸೃಷ್ಟಿಸಿದೆ. ಪ್ರಕರಣದ ಎ1 ತಹಶೀಲ್ದಾರ…

ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಬೆಂಬಲಿಗ ಅಪ್ಪಾಸಾಹೇಬ ಕುಲಗುಡೆಗೆ ಒಲಿದ ಬೆಳಗಾವಿ ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಪಟ್ಟ

ಸಂಯುಕ್ತ ಟೈಮ್ಸ್, ಬೆಳಗಾವಿ:  ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಈ ಬಾರಿ ಹೊಸಬರಿಗೆ ಅವಕಾಶ ನೀಡಿದ್ದೇವೆ. ಭವಿಷ್ಯದ ದೃಷ್ಟಿಯಿಂದ ಅಳೆದು ತೂಗಿ ಸರ್ವಾನುಮತದಿಂದ ಅಪ್ಪಾಸಾಹೇಬ ಕುಲಗುಡೆ ಅವರನ್ನು ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ‌ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ…

ಲೋಕಾಯುಕ್ತ ಅಧಿಕಾರಿಗಳಿಂದ ಭ್ರಷ್ಟ ತಿಮಿಂಗಿಲುಗಳ ಭರ್ಜರಿ ಬೇಟೆ: ಲೋಕಾಯುಕ್ತ ದಾಳಿಗೆ ಒಳಗಾದ ತಲಾಟಿ ಸೇರಿ ಇಬ್ಬರು ಅಧಿಕಾರಿಗಳು ಕೋಟಿ ಕುಳಗಳು

ಸಂಯುಕ್ತ ಟೈಮ್ಸ್, ಬೆಳಗಾವಿ: ಜಿಲ್ಲೆಯ ಮೂವರು ಅಧಿಕಾರಗಳ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಮಹತ್ವದ ದಾಖಲೆ ವಶಪಡಿಸಿಕೊಂಡಿದ್ದಾರೆ. ಸದ್ಯ ದಾಳಿಗೊಳಗಾದ ಮೂವರು ಅಧಿಕಾರಿಗಳು ಕೋಟಿ ಕುಳಗಳು ಎಂದು ತಿಳಿದುಬಂದಿದೆ. ನಿಪ್ಪಾಣಿ ತಾಲೂಕಿನ ಬೋರಗಾಂವ ಗ್ರಾಮದ ಗ್ರಾಮ ಲೆಕ್ಕಾಧಿಕಾರಿ ವಿಠಲ ಡವಳೇಶ್ವರ,…

SDA ರುದ್ರಣ್ಣ ಯಡವಣ್ಣನವರ ಆತ್ಮಹತ್ಯೆ ಪ್ರಕರಣ:  ತಹಶೀಲ್ದಾರ ಕಿರುಕುಳ ನೀಡುತ್ತಿದ್ದರೆಂದು ಪೊಲೀಸರ ವಿಚಾರಣೆ ವೇಳೆ ಆರೋಪ ಮಾಡಿದ ನೌಕರರು

ಸಂಯುಕ್ತ ಟೈಮ್ಸ್, ಬೆಳಗಾವಿ: ಇತ್ತೀಚೆಗೆ ತಹಶೀಲ್ದಾರ ಬಸವರಾಜ ನಾಗರಾಳ ಅವರ ಅಧಿಕೃತ ಕೊಠಡಿಯಲ್ಲಿ SDA ರುದ್ರಣ್ಣ ಯಡವಣ್ಣನವರ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ತಹಶೀಲ್ದಾರ ಕಚೇರಿಯಲ್ಲಿ ಕೆಲಸ ಮಾಡುವ ಹಲವಾರು ನೌಕರರು ಪೊಲೀಸರ ವಿಚಾರಣೆ ವೇಳೆ ತಹಶೀಲ್ದಾರ ಕಿರುಕುಳ ನೀಡುತ್ತಿದ್ದಾಗಿ…

SDA ರುದ್ರಣ್ಣ ಯಡವಣ್ಣನವರ ಆತ್ಮಹತ್ಯೆ ಪ್ರಕರಣ:  ತನಿಖಾಧಿಕಾರಿ ಬದಲಾವಣೆ ಹಾಗೂ ಆರೋಪಿಗಳನ್ನು ಬಂಧಿಸದಂತೆ ಪೊಲೀಸರ ಮೇಲೆ ರಾಜಕೀಯ ಒತ್ತಡ

ಸಂಯುಕ್ತ ಟೈಮ್ಸ್, ಬೆಳಗಾವಿ: ಬೆಳಗಾವಿ ತಹಶೀಲ್ದಾರ ಕಚೇರಿಯಲ್ಲಿ SDA ರುದ್ರಣ್ಣ ಯಡವಣ್ಣನವರ ಆತ್ಮಹತ್ಯೆಗೆ ಶರಣಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರ ವಿರುದ್ಧ FIR ದಾಖಲಾಗಿದ್ದು, ಮೂವರು ನಾಪತ್ತೆಯಾಗಿದ್ದಾರೆ. ತಹಶೀಲ್ದಾರ ಬಸವರಾಜ ನಾಗರಾಳ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ PA ಸೋಮು ಹಾಗೂ FDA ಅಶೋಕ್ ಕಗ್ಗಲಿಗೇರ್…

You missed

error: Content is protected !!