Spread the love

ಸಂಯುಕ್ತ ಟೈಮ್ಸ್, ಅಯೋಧ್ಯೆ: ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ನಿರ್ಮಿಸಲಾಗಿರುವ ರಾಮಮಂದಿರದಲ್ಲಿಂದು ರಾಮಲಲ್ಲಾ ಪ್ರಾಣಪ್ರತಿಷ್ಠೆ ನೆರವೇರಲಿದೆ. ಈಗಾಗಲೇ ರಾಮಲಲ್ಲಾಗೆ 114 ಕ್ಷೇತ್ರಗಳಿಂದ ತರಿಸಲಾಗಿದ್ದ ನೀರಿನಿಂದ ಮೊದಲ ಮಜ್ಜನ ಮಾಡಿಸಲಾಗಿದೆ.

ರಾಮಮಂದಿರದ 500 ವರ್ಷಗಳ ಕನಸು ಈಗ ನನಸಾಗುತ್ತಿರುವ ಕಾರಣ ಕೋಟ್ಯಂತರ ಭಾರತೀಯರು ಉದ್ಘಾಟನೆಗಾಗಿ ಕಾಯುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಪ್ರಾಣ ಪ್ರತಿಷ್ಠಾಪನೆ ನೆರವೇರಿಸಲಿದ್ದು, ಸೋಮವಾರ ಸುಮಾರು 5 ಗಂಟೆ ಮೋದಿ ಅವರು ಅಯೋಧ್ಯೆಯಲ್ಲಿಯೇ ಕಾಲ ಕಳೆಯಲಿದ್ದಾರೆ.

ಅಯೋಧ್ಯೆಯ ಗರ್ಭಗುಡಿ ಪ್ರವೇಶಿಸಿರುವ ರಾಮಲಲ್ಲಾ ಮೂರ್ತಿಗೆ ಸೋಮವಾರ ಮೊದಲ ಬಾರಿಗೆ ಸ್ನಾನ ಮಾಡಿಸಲಾಗಿದೆ. ಸುಮಾರು 114 ತೀರ್ಥಕ್ಷೇತ್ರಗಳಿಂದ ತಂದ ನೀರಿನಲ್ಲಿ ರಾಮಲಲ್ಲಾ ಮೂರ್ತಿಗೆ ಮಹಾಮಜ್ಜನ ಮಾಡಿಸಲಾಗಿದೆ. 

Leave a Reply

Your email address will not be published. Required fields are marked *

You missed

error: Content is protected !!