Spread the love

ಸಂಯುಕ್ತ ಟೈಮ್ಸ್, ಬೆಂಗಳೂರು: ಲೋಕಸಭಾ ಚುನಾವಣೆ ನಿಮಿತ್ತ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಮತ್ತು ಸೋಮವಾರ ಕರ್ನಾಟಕದಲ್ಲಿ ಮತ್ತೆ ಪ್ರವಾಸ ಮಾಡಲಿದ್ದಾರೆ. ಒಟ್ಟು 2 ದಿನಗಳ ಕಾಲ ಪ್ರಧಾನಿ ಮೋದಿ ರಾಜ್ಯದಲ್ಲಿ ಪ್ರಚಾರ ಮಾಡಲಿದ್ದು, ಈ ವೇಳೆ ಐದು ಜಿಲ್ಲೆಗಳಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ರವಿವಾರ, ಸೋಮವಾರ ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಪ್ರಧಾನಿ ಅಬ್ಬರದ ಪ್ರಚಾರ ನಡೆಸಲಿದ್ದಾರೆ.

ರಾಜ್ಯದಲ್ಲಿ ಸಂಚರಿಸಲಿರುವ ನರೇಂದ್ರ ಮೋದಿ ಉತ್ತರ ಕರ್ನಾಟಕದಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚನೆ ಮಾಡಲಿದ್ದಾರೆ. ನಾಳೆ ದಾವಣಗೆರೆ, ಉತ್ತರ ಕನ್ನಡ ಮತ್ತು ಬೆಳಗಾವಿಯಲ್ಲಿ ಬಹಿರಂಗ ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಅಂದು ಬೆಳಗಾವಿಯಲ್ಲಿ ವಾಸ್ತವ್ಯ ಹೂಡಲಿದ್ದು, ಮರು ದಿನ ಕಲಬುರಗಿ, ಬಳ್ಳಾರಿ, ರಾಯಚೂರು, ಕೊಪ್ಪಳದಲ್ಲಿ ಆಯೋಜಿಸುವ ಸಾರ್ವಜನಿಕ ಸಭೆಗಳಲ್ಲಿ ಭಾಗವಹಿಸಲಿದ್ದಾರೆ.

ಎರಡನೇ ಹಂತದಲ್ಲಿ 14 ಲೋಕಸಭಾ ಕ್ಷೇತ್ರಗಳಲ್ಲಿ ಚುನಾವಣೆ ನಡೆಯಲಿದ್ದು, ಎರಡು ದಿನಗಳಲ್ಲಿ ಆ ಕ್ಷೇತ್ರಗಳ ಅಭ್ಯರ್ಥಿಗಳ ಪರ 6 ರ್ಯಾಲಿ ನಡೆಸಲಿದ್ದಾರೆ. ಮೋದಿಯ ಎರಡು ದಿನದ ಪ್ರಚಾರ ರಾಜ್ಯ ನಾಯಕರಲ್ಲಿ ಶಕ್ತಿ ತುಂಬಲಿದೆ. ಮೋದಿ ಆಗಮನ ಹಿನ್ನೆಲೆಯಲ್ಲಿ ಕೇಸರಿ ಕಲಿಗಳಲ್ಲಿ ರಣೋತ್ಸಾಹ ತುಂಬಿದೆ.

ಮೋದಿ ಅಲೆ+ ಅಭಿವೃದ್ಧಿ+ದೋಸ್ತಿ ಪ್ರಭಾವಗಳೇ ಈ ಭಾಗದಲ್ಲೂ ಬೂಸ್ಟ್ ಆಗಲಿದೆ. ಪಂಚ ಸಮಾವೇಶಗಳಲ್ಲೂ ರಾಜ್ಯ ಕಾಂಗ್ರೆಸ್ ವೈಫಲ್ಯಗಳೇ ಮೋದಿ ಬ್ರಹ್ಮಾಸ್ತ್ರಗಳಾಗಿವೆ. ಬೆಳಗಾವಿಯಲ್ಲಿ ಮೋದಿ ಒಂದು ದಿನ ವಾಸ್ತವ್ಯ ಹೂಡುವ ಮೂಲಕ ಇಲ್ಲಿಂದಲೇ ಉತ್ತರ ಕರ್ನಾಟಕ ಭಾಗದ ಚುನಾವಣೆ ರಣತಂತ್ರ ಹೆಣೆಯಲಿದ್ದಾರೆ. ಈ ಭಾಗದ ಲೋಕಸಭಾ ಕ್ಷೇತ್ರಗಳ ಚುನಾವಣಾ ರಣಕಹಳೆ ಮೊಳಗಿಸಲು ಮೋದಿ ಮಾಸ್ಟರ್ ಪ್ಲಾನ್ ಮಾಡಲಿದ್ದಾರೆ.. ಬಿಜೆಪಿಯ ಭದ್ರಕೋಟೆ ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಮತ್ತೊಮ್ಮೆ ಕಮಲ ಅರಳಿಸಲು ಗೆಲುವಿನ ಯಾತ್ರೆ ಮುಂದುವರಿಸಲಿದ್ದಾರೆ.

Leave a Reply

Your email address will not be published. Required fields are marked *

You missed

error: Content is protected !!