Category: ಬೆಳಗಾವಿ

ಕೇಂದ್ರ ಸರ್ಕಾರದ ಬಜೆಟ್ ತೆರಿಗೆ ಸ್ನೇಹಿ:  ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಶ್ಲಾಘನೆ

ಸಂಯುಕ್ತ ಟೈಮ್ಸ್, ಗೋಕಾಕ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಬಜೆಟ್ ತೆರಿಗೆ ಸ್ನೇಹಿ ಆಗಿದೆ ಎಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅಭಿಪ್ರಾಯಪಟ್ಟರು. ದೇಶದಲ್ಲಿ ಕೋಟ್ಯಂತರ ಉದ್ಯೋಗ ಸೃಷ್ಟಿ, ಹೊಸ ರೈಲ್ವೆ ಯೋಜನೆಗಳ ಘೋಷಣೆ, ಹೈದರಾಬಾದ್ ಬೆಂಗಳೂರು…

ಮೂಢನಂಬಿಕೆ ಒಳಗಾಗಿ ತನ್ನ ಇಬ್ಬರು ಮಕ್ಕಳನ್ನು ಕೊಂದ ತಂದೆಗೆ  ಜೀವಾವಧಿ ಶಿಕ್ಷೆ ಹಾಗೂ 20,000 ದಂಡ ವಿಧಿಸಿದ ನ್ಯಾಯಾಲಯ  

ಸಂಯುಕ್ತ ಟೈಮ್ಸ್, ಬೆಳಗಾವಿ: ಮೂಢನಂಬಿಕೆ ಒಳಗಾಗಿ ಸ್ವಂತ ಇಬ್ಬರು ಮಕ್ಕಳನ್ನು ಕೊಂದು ಜೈಲು ಪಾಲಾಗಿದ್ದ ಆರೋಪಿಗೆ ಕಠಿಣ ಜೀವಾವಧಿ ಶಿಕ್ಷೆ ವಿಧಿಸಿ 6 ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ. ಬೆಳಗಾವಿ ನಗರದ ಕಂಗ್ರಾಳಿ ಕೆ.ಹೆಚ್ ಗ್ರಾಮದ…

ಅಕ್ರಮ ಸಂಬಂಧದ ಶಂಕೆ:  ಮಾರಕಾಸ್ತ್ರಗಳಿಂದ‌ ಕೊಚ್ಚಿ ಯುವಕನ ಬರ್ಬರವಾಗಿ  ಹತ್ಯೆ ಮಾಡಿದ ಗಂಡ

ಸಂಯುಕ್ತ ಟೈಮ್ಸ್, ಮೂಡಲಗಿ: ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಲಕ್ಷ್ಮೇಶ್ವರ ಸಮೀಪ ಮಾರಕಾಸ್ತ್ರಗಳಿಂದ‌ ಕೊಚ್ಚಿ ಯುವಕನನ್ನು ಬರ್ಬರ ಹತ್ಯೆ ಮಾಡಿದ ಘಟನೆ ನಡೆದಿದೆ. ಕೊಲೆಯಾದ ದುರ್ದೈವಿ ಲಕ್ಷ್ಮೇಶ್ವರ ನಿವಾಸಿಯಾದ ಯಾಸಿನ್‌ ಮೋಮಿನ್ (28) ಎಂದು ತಿಳಿದು ಬಂದಿದೆ. ವ್ಯಕ್ತಿಯೋರ್ವ ಯಾಸಿನ್‌ ಮೋಮಿನ್‌…

ಗೋಕಾಕ: ಸಿಡಿಮದ್ದು ಸ್ಫೋಟದಲ್ಲಿ ವ್ಯಕ್ತಿ ಸಜೀವ ದಹನ

ಸಂಯುಕ್ತ ಟೈಮ್ಸ್, ಗೋಕಾಕ: ಸಿಡಿಮದ್ದು ತಯಾರಿಸುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಸ್ಪೋಟಗೊಂಡ ಪರಿಣಾಮ ವ್ಯಕ್ತಿಯೋರ್ವ ಬೆಂಕಿಯಲ್ಲಿ ಸಜೀವ ದಹನವಾಗಿರುವ ಘಟನೆ ಪಾಮಲದಿನ್ನಿ‌ ಗ್ರಾಮದಲ್ಲಿ ನಡೆದಿದೆ. ಜಿಲ್ಲೆಯ ಗೋಕಾಕ ತಾಲೂಕಿನ ಪಾಮಲದಿನ್ನಿ‌ ಗ್ರಾಮದಲ್ಲಿ ನಡೆದ ಸ್ಪೋಟದಲ್ಲಿ ಮಲ್ಲಪ್ಪ ಸತ್ಯಪ್ಪ ಕಂಕಣವಾಡಿ (38 ) ಮೃತಪಟ್ಟಿದ್ದಾರೆ.…

ರಾಮದುರ್ಗ: ಗ್ರಾಮ ಲೆಕ್ಕಾಧಿಕಾರಿ ಕಾರಿನಲ್ಲಿ 1 ಕೋಟಿ 10 ಲಕ್ಷ ಹಣ ಪತ್ತೆ: ಆದಾಯ ತೆರಿಗೆ ಅಧಿಕಾರಿಗಳಿಗೆ ಪ್ರಕರಣ ಹಸ್ತಾಂತರ

ಸಂಯುಕ್ತ ಟೈಮ್ಸ್,ರಾಮದುರ್ಗ: ಗ್ರಾಮ ಲೆಕ್ಕಾಧಿಕಾರಿ ದಾಖಲೆ ಇಲ್ಲದೆ ಕಾರಿನಲ್ಲಿ 1 ಕೋಟಿ 10 ಲಕ್ಷ ಹಣ ಸಾಗಿಸುತ್ತಿದ್ದ ಸಂದರ್ಭದಲ್ಲಿ ರಾಮದುರ್ಗ ಪೊಲೀಸರ ಬಲೆಗೆ ಬಿದ್ದಿದ್ದಾನೆ.‌ ಶುಕ್ರವಾರ ಬೆಳಿಗ್ಗೆ ನಿಪ್ಪಾಣಿ ತಾಲೂಕಿನ ಬೋರಗಾಂವ ಗ್ರಾಮದ ಗ್ರಾಮ ಲೆಕ್ಕಾಧಿಕಾರಿ ವಿಠ್ಠಲ ಢವಳೇಶ್ವರ ತನ್ನ ಕಾರಿನಲ್ಲಿ…

ಗೋಕಾಕ ಮತ್ತು ಮೂಡಲಗಿ: ಭ್ರೂಣಲಿಂಗ ಪತ್ತೆ, ಗರ್ಭಪಾತ ಮಾಡುತ್ತಿದ್ದ ಎರಡು ಆಸ್ಪತ್ರೆಗಳ ಇಬ್ಬರು ವೈದ್ಯರು ಮತ್ತು ಒಬ್ಬ ಏಜೆಂಟ್‌ ವಶಕ್ಕೆ

ಸಂಯುಕ್ತ ಟೈಮ್ಸ್, ಬೆಳಗಾವಿ: ಜಿಲ್ಲೆಯ ಗೋಕಾಕ ನಗರ ಹಾಗೂ ಮೂಡಲಗಿ ಪಟ್ಟಣದಲ್ಲಿ ಭ್ರೂಣಲಿಂಗ ಪತ್ತೆ ಹಾಗೂ ಗರ್ಭಪಾತ ಮಾಡುತ್ತಿದ್ದ ಎರಡು ಆಸ್ಪತ್ರೆಗಳನ್ನು ಬೆಂಗಳೂರಿನ ವಿಶೇಷ ಅಧಿಕಾರಿಗಳ ತಂಡ ಸೋಮವಾರ ಬಂದ್ ಮಾಡಿದೆ. ಇಬ್ಬರು ವೈದ್ಯರು ಮತ್ತು ಒಬ್ಬ ಏಜೆಂಟ್‌ನನ್ನು ವಶಕ್ಕೆ ಪಡೆಯಲಾಗಿದೆ.…

ನಕಲಿ ದಾಖಲೆ ಸೃಷ್ಟಿಸಿ 132 ಕೋಟಿ ರೂ. ತೆರಿಗೆ ವಂಚನೆ: ಆರೋಪಿ ಬಂಧನ

ಸಂಯುಕ್ತ ಟೈಮ್ಸ್, ಬೆಳಗಾವಿ: ನಕಲಿ ದಾಖಲೆ ಸೃಷ್ಟಿಸಿ 132 ಕೋಟಿ ರೂಪಾಯಿ ತೆರಿಗೆ ವಂಚನೆ ಮಾಡುತ್ತಿದ್ದ ಪ್ರಕರಣವನ್ನು ಬೇಧಿಸಿರುವ ಕೇಂದ್ರ ಜಿಎಸ್ಟಿ ಇಲಾಖೆಯ ಬೆಳಗಾವಿ ವಿಭಾಗದ ಅಧಿಕಾರಿಗಳು ಪ್ರಕರಣದ ಪ್ರಮುಖ ಆರೋಪಿಯನ್ನು ಗುರುವಾರ ಬಂಧನಕ್ಕೊಳಪಡಿಸಿದ್ದಾರೆ. ಫೆಡರಲ್ ಲಾಜಿಸ್ಟಿಕ್ಸ್ ಮಾಲೀಕ ನಕೀಬ್ ನಜೀಬ್…

ಜಿಲ್ಲೆಯಲ್ಲಿ ಡೆಂಗ್ಯೂ ಜ್ವರದ ನಿಯಂತ್ರಣಕ್ಕೆ ಅಗತ್ಯ ಕ್ರಮವಹಿಸಿ:  ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ

ಸಂಯುಕ್ತ ಟೈಮ್ಸ್, ಬೆಳಗಾವಿ: ಸುವರ್ಣ ಸೌಧದಲ್ಲಿ ಶುಕ್ರವಾರ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ  ಅವರ ಅಧ್ಯಕ್ಷತೆಯಲ್ಲಿ 2024-25ನೇ ಸಾಲಿನ ಪ್ರಥಮ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆ.ಡಿ.ಪಿ) ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಚಿಕ್ಕೋಡಿಯಲ್ಲಿ ನಿರ್ಮಾಣವಾದಂತಹ ತಾಯಿ ಮಕ್ಕಳ ಆಸ್ಪತ್ರೆಯನ್ನು ಬರುವ ಆಗಸ್ಟ್ 15 ರಂದು…

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಕುಂಠಿತ: ಶಾಸಕ ರಮೇಶ ಜಾರಕಿಹೊಳಿ

ಸಂಯುಕ್ತ ಟೈಮ್ಸ್, ಅಥಣಿ: ಕಾಂಗ್ರೆಸ್ ಸರ್ಕಾರ ದಿವಾಳಿಯಾಗಿದೆ, SC ಮತ್ತು ST ಸಮುದಾಯಕ್ಕೆ ಮೀಸಲಿಟ್ಟ ಹಣವನ್ನು ಗ್ಯಾರಂಟಿ ಯೋಜನೆಗೆ ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಬಡವರ ಅಭಿವೃದ್ಧಿಗೆ ಇಟ್ಟಿರುವ ಹಣವನ್ನು ಸರ್ಕಾರ ಬಳಕೆ ಮಾಡಿಕೊಳ್ಳುತ್ತಿದೆ. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಕುಂಠಿತವಾಗಿದ್ದು ರಾಜ್ಯದ…

ಆದಾಯಕ್ಕಿಂದ ಹೆಚ್ಚಿನ ಆಸ್ತಿ ಗಳಿಕೆ ಆರೋಪ:  ಬೆಳಗಾವಿ ಜಿಲ್ಲಾ ಪಂಚಾಯತ AEE ಮನೆ ಮೇಲೆ ಲೋಕಾಯುಕ್ತ ದಾಳಿ

ಸಂಯುಕ್ತ ಟೈಮ್ಸ್, ಬೆಳಗಾವಿ: ಆದಾಯಕ್ಕಿಂದ ಹೆಚ್ಚಿನ ಆಸ್ತಿಗಳಿಗೆ ಮಾಡಿರುವ ಆರೋಪದ ಮೇರೆಗೆ ಬೆಳಗಾವಿ ಜಿಲ್ಲಾ ಪಂಚಾಯತ AEE ಮಹಾದೇವ ಬನ್ನೂರ ಮನೆಯ ಮೇಲೆ ಗುರುವಾರ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಮಹತ್ವದ ದಾಖಲೆ ಪರಿಶೀಲನೆ ನಡೆಸಿದ್ದಾರೆ. ಬೆಳಗಾವಿ ತಾಲೂಕಿನ ಯಳ್ಳೂರ…

You missed

error: Content is protected !!