Spread the love

ಸಂಯುಕ್ತ ಟೈಮ್ಸ್, ಬೆಳಗಾವಿ: ಲೋಕಸಭೆ ಚುನಾವಣೆ ಪೂರ್ಣಗೊಂಡ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಪತನಗೊಳ್ಳುವ ಸಾಧ್ಯತೆಗಳಿವೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರು ಗುರುವಾರ ಹೇಳಿದರು.

ಬೆಳಗಾವಿಯಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಇದು ನನ್ನ ಕೊನೆಯ ಚುನಾವಣೆ ಎಂದು ಕಳೆದ 10 ವರ್ಷಗಳಿಂದ ಹೇಳುತ್ತಿದ್ದಾರೆ. ಇದು ರಾಜಕೀಯದ ಗಿಮಿಕ್ ಎಂದು ಟೀಕಿಸಿದ ಅವರು, ಚುನಾವಣೆ ಬಳಿಕ ಕಾಂಗ್ರೆಸ್ ಸರ್ಕಾರ ಪತನಗೊಳ್ಳಲಿದೆ ಎಂದು ಭವಿಷ್ಯ ನುಡಿದರು.

ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದ ರಾಜ್ಯದ ಅಭಿವೃದ್ಧಿ ಕಾಮಗಾರಿಗಳು ಸ್ಥಗಿತಗೊಂಡಿವೆ. ಕಾಂಗ್ರೆಸ್‌ ಶಾಸಕರೇ ಸರ್ಕಾರದ ವಿರುದ್ಧ ಧ್ವನಿ ಎತ್ತುತ್ತಿದ್ದಾರೆ. ಅಲ್ಲಿಯೇ ಬಿಡಾರ ಹೂಡಿ ಮೈಸೂರು ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸುವ ನಿಟ್ಟಿನಲ್ಲಿ ಪ್ರಚಾರ ನಡೆಸಿದ್ದಾರೆ. ಲೋಕಸಭೆ ಚುನಾವಣೆ ಜಾತಿ, ಸಮಾಜದ ಮೇಲೆ ನಡೆಯದು. ರಾಷ್ಟ್ರೀಯ ವಿಚಾರಧಾರೆ ಹಾಗೂ ಮೋದಿ ನಾಯಕತ್ವದಲ್ಲಿ ಚುನಾವಣೆ ಎದುರಿಸುತ್ತೇವೆ. ಇಂಡಿಯಾ ಮೈತ್ರಿಕೂಟಕ್ಕೆ ಪ್ರಧಾನಮಂತ್ರಿ ಅಭ್ಯರ್ಥಿ ಯಾರು ಎಂಬುದರ ಬಗ್ಗೆ ಸ್ಪಷ್ಟತೆಯೇ ಇಲ್ಲ. ಮೋದಿ ಅವರೇ ನಮ್ಮ ಗ್ಯಾರಂಟಿ. ಸರ್ಕಾರವನ್ನು ಬೀಳಸಲು ನಮಗೆ ಯಾವುದೇ ಆಪರೇಷನ್ ಕಮಲದ ಅಗತ್ಯವೇ ಇಲ್ಲ. ಏಕೆಂದರೆ, ಸರ್ಕಾರ ತಾನಾಗಿಯೇ ಪತನಗೊಳ್ಳಲಿದೆ ಎಂದು ಹೇಳಿದರು.

ಬಳಿಕ ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಪ್ರಚಾರದ ಕುರಿತು ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ, ಕೇಂದ್ರ ಸಚಿವ ನಿತಿನ್‌ ಗಡ್ಕರಿ, ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ, ಮಾಜಿ ಸಿಎಂ ಕುಮಾರಸ್ವಾಮಿ, ಮಹಾರಾಷ್ಟ್ರ ಮಾಜಿ ಸಿಎಂ ದೇವೇಂದ್ರ ಫಡ್ನವೀಸ್‌ ಅ‍ವರಿಗೆ ಆಗಮಿಸುವಂತೆ ಮನವಿ ಮಾಡಲಾಗಿದೆ. ಬೆಳಗಾವಿಯಲ್ಲಿ ಬಿಜೆಪಿ-ಜೆಡಿಎಸ್ ನಾಯಕರ ಸಮನ್ವಯ ಸಮಿತಿ ಸಭೆ ನಡೆಸಲಾಗಿದ್ದು. ಈ ಮೈತ್ರಿಯು ಬಿಜೆಪಿಗೆ ದೊಡ್ಡ ಉತ್ತೇಜನ ನೀಡಲಿದೆ ಎಂದು ತಿಳಿಸಿದರು.

Leave a Reply

Your email address will not be published. Required fields are marked *

You missed

error: Content is protected !!