Spread the love

ಸಂಯುಕ್ತ ಟೈಮ್ಸ್, ಬೆಂಗಳೂರು: 9 ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ಕಾರ್ಮಿಕ ಇಲಾಖೆ ಇನ್ಸ್ಪೆಕ್ಟರ್ ರೆಡ್‌ಹ್ಯಾಂಡಾಗಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಹೋಟೆಲ್‌ವೊಂದರ ಪರವಾನಗಿ ಕೊಡಲು ಕಾರ್ಮಿಕ ಇಲಾಖೆ ಇನ್ಸ್ಪೆಕ್ಟರ್ ಭೋಪಾಲ್ 9 ಸಾವಿರ ರೂ. ಲಂಚಕ್ಕೆ ಬೇಡಿಕೆಯಿಟ್ಟದ್ದ. ಈ ಬಗ್ಗೆ ಮಂಗಳೂರು ಮೂಲದ ಹೋಟೆಲ್ ಮಾಲೀಕ ದೀಕ್ಷಿತ್ ಅವರು ನೀಡಿದ ದೂರಿನ ಮೇರೆಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದರು.

ಲಂಚ ಪಡೆಯುತ್ತಿದ್ದಾಗಲೇ ಕಾರ್ಮಿಕ ಭವನದಲ್ಲೇ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ಈ ಸಂಬಂಧ ತನಿಖೆ ಮುಂದುವರಿದಿದೆ. 

Leave a Reply

Your email address will not be published. Required fields are marked *

You missed

error: Content is protected !!