ಸಂಯುಕ್ತ ಟೈಮ್ಸ್, ಬೆಳಗಾವಿ: ಡಿವೈಡರ್ಗೆ ಡಿಕ್ಕಿಯಾದ ಪರಿಣಾಮ ಕಾಂಕ್ರೀಟ್ ಮಿಕ್ಸರ್ ಲಾರಿಯೊಂದು ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಘಟನೆ ಬೆಳಗಾವಿಯ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಬಳಿ ನಡೆದಿದೆ, ಅದೃಷ್ಟವಶಾತ ಸಾವಿನ ದವಡೆಯಿಂದ ಕಾರಿನಲ್ಲಿದ್ದ ಇಬ್ಬರು ಪಾರಾಗಿದ್ದಾರೆ.

ರಾಮದುರ್ಗ ತಾಲೂಕಿನ ಬಾಗೋಜಿಕೊಪ್ಪದ ನಿವಾಸಿಗಳಾದ ಪರಪ್ಪ ಮತ್ತು ನಾಗಪ್ಪ ಎಂಬುವವರು ಇಂದು ಬೆಳಗ್ಗೆ ತಮ್ಮ ವ್ಯಾಗನರ್ ಕಾರನ್ನು ಸರ್ವಿಸ್ ಮಾಡಿಸಬೇಕು ಎಂದು ಬೆಳಗಾವಿಗೆ ಬರುತ್ತಿದ್ದರು.
ಈ ಸಂದರ್ಭದಲ್ಲಿ ಸರ್ವಿಸ್ ರಸ್ತೆಯಲ್ಲಿ ಬರುತ್ತಿದ್ದ ಕಾಂಕ್ರೀಟ್ ಮಿಕ್ಸರ್ ಲಾರಿಯೊಂದು ಡಿವೈಡರ್ಗೆ ಡಿಕ್ಕಿಯಾಗಿ ಕಾರಿನ ಮೇಲೆ ಬಿದ್ದಿದೆ. ಲಾರಿ ಬಿದ್ದ ರಭಸಕ್ಕೆ ಕಾರು ಸಂಪೂರ್ಣ ಜಖಂ ಆಗಿದ್ದು ಅದೃಷ್ಟವಶಾತ್ ಕಾರಿನಲ್ಲಿದ್ದ ಪರಪ್ಪ, ನಾಗಪ್ಪ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

