Spread the love

ಸಂಯುಕ್ತ ಟೈಮ್ಸ್, ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಕಡಿವಾಣ ಹಾಕಲು, ಕರ್ನಾಟಕ ಮೈಕ್ರೋ ಫೈನಾನ್ಸ್ (ದಬ್ಬಾಳಿಕೆ ಮತ್ತು ಅಮಾನವೀಯ ಕ್ರಮಗಳ ನಿಯಂತ್ರಣ) ಮಸೂದೆಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ಸರ್ಕಾರ ಸರ್ಕಸ ನಡೆಸಿದೆ. ಗುರುವಾರ ನಡೆದ ಸಂಪುಟ ಸಭೆಯು ಸುಗ್ರೀವಾಜ್ಞೆ ಹೊರಡಿಸಲು ಒಪ್ಪಿಗೆ ಸೂಚಿಸಿದೆ.

ಈ ಬೆನ್ನಲ್ಲೇ ಅಧಿಕಾರಿಗಳ ಜೊತೆ ಸಭೆ ನಡೆಸಿದ ಸಿಎಂ, ಮಸೂದೆಯ ಸಾಧಕ-ಬಾಧಕಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಸುಗ್ರೀವಾಜ್ಞೆಯಲ್ಲಿನ ಅಂಶಗಳನ್ನು ಮತ್ತೊಮ್ಮೆ ಪರಿಶೀಲಿಸಲು, ಕೆಲವು ಬದಲಾವಣೆ ಮಾಡಲು ಕಾನೂನು ಮತ್ತು ಹಣಕಾಸು ಇಲಾಖೆಯ ನಾಲ್ವರು ಹಿರಿಯ ಅಧಿಕಾರಿಗಳ ತಂಡಕ್ಕೆ ಸೂಚಿಸಿದ್ದಾರೆ. ಎಲ್ಲವೂ ಅಂದುಕೊಂಡಂತೆ ಇನ್ನೆರಡು ದಿನಗಳಲ್ಲಿ ಸರ್ಕಾರ ಸುಗ್ರೀವಾಜ್ಞೆ ಮೂಲಕ ಮಸೂದೆಯನ್ನು ಅಂಗೀಕರಿಸುವ ಸಾಧ್ಯತೆಯಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ಹೆಚ್‌.ಕೆ ಪಾಟೀಲ್‌, ಕಳೆದ ಕೆಲ ದಿನಗಳಿಂದ ಮೈಕ್ರೋ ಫೈನಾನ್ಸ್ ತೊಂದರೆ ವಿಚಾರ ಚರ್ಚೆ ಆಗಿತ್ತು. ಸಾಲ ವಸೂಲಿ ಪ್ರಕ್ರಿಯೆಯ ಘಟನೆ ನೋಡಿದರೆ ಬಹಳ ಅಮಾನವೀಯವಾಗಿ ನಡೆದಿದೆ. ಇದರಿಂದ ಆತ್ಮಹತ್ಯೆ ಕೂಡ ನಡೆದಿದೆ. ಹಾಗಾಗಿ ಮೈಕ್ರೋ ಫೈನಾನ್ಸ್‌ಗೆ ಕಡಿವಾಣ ಹಾಕಲು ಹೊಸ ಕಾನೂನು ತರುತ್ತಿದ್ದೇವೆ. ಈಗಾಗಲೇ ಮಸೂದೆ ಸಿದ್ಧವಾಗಿದ್ದು, ಮಸೂದೆಯಲ್ಲಿ ಕೆಲವು ವಿಚಾರಗಳನ್ನು ಚರ್ಚೆ ಮಾಡಿದ್ದೇವೆ ಎಂದು ತಿಳಿಸಿದರು.

Leave a Reply

Your email address will not be published. Required fields are marked *

You missed

error: Content is protected !!