Spread the love

ಸಂಯುಕ್ತ ಟೈಮ್ಸ್, ತುಮಕೂರು: ಕ್ರಿಮಿನಲ್‍ಗಳಿಗೆ ಪೊಲೀಸ್ ಇಲಾಖೆಯ ಮಾಹಿತಿ ರವಾನಿಸುತ್ತಿದ್ದ ಐವರು ಪೊಲೀಸ್ ಸಿಬ್ಬಂದಿಗಳನ್ನು ಅಮಾನತ್ತುಗೊಳಿಸಿ ತುಮಕೂರು SP ಕೆ.ವಿ ಅಶೋಕ್ ಆದೇಶ ಹೊರಡಿಸಿದ್ದಾರೆ.

ಕ್ಯಾತಸಂದ್ರ ಠಾಣೆಯ ಮಂಜು, ಅಹೋಬಲ ನರಸಿಂಹಮೂರ್ತಿ, ಜಯನಗರ ಠಾಣೆ ಮನು ಎಸ್.ಗೌಡ, ಸಂಚಾರ ಪೊಲೀಸ್ ಠಾಣೆ ರಾಮಕೃಷ್ಣ ಹಾಗೂ ಎಸ್ಪಿ ಕಚೇರಿಯ ಸುರೇಶ್ ಅಮಾನತ್ತುಗೊಂಡ ಪೊಲೀಸ್ ಸಿಬ್ಬಂದಿಯಾಗಿದ್ದಾರೆ. 

ಇವರು ಕ್ರಿಮಿನಲ್‍ಗಳಾದ ಮಂಜುನಾಥ್ ರೆಡ್ಡಿ, ನವೀನ್, ನರಸಿಂಹಮೂರ್ತಿ ಎಂಬವರಿಗೆ ಪೊಲೀಸ್ ಇಲಾಖೆಯ ಮಾಹಿತಿ ಸೋರಿಕೆ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ಮೂವರು ಆರೋಪಿಗಳ ವಿರುದ್ಧ ದಂಡಿನಶಿವರ ಹಾಗೂ ತಿಲಕ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಕೊಲೆಗೆ ಸಂಚು, ಹಲ್ಲೆ ಆರೋಪದ ಮೇಲೆ ಕೇಸ್ ದಾಖಲಾಗಿತ್ತು. ಈ ವಿಚಾರವಾಗಿ ವಾಟ್ಸಪ್ ಮೂಲಕ ಪೊಲೀಸರೇ ಆರೋಪಿಗಳಿಗೆ ಮಾಹಿತಿ ರವಾನಿಸಿದ್ದರು. ಮಂಜುನಾಥ್ ರೆಡ್ಡಿ ಮೊಬೈಲ್ ವಶಕ್ಕೆ ಪಡೆದು ಪರಿಶೀಲನೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You missed

error: Content is protected !!