Spread the love

ಸಂಯುಕ್ತ ಟೈಮ್ಸ್, ಬೆಂಗಳೂರು: ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ದರ್ಶನ್‌ಗೆ ಇಂದು 6 ವಾರಗಳ ಕಾಲ ಮಧ್ಯಂತರ ಜಾಮೀನು ಸಿಕ್ಕ ಬೆನ್ನಲ್ಲೇ ಬಳ್ಳಾರಿ ಜೈಲಿನಿಂದ ರಿಲೀಸ್ ಆಗಿದ್ದಾರೆ.

ಬೆನ್ನು ನೋವಿನಿಂದ ಬಳುತ್ತಿದ್ದ ದರ್ಶನ್‌ಗೆ ಚಿಕಿತ್ಸೆಗಾಗಿ 6 ವಾರಗಳ ಕಾಲ ಬೇಲ್ ಸಿಕ್ಕಿದೆ. ಈ ಹಿನ್ನೆಲೆ ಕುಂಟುತ್ತಲೇ ದರ್ಶನ್ ಹೈ ಸೆಕ್ಯೂರಿಟಿ ಸೆಲ್‌ನಿಂದ ಹೊರಬಂದಿದ್ದಾರೆ. 5 ತಿಂಗಳುಗಳ ಕಾನೂನು ಸಮರ ನಂತರ ಇಂದು ದರ್ಶನ್ ಬಿಡುಗಡೆಯಾಗಿದ್ದಾರೆ. ಈ ವೇಳೆ, ದರ್ಶನ್ ನೋಡಲು ಸಾವಿರಾರು ಸಂಖ್ಯೆ ನಟನ ಫ್ಯಾನ್ಸ್ ಜೈಲಿನ ಬಳಿ ಜಮಾಯಿಸಿದ್ದರು.

ಅಂದಹಾಗೆ, ಜೂನ್ 11ರಂದು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ನ್ಯಾಯಾಂಗ ಬಂಧನದಲ್ಲಿದ್ದರು.

Leave a Reply

Your email address will not be published. Required fields are marked *

You missed

error: Content is protected !!