Spread the love

ಸಂಯುಕ್ತ ಟೈಮ್ಸ್, ಬೆಳಗಾವಿ: ಕಾಲ್ತುಳಿತ ಪ್ರಕರಣದಲ್ಲಿ ಮೃತಪಟ್ಟವರ ಕುಟುಂಬಳಿಗೆ ತಲಾ 1 ಕೋಟಿ ಪರಿಹಾರ ಕೊಡಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಆಗ್ರಹಿಸಿದ್ದಾರೆ.

ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸರ್ಕಾರ ಇನ್ನೂ ಹೆಚ್ಚಿನ ಪರಿಹಾರ ಕೊಡಬೇಕು ಅಂತಾ ನಾನು ಕೂಡ ಒತ್ತಾಯ ಮಾಡ್ತೀನಿ. ಸರ್ಕಾರ ಅಷ್ಟೇ ಅಲ್ಲ ಆರ್‌ಸಿಬಿ‌ ಫ್ರಾಂಚೈಸಿ, ಕರ್ನಾಟಕ ಕ್ರಿಕೆಟ್ ಅಸೋಸಿಯೇಷನ್ ಅವರೂ ಕೊಡಬೇಕು. ಬರೀ ಹತ್ತು ಲಕ್ಷ ಅಲ್ಲ 1 ಕೋಟಿ ಪರಿಹಾರ ಕೊಡಬೇಕು ಅಂತ ಒತ್ತಾಯಿಸುತ್ತೇನೆ ಎಂದು ಹೇಳಿದ್ದಾರೆ.

ಎಷ್ಟೇ ಪರಿಹಾರ ಕೊಟ್ರೂ ಸತ್ತ ಜೀವ ವಾಪಸ್ ತರಲು ಆಗಲ್ಲ. ವಿಪಕ್ಷದವರು ಜನರ ದಿಕ್ಕು ತಪ್ಪಿಸಲು ಏನು ಮಾಡಬೇಕೋ ಅದನ್ನ ಮಾಡ್ತಾರೆ. ನಮ್ಮ ಹಿರಿಯರು ಏನೇನೋ ಉತ್ತರ ಕೊಡಬೇಕು ಕೊಡ್ತಾರೆ. ಘಟನೆಯಲ್ಲಿ ಇಂಟಲಿಜೆನ್ಸ್ ತಪ್ಪಾಗಿದ್ರೇ ತನಿಖೆಯಿಂದ ಗೊತ್ತಾಗುತ್ತೆ ಅಂತ ಹೇಳಿದ್ದಾರೆ.

Leave a Reply

Your email address will not be published. Required fields are marked *

You missed

error: Content is protected !!