ಮತ್ತೆ ಮುನ್ನಲೆಗೆ ಬಂದ ಕಾಂಗ್ರೆಸ್ನಲ್ಲಿ ಮೂವರು ಉಪಮುಖ್ಯಮಂತ್ರಿಗಳನ್ನು ಮಾಡುವ ವಿಚಾರ: ಸಚಿವ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ದಲಿತ ಮುಖಂಡರುಗಳು ದೆಹಲಿಗೆ ಪ್ರಯಾಣ!
ಸಂಯುಕ್ತ ಟೈಮ್ಸ್, ಬೆಂಗಳೂರು: ಕಾಂಗ್ರೆಸ್ನಲ್ಲಿ ಮೂವರು ಉಪಮುಖ್ಯಮಂತ್ರಿಗಳನ್ನು ಮಾಡುವ ವಿಚಾರ ಮತ್ತೆ ಮುನ್ನಲೆಗೆ ಬಂದಿದೆ. ಲೋಕಸಭಾ ಚುನಾವಣೆಗೂ ಮುನ್ನ ಮೂವರು ಉಪಮುಖ್ಯಮಂತ್ರಿಗಳನ್ನು ನೇಮಕ ಮಾಡುವಂತೆ ಹೈಕಮಾಂಡ್ ಮೇಲೆ ಒತ್ತಡ ಹೇರಲು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ದಲಿತ ಮುಖಂಡರುಗಳು ದೆಹಲಿಗೆ ತೆರಳಿದ್ದಾರೆ…

