Spread the love

ಸಂಯುಕ್ತ ಟೈಮ್ಸ್,  ಕಲಬುರಗಿ: ಸಾರಾಯಿ ಕುಡಿಯಲು ಹಣ ನೀಡದ್ದಕ್ಕೆ ಪತ್ನಿಯ ಮೇಲೆ ಹಲ್ಲೆ ನಡೆಸಿ, ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪತಿಗೆ ನ್ಯಾಯಾಲಯವು ಜೀವಾವಧಿ ಶಿಕ್ಷೆ ಹಾಗೂ 50 ಸಾವಿರ ರೂ. ದಂಡ ವಿಧಿಸಿ ಆದೇಶ ಪ್ರಕಟಿಸಿದೆ.

ಜೇವರ್ಗಿ ತಾಲೂಕಿನ ಕುರನಳ್ಳಿ ಗ್ರಾಮದ ಮಹಾಂತಪ್ಪ ನಿಂಗಪ್ಪ ದೊಡ್ಡಮನಿಗೆ ಕಲಬುರಗಿಯ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲವು ಜೀವಾವಧಿ ಶಿಕ್ಷೆ ವಿಧಿಸಿದೆ.

ಪ್ರಕರಣದ ಕುರಿತಾಗಿ ವಾದ-ಪ್ರತಿವಾದ ಆಲಿಸಿದ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಮಹಮ್ಮದ್ ಮುಝೀರ್ ಉಲ್ಲಾ ಅವರು ಆರೋಪಿಗೆ ಜೀವಾವಧಿ ಶಿಕ್ಷೆ ಹಾಗೂ 50 ಸಾವಿರ ರೂ. ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ. ಪ್ರಕರಣ ಕುರಿತಾಗಿ ಸರ್ಕಾರಿ ಅಭಿಯೋಜಕ ಹಯ್ಯಾಳಪ್ಪ ಎನ್. ಬಳಬಟ್ಟಿ ವಾದ ಮಂಡಿಸಿದ್ದರು.

Leave a Reply

Your email address will not be published. Required fields are marked *

You missed

error: Content is protected !!