ಸಂಯುಕ್ತ ಟೈಮ್ಸ್, ಗೋಕಾಕ: ರಸ್ತೆಯಲ್ಲಿ ಒಬ್ಬಂಟಿಯಾಗಿ ನಡೆದುಕೊಂಡು ಹೋಗುತ್ತಿದ್ದ ಯುವಕನನ್ನು ಶನಿವಾರ ರಾತ್ರಿ 7:45 ಸಮಯದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ ಘಟನೆ ನಡೆದಿದೆ. ಗೊಂದಳಿಗಲ್ಲಿಯ ನಿವಾಸಿಯಾದ 26 ವರ್ಷದ ಪರಶುರಾಮ ಕೊಲೆಯಾದ ದುರ್ದೈವಿ.

ಬೆಳಗಾವಿ ಜಿಲ್ಲೆಯ ಗೋಕಾಕ ನಗರದ ಹಿಲ್ ಗಾರ್ಡನ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಗೋಕಾಕನ ಗೊಂದಳಿಗಲ್ಲಿಯ ನಿವಾಸಿ ಪರಶುರಾಮ (26) ಎಂಬಾತನನ್ನು ಕಾರಿನಲ್ಲಿ ಹಿಂಬಾಲಿಸಿಕೊಂಡು ಬಂದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದಾರೆ.
ಹಳೇ ವೈಷಮ್ಯದ ಹಿನ್ನಲೆಯಲ್ಲಿ ಪರಶುರಾಮ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಈ ವಿಷಯ ತಿಳಿದು ಸ್ಥಳಕ್ಕೆ ಗೋಕಾಕ ಶಹರ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗಾಗಿ ಬಲೆ ಬಿಸಿದ್ದಾರೆ.

